ವಿಜಯಪುರ: ಇಬ್ರಾಹಿಂಪೂರ ರೇಲ್ವೆ ಸ್ಟೇಶನ್ ಹತ್ತಿರ ಸಂತೋಷ ಮಾತಾ ಜಲನಗರ ಮತ್ತು ಸಾಯಿಪಾಕ್ ರಸ್ತೆಗಳ ಜೋಡಣೆಗಾಗಿ ರೇಲ್ವೆ ಕೆಳ ಸೇತುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಅನುಕೂಲಕ ಕಲ್ಪಿಸುವಂತೆ ಸಂಸದ ರಮೇಶ ಜಿಗಜಿಣಗಿ ಅವರು ರೇಲ್ವೆ ಇಲಾಖೆ ಹುಬ್ಬಳ್ಳಿ ಜನರಲ್ ಮ್ಯಾನೇಜರ್ ಅವರಿಗೆ ಪತ್ರ ಬರೆದಿದ್ದಾರೆ.
ಸಂಸದರು ರೇಲ್ವೆ ಮ್ಯಾನೇಜರ್ ಅವರಿಗೆ ಪತ್ರ ಬರೆದು, ಇಬ್ರಾಹಿಂಪೂರ ಹತ್ತಿರದ ರೇಲ್ವೆ ಕೆಳ ಸೇತುವೆ ಕಾಮಗಾರಿ ಪೂರ್ಣಗೊಳ್ಳದೇ ಇರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಮಳೆಗಾಲದಲ್ಲಿ ಕೆಳಸೇತುವೆಗೆ ಮಳೆ ನೀರು ಸುತ್ತುವರೆಯುವ ಸಂಭವವಿರುವುದರಿಂದ ಸದರಿ ನೀರು ನಿಲ್ಲದಂತೆ ಮಹಾನಗರ ಪಾಲಿಕೆಯಿಂದ ಕಾಮಗಾರಿ ಕೈಗೊಳ್ಳುವುದಾಗಿ ತಮ್ಮ ಪತ್ರದಲ್ಲಿ ತಿಳಿಸಿದ ಸಂಸದರು, ರೇಲ್ವೆ ಅಧಿಕಾರಿಗಳು ಕೂಡಲೇ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೆಳಸೇತುವೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

