ಸಿಂದಗಿ: ತಾಲೂಕು ಮಟ್ಟದ ಜ.೨೬ರಂದು ಜರುಗಲಿರುವ ಗಣರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಮತ್ತು ವಿಜೃಂಭಣೆಯಿದ ಆಚರಣೆ ಮಾಡಲೂ ಎಲ್ಲ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕು ಆಡಳಿತ ಸೌಧದಲ್ಲಿ ಸಭಾಂಗಣದಲ್ಲಿ ಜರುಗಿದ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕು ಮಟ್ಟದ ಆಚರಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಗಳು ಪರಸ್ಪರ ಸಮನ್ವಯದೊಂದಿಗೆ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು.
ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಸರಕಾರಿ ಕಚೇರಿ, ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಚತೆಯೊಂದಿಗೆ ವಿದ್ಯುತ್ ದೀಪಾಲಂಕಾರ ಮಾಡಬೇಕು. ಕಾರ್ಯಕ್ರಮ ಸ್ಥಳದ ಸ್ವಚ್ಚತೆ ಹಾಗೂ ಅತಿಥಿಗಳಿಗೆ ಆಸನದ, ಅಲ್ಪೋಪಹಾರದ ವ್ಯವಸ್ಥೆಗೆ ಕ್ರಮ ವಹಿಸಿಬೇಕು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕಾರ್ಯಕ್ರಮದ ಕುರಿತು ಮುದ್ರಿಸಲಾಗುವ ಆಮಂತ್ರಣ ಪತ್ರಿಕೆಗಳನ್ನು ಶಿಷ್ಟಾಚಾರದ ಪ್ರಕಾರ ಮುದ್ರಿಸಿ ಗಣ್ಯರಿಗೆ ಸಮಯಕ್ಕಿಂತ ಮುಂಗಡವಾಗಿ ತಲುಪಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮ, ಮೂಲಭೂತ ಸೌಲಭ್ಯ ವ್ಯವಸ್ಥೆ, ವೇದಿಕೆ ನಿರ್ಮಾಣ ಸೇರಿದಂತೆ ಮುಂತಾದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಇದೇ ಸಂದರ್ಭದಲ್ಲಿ ಕಸಾಪ ನಿಕಟಪೂರ್ವ ತಾಲೂಕಾಧ್ಯಕ್ಷ ರಾಜಶೇಖರ ಕುಚಬಾಳ ಮಾತನಾಡಿದರು.
ಸಭೆಯಲ್ಲಿ ದೇವರ ಹಿಪ್ಪರಗಿ ತಹಶೀಲ್ದಾರ ಪ್ರಕಾಶ ಸಿಂದಗಿ, ತಾಪಂ ಇಓ ರಾಮು ಅಗ್ನಿ. ಉಪ ನೋಂದಣಾಧಿಕಾರಿ ಎಂ.ಆರ್,ಪಾಟೀಲ, ಆಯ್.ಎ.ಮಕಾಂದಾರ, ಜಿ.ಎಸ್.ರೋಡಗಿ, ಇಂದ್ರಾಬಾಯಿ ಬಳಗಾನೂರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಂಭುಲಿಂಗ ಹಿರೇಮಠ, ಕಸಾಪ ತಾಲೂಕಾಧ್ಯಕ್ಷ ಶಿವಾನಂದ ಬಡಾನೂರ, ದಸಂಸ ಜಿಲ್ಲಾ ಸಂಚಾಲಕ ವೈ.ಸಿ ಮಯೂರ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

