Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶೈಕ್ಷಣಿಕ ಸಂಸ್ಥೆಗಳ ಬೆಳವಣಿಗೆಗೆ ಮೌಲ್ಯಮಾಪನ ವಿಶ್ಲೇಷಣೆ ಅವಶ್ಯ
(ರಾಜ್ಯ ) ಜಿಲ್ಲೆ

ಶೈಕ್ಷಣಿಕ ಸಂಸ್ಥೆಗಳ ಬೆಳವಣಿಗೆಗೆ ಮೌಲ್ಯಮಾಪನ ವಿಶ್ಲೇಷಣೆ ಅವಶ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಶೈಕ್ಷಣಿಕ ಸಂಸ್ಥೆಗಳು ಉನ್ನತ ಮಟ್ಟದಲ್ಲಿ ಬೆಳೆಯಲು ಆಗಾಗ ಆಡಳಿತಾತ್ಮಕ ಮತ್ತು ಶೈಕ್ಷಣಿಕ ಮೌಲ್ಯಮಾಪನ ಕಾರ್ಯವೈಖರಿಯನ್ನು ವಿಶ್ಲೇಷಿಸುವುದು ಅವಶ್ಯವಾಗಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಹೇಳಿದ್ದಾರೆ.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯದ ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಇಂದು ಶುಕ್ರವಾರ ನಡೆದ ಬಿ.ಎಲ್.ಡಿ.ಇ ಅಂಗ ಸಂಸ್ಥೆಗಳ ವಾರ್ಷಿಕ ಆಡಳಿತ ಮತ್ತು ಶೈಕ್ಷಣಿಕ ಮೌಲ್ಯಮಾಪನ ಮಂಥನ-3 ಉದ್ಘಾಟಿಸಿ ಅವರು ಮಾತನಾಡಿದರು.
ಶೈಕ್ಷಣಿಕ ಗುಣಮಟ್ಟ ಸುಧಾರಿಸಲು ಬಿ.ಎಲ್.ಡಿ.ಇ ಸಂಸ್ಥೆ ಪ್ರಮಾಣಿತ ಕಾರ್ಯಾಚರಣೆ ವಿಧಾನ(ಎಸ್ಒಪಿ) ಜಾರಿಗೆ ತಂದಿದೆ. ಇದರಿಂದ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯವಾಗಿ ಸುಧಾರಣೆಯಾಗಲಿದೆ ಎಂದು ಅವರು ಹೇಳಿದರು.
ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ಬಿ.ಕೊಟ್ನಾಳ ಮಾತನಾಡಿ, ಬಿ.ಎಲ್.ಡಿ.ಇ ಅಂಗ ಸಂಸ್ಥೆಗಳಲ್ಲಿ ಎಸ್ಒಪಿ ಕಾರ್ಯವೈಖರಿಯ ಆಳವಡಿಕೆ ಮಾಡಿಕೊಳ್ಳಲಾಗಿದೆ. ಇದರಿಂದ ಶಿಕ್ಷಣದ ಧ್ಯೇಯೋದ್ದೇಶಗಳು, ಸಂಸ್ಥೆ ಹೊಂದಿರುವ ದೃಷ್ಟಿಕೋನ, ಶೈಕ್ಷಣಿಕ ಗುಣಮಟ್ಟ ಹಾಗೂ ಆಡಳಿತಾತ್ಮಕ ಸುಧಾರಣೆಯನ್ನು ಅವಲೋಕನ ಮಾಡಲು ಅನುಕೂಲವಾಗಲಿದೆ ಎಂದು ಹೇಳಿದರು.
ಎ.ವಿ.ಎಸ್ ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ಮಾತನಾಡಿ, ನಮ್ಮ ಮಹಾವಿದ್ಯಾಲಯದಲ್ಲಿ ವಾರ್ಷಿಕ ಆಡಳಿತಾತ್ಮಕ ಹಾಗೂ ಶೈಕ್ಷಣಿಕ ಪರಿವೀಕ್ಷಣೆಯನ್ನು ನ್ಯಾಕ್ ಪೂರ್ವಸಿದ್ಧತೆಗಾಗಿ ಆಯೋಜಿಸಿರುವುದು ಹೆಮ್ಮೆಯ ವಿಷಯವಾಗಿದೆ. ಇದರಿಂದ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶೈಕ್ಷಣಿಕ ಗುಣಮಟ್ಟ ಸುಧಾರಣೆಯಾಗಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಲು ಸಹಾಯಕಾರಿಯಾಗಿದೆ ಎಂದು ಹೇಳಿದರು.
ಬಿ.ಎಲ್.ಡಿ.ಇ ಸಂಸ್ಥೆಯ ನಾನಾ ವೃತ್ತಿಪರ ಹಾಗೂ ಪದವಿ ಕಾಲೇಜುಗಳ ವಾರ್ಷಿಕ, ಶೈಕ್ಷಣಿಕ ಮತ್ತು ಆಡಳಿತಾತ್ಮಕ ಮೌಲ್ಯಮಾಪನದ ಬಾಹ್ಯ ಪರಿವೀಕ್ಷಕರಾಗಿ ಹುಬ್ಬಳ್ಳಿಯ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ನಿರ್ದೇಶಕ ಡಾ. ಎ. ಅರ್. ಸೋಲಾಪುರ ಹಾಗೂ ಮಹಾರಾಷ್ಟ್ರದ ದೇವಗಿರಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಎಸ್. ಯು. ಲಹಾನೆ ಪಾಲ್ಗೊಂಡರು.
ಈ ಸಭೆಯಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ವೃತ್ತಿಪರ ಕಾಲೇಜುಗಳಾದ ಎಂಜಿನಿಯರಿಂಗ್, ಫಾರ್ಮಸಿ, ನರ್ಸಿಂಗ್, ಆಯುರ್ವೇದ ಮಹಾವಿದ್ಯಾಲಯ ಹಾಗೂ ಪದವಿ ಕಾಲೇಜುಗಳಾದ ಎಸ್. ಬಿ. ಆರ್ಟ್ಸ ಮತ್ತು ಕೆ.ಸಿ.ಪಿ ಸೈನ್ಸ್ ಕಾಲೇಜ, ಎ. ಎಸ್. ಪಾಟೀಲ ಕಾಮರ್ಸ್ ಕಾಲೇಜ, ನ್ಯೂ ಆರ್ಟ್ಸ ಮತ್ತು ಟಿ.ಜಿ.ಪಿ ಸೈನ್ಸ ಕಾಲೇಜ, ಜೆ.ಎಸ್.ಎಸ್. ಶಿಕ್ಷಣ ಮಹಾವಿದ್ಯಾಲಯ, ಬಂಗಾರಮ್ಮ ಸಜ್ಜನ ಮಹಿಳಾ ಪದವಿ ಮಹಾವಿದ್ಯಾಲಯ, ತಿಕೋಟಾದ ಕಾಮರ್ಸ್ ಕಾಲೇಜ, ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಬಿ. ಎಚ್. ಎಸ್ ಆರ್ಟ್ಸ ಮತ್ತು ಬಸವನ ಬಾಗೇವಾಡಿ ಬಸವೇಶ್ವರ ಆರ್ಟ್ಸ ಮತ್ತು ಕಾಮರ್ಸ ಕಾಲೇಜಿನ ಮಹಾವಿದ್ಯಾಲಯಗಳ ಪ್ರಾಚಾರ್ಯರು ತಮ್ಮ ಸಂಸ್ಥೆಯ ಆಡಳಿತಾತ್ಮಕ ಹಾಗೂ ಶೈಕ್ಷಣಿಕ ಗುಣಮಟ್ಟದ ಸುಧಾರಣೆಯ ವಾರ್ಷಿಕ ವರದಿಯನ್ನು ಪ್ರಸ್ತುತ ಪಡಿಸಿದರು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತಾಧಿಕಾರಿಗಳಾದ ಪ್ರೊ. ಎಸ್. ಎಚ್. ಲಗಳಿ, ಪ್ರೊ. ಕೆ. ಜಿ. ಪೂಜಾರಿ, ಪ್ರೊ. ಬಿ. ಆರ್. ಪಾಟೀಲ ಮತ್ತು ಪ್ರೊ. ಐ. ಎಸ್. ಕಾಳಪ್ಪನವರ ಉಪಸ್ಥಿತರಿದ್ದರು.
ಬಿ.ಎಲ್.ಡಿ.ಇ ಎಸ್.ಒ.ಪಿ ಸಂಚಾಲಕ ಡಾ. ರಮೇಶ ಜೀರಗಾಳ ವಂದಿಸಿದರು. ಡಾ. ಎ. ಎಂ. ಮದನಿ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.