ವಿಜಯಪುರ: ಗ್ರಾಮೀಣ ತಾಲೂಕಿನ ಕಗ್ಗೋಡ ಗ್ರಾಮದ ಸರಕಾರಿ ಆದರ್ಶ ವಿದ್ಯಾಲಯದ 2024-25 ನೇ ಸಾಲಿಗೆ ಆರನೇ ತರಗತಿ ದಾಖಲಾತಿಗೆ ಪ್ರವೇಶ ಪರೀಕ್ಷೆ ನಡೆಸಲಾಗುವುದು. 2023-24ನೇ ಸಾಲಿನಲ್ಲಿ ವಿಜಯಪುರ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವ್ಯಾಪ್ತಿಯಲ್ಲಿ ಬರುವ ಶಾಲೆಗಳಲ್ಲಿ ಐದನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಕರೆಯಲಾಗಿದೆ.
ಫೆಬ್ರುವರಿ ಆರರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಎಸ್.ಎ.ಟಿ.ಎಸ್ ನಂಬರ, ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ, ವಿದ್ಯಾರ್ಥಿಯ ಆಧಾರ್ ಕಾರ್ಡ್, ಚಾಲ್ತಿಯಲ್ಲಿರುವ ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿ ಪಾಲಕರ ಮೊಬೈಲ್ ನಂಬರ್ ನಮೂದಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮುಖ್ಯೋಪಾಧ್ಯಾಯರು 9902716236, ನೋಡಲ್ ಅಧಿಕಾರಿಗಳು 9880832448, ಕಚೇರಿ ಸಹಾಯಕರು 8971163743 ಇವರನ್ನು ಸಂಪರ್ಕಿಸಲು ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದಿನಿ ಎಸ್. ಬಳೋಲಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
