ವಿಜಯಪುರ: ಜಗತ್ತಿನಲ್ಲಿ ಅನೇಕ ದಾರ್ಶನಿಕ ಮಹನೀಯರು ತಮ್ಮದೇಯಾದ ಸಂದೇಶಗಳನ್ನು ಸಾರಿದ್ದಾರೆ. ನಾವು ಅದನ್ನು ಅರ್ಥ ಮಾಡಿಕೊಂಡು ಅವರ ವಿಚಾರಧಾರೆಗಳನ್ನು ಎಲ್ಲರಿಗೂ ತಿಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಹಾಯೋಗಿಯ ಜೀವನ ಸಂದೇಶ ಎಲ್ಲರಿಗೂ ಪ್ರೇರಣೆಯಾಗಲಿ. ಮಹನೀಯರ ಸಾರಿದ ತತ್ವ ಸಿದ್ದಾಂತಗಳನ್ನು ಅರ್ಥ ಮಾಡಿಕೊಂಡು ಅವರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ನಡೆಯಬೇಕು. ಹುಟ್ಟಿನಿಂದಲೇ ಎಲ್ಲರೂ ಸಮಾನರು ಎಂದು ಸಾರಿದ ವೇಮರ ಬದುಕು ನಮಗೆ ಸ್ಪೂರ್ತಿಯಾಗಬೇಕು ಎಂದರು
ಮಹಾಯೋಗಿ ವೇಮರ ಜೀವನ ಚರಿತ್ರೆಯ ಬಗ್ಗೆ ಡಾ.ಉಷಾದೇವಿ ಹಿರೇಮಠ ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮವನ್ನು ವಿಜಯಪುರ ಮಹಾನಗರ ಪಾಲಿಕೆ ಮಹಾಪೌರರಾದ ಮೆಹೇಜನಬಿ ಹೊರ್ತಿ ಅವರು ಉದ್ಘಾಟಿಸಿದರು.
ಉಪ ಮಹಾಪೌರ ದಿನೇಶ ಹಳ್ಳಿ, ತಹಶಿಲ್ದಾರ ಶ್ರೀಮತಿ ಕವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಯುಭ್ ದ್ರಾಕ್ಷಿ, ಎಚ್.ಮಮದಾಪುರ ವಿದ್ಯಾವತಿ ಅಂಕಲಗಿ, ಸುರೇಶ ದೇಸಾಯಿ, ಡಾ.ಪ್ರಭುಗೌಡ ಪಾಟೀಲ, ಭೀಮರಾಯ ಜೀಗಜಿಣಗಿ ಮತ್ತಿತರರು ಉಪಸ್ಥಿತರಿದ್ದರು.

