ಬ್ರಹ್ಮದೇವನಮಡು: ಮುಖ್ಶಮಂತ್ರಿ ಸಿದ್ದರಾಮಯ್ಶ ಅವರನ್ನು ಏಕವಚನದಲ್ಲಿ ನಿಂದಿಸಿದ ಉತ್ತರ ಕನ್ನಡದ ಸಂಸದ ಅನಂತಕುಮಾರ ಹೆಗಡೆ ಅವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ಚಂದ್ರು ಕೆಂಭಾವಿ ಒತ್ತಾಯಿಸಿದ್ದಾರೆ.
ಈ ಹಿಂದೆ ಕೇಂದ್ರ ಸಚಿವರಾಗಿದ್ದಾಗ ಸಂವಿಧಾನವನ್ನು ಬದಲಾಯಿಸುವ ಕುರಿತು ಮಾತನಾಡಿ ವಿವಾದಕ್ಕೆ ಕಾರಣವಾಗಿದ್ದರು. ಬಳಿಕ ನಾಲ್ಕು ವಷ೯ ಸಾವ೯ಜನಿಕವಾಗಿ ಯಾವ ಕಾಯ೯ಕ್ರಮದಲ್ಲೂ ಪಾಲ್ಗೊಂಡಿರಲಿಲ್ಲ. ಇದೀಗ ಲೋಕಸಭೆ ಚುನಾವಣೆ ಬರುತ್ತಿದ್ದು, ಹೀಗಾಗಿ ಮತ್ತೇ ನಾಲಿಗೆ ಹರಿಬಿಟ್ಟಿದ್ದಾರೆ.ಹಿರಿಯ ನಾಯಕರ ವಿರುದ್ದ ಬಾಯಿಗೆ ಬಂದಂತೆ ಪದ ಪ್ರಯೋಗ ಮಾಡುತ್ತಿರುವದು ಸರಿಯಲ್ಲ. ಸರ್ಕಾರ ಕೂಡಲೇ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

