ವಿಜಯಪುರ: ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸಲು ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಜನೆಗಾಗಿ ಕೃಷಿಯಲ್ಲಿನ ನೂತನ ತಾಂತ್ರಿಕತೆಗಳು ಹಾಗೂ ನವೀನ ಪರಿಕಲ್ಪನೆಗಳ ವಾಣಿಜ್ಯೀಕರಣವನ್ನು ಉತ್ತೇಜಿಸಲು ಕೃಷಿ ನವೋದ್ಯಮ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಕ್ಷೇತ್ರದಲ್ಲಿ ನೂತನ ಪರಿಕಲ್ಪನೆಯೊಂದಿಗೆ ಆರಂಭಿಸುವ ಹೊಸ ಕೃಷಿ ನವೋದ್ಯಮಿಗಳಿಗೆ ಅನುಮೋದಿತ ಯೋಜನಾ ವರದಿಯ ಶೇ.೫೦ರಷ್ಟು ಸಹಾಯಧನವನ್ನು (ಕನಿಷ್ಠ ೨೦ ಲಕ್ಷ ರೂ.ದಿಂದ ಗರಿಷ್ಠ ೫೦ ಲಕ್ಷ ರೂ.ವರೆಗೆ) ಕೃಷಿ ವಲಯದ ನವೋದ್ಯಮಿಗಳಿಗೆ ಬ್ಯಾಂಕ್ ಸಾಲದ ಮೂಲಕ ನೀಡಲಾಗುವುದು.
ಆಸಕ್ತ ನವೋದ್ಯಮಿಗಳು ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ : ೨೯-೦೧-೨೦೨೪ರೊಳಗಾಗಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಉಪ ಕೃಷಿ ನಿರ್ದೇಶಕರ ಕಚೇರಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
