ವಿಜಯಪುರ: ೨೦೨೩-೨೪ನೇ ಸಾಲಿನ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್‌ಎಸ್‌ಪಿ)ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಕರ್ನಾಟಕ ನಿವಾಸಿಯಾಗಿರಬೇಕು, ೧೦ನೇ ತರಗತಿಯ ನಂತರ ಯಾವುದೇ ಕೋರ್ಸ ಮಾಡುತ್ತಿರುವವರು ಅರ್ಜಿ ಸಲ್ಲಿ¸ಬಹುದಾಗಿದೆ. ಅಧ್ಯಯನ ಪ್ರಮಾಣ ಪತ್ರ, ಅಂಕಪಟ್ಟಿ, ಆಧಾರ ಕಾರ್ಡ, ಶುಲ್ಕ ರಶೀದಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಮೊಬೈಲ್ ಸಂಖ್ಯೆ, ಇ-ಮೇಲ್ ಐಡಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಸಮಾಜ ಕಲ್ಯಾಣ ಇಲಾಖೆ ಸಾಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಮಾಹಿತಿ ಮಡೆಯಬಹುದು ಎಂದು ವಿಜಯಪುರ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲಿಕ ಮಾನವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
