ದೇವರಹಿಪ್ಪರಗಿ: ನಮ್ಮ ವರ್ತನೆ, ಬುದ್ಧಿಮತ್ತೆ, ಪ್ರಯತ್ನಗಳೇ ನಮ್ಮ ನಿಜವಾದ ಅಂತಃಶಕ್ತಿಗಳು ಇವುಗಳ ಮೂಲಕ ವಿದ್ಯಾರ್ಥಿಗಳು ಯಶಸ್ಸಿನತ್ತ ಸಾಗಲು ಮುಂದಾಗಬೇಕು ಎಂದು ಕೊಣ್ಣೂರ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಬಿ.ಕೆ.ಕೊಣ್ಣೂರ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಜರುಗಿದ ೨೦೨೩-೨೪ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ರೆಡ್‌ಕ್ರಾಸ್, ಸ್ಕೌಟ್ ಮತ್ತು ಗೈಡ್ ಚಟುವಟಿಕೆಗಳ ಉದ್ಘಾಟನಾ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
ನಮ್ಮ ಯಶಸ್ಸಿನ ಮೂಲವೇ ನಮ್ಮ ನಡುವಳಿಕೆ. ಆದ್ದರಿಂದ ನಾವೆಲ್ಲ ಉತ್ತಮ ಚಾರಿತ್ರ್ಯವನ್ನು ಅಳವಡಿಸಿಕೊಂಡು ಜೀವನದಲ್ಲಿ ಮುನ್ನಡೆಯೋಣ ಎಂದರು.
ವಿಜಯಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮನಃಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಡಾ.ಚಂದ್ರಕಾಂತ ಬಿ. ಹಾಗೂ ಇಂಡಿ ಜಿ.ಆರ್.ಜಿ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಆನಂದ ನಡುವಿನಮನಿ ಮಾತನಾಡಿದರು.
ಪ್ರಾಂಶುಪಾಲ ಅಶೋಕ ಹೆಗಡೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದೈಹಿಕ ಶಿಕ್ಷಣ ನಿರ್ದೇಶಕ ಡಾ.ಅಶೋಕಕುಮಾರ ಜಾಧವ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿಜಯಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಮಮತಾ ಬನ್ನೂರ, ರೆಡ್‌ಕ್ರಾಸ್ ಸಂಚಾಲಕಿ ಡಾ.ದ್ರಾಕ್ಷಾಯಣಮ್ಮ ಎನ್.ಸಿ, ಐಕ್ಯೂಎಸಿ ಸಂಚಾಲಕ ಎಸ್.ಬಿ.ಜಾಲವಾದಿ, ಅಧೀಕ್ಷಕ ಜಗನ್ನಾಥ ಸಜ್ಜನ, ಪ್ರೇಮಕುಮಾರಿ.ಪಿ, ಬಿ.ಎಸ್.ಬಿರಾದಾರ, ಆಕ್ರಮ ಪಾಷಾ, ಪದ್ಮಜ ಬೆಳ್ಳಿಕಟ್ಟಿ, ಡಾ.ಜ್ಯೋತಿ ಹೂಗಾರ, ಡಾ.ಬಸವರಾಜ ಸಹಿತ ಕಾಲೇಜಿನ ಭೋಧಕ, ಭೋದಕೇತರ, ಅತಿಥಿ ಉಪನ್ಯಾಸಕ ಸಿಬ್ಬಂದಿ ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನೀಯರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

