Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಒಳಮೀಸಲಾತಿ ಜಾರಿ ನಮ್ಮ ಹಲವು ದಶಕಗಳ ಬೇಡಿಕೆ
(ರಾಜ್ಯ ) ಜಿಲ್ಲೆ

ಒಳಮೀಸಲಾತಿ ಜಾರಿ ನಮ್ಮ ಹಲವು ದಶಕಗಳ ಬೇಡಿಕೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಡಿಎಸ್ಸೆಸ್ ರಾಜ್ಯ ಮಟ್ಟದ ಪದಾಧಿಕಾರಿಗಳ ಅಧ್ಯಯನ ಶಿಬಿರದಲ್ಲಿ ಹೆಣ್ಣೂರ ಶ್ರೀನಿವಾಸ ಅಭಿಮತ

ಆಲಮಟ್ಟಿ: ಒಳಮೀಸಲಾತಿ ಜಾರಿ ಮಾಡುವುದು ಕೇಂದ್ರದ ಕರ್ತವ್ಯ, ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದನ್ನು ತಪ್ಪು ಎನ್ನುತ್ತಿರುವ ಮಾಜಿ ಸಚಿವ ಗೋವಿಂದ ಕಾರಜೋಳ ಅವರ ಹೇಳಿಕೆ ದಲಿತರನ್ನು ತಪ್ಪು ದಾರಿಗೆ ಎಳೆಯುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಹೆಣ್ಣೂರ ಶ್ರೀನಿವಾಸ ಹೇಳಿದರು.
ಇಲ್ಲಿಯ ಕರ್ನಾಟಕ ಗಾಂದಿ ಮಂಜಪ್ಪ ಹರ್ಡೇಕರ ಸ್ಮಾರಕದಲ್ಲಿ ಶನಿವಾರ ನಡೆದ ಎರಡು ದಿನದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಮಟ್ಟದ ಪದಾಧಿಕಾರಿಗಳ ಅಧ್ಯಯನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರವೇ ಸಂವಿಧಾನದ ೩೪೧(೩) ಕ್ಕೆ ತಿದ್ದುಪಡಿ ತಂದು ಒಳಮೀಸಲಾತಿ ಜಾರಿಗೆ ತಂದರೆ ಅದಕ್ಕೆ ಕಾನೂನು ಮಾನ್ಯತೆ ಸಿಗುತ್ತದೆ, ಇದು ನಮ್ಮ ಹಲವು ದಶಕಗಳ ಬೇಡಿಕೆ ಎಂದರು. ಯಾವುದೇ ಅರ್ಜಿಯನ್ನು ಹಾಕದೇ ಕೇಂದ್ರ ಸರ್ಕಾರ ಶೇ ೧೦ ರಷ್ಟು ಇಡಬ್ಲುಎಸ್ ಮೀಸಲಾತಿ ಜಾರಿಗೆ ತಂದಿತು. ಒಳಮೀಸಲಾತಿಗಾಗಿ ನಿರಂತರ ಹೋರಾಟ ನಡೆಸಿದರೂ ಅದಕ್ಕೆ ಸ್ಪಂದಿಸುತ್ತಿಲ್ಲ ಎಂದು ಆಪಾದಿಸಿದರು. ಒಳಮೀಸಲಾತಿ ಜಾರಿಗಾಗಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಸರಿಯಾಗಿದೆ, ಕೇಂದ್ರವೇ ಇದನ್ನು ಅನುಷ್ಠನಕ್ಕೆ ತರಬೇಕು ಎಂದರು. 
 “ಮಾದಿಗ ಮುನ್ನಡೆ”, ಭೀಮ ಮುನ್ನಡೆ ಕಾರ್ಯಕ್ರಮ ಸಂಘಟಿಸಿ, ಮಾದಿಗ-ಚಲವಾದಿ ಅವರಲ್ಲಿಯೇ ಜಗಳ ಹಚ್ಚುವ ಕಾರ್ಯ ಆರ್ ಎಸ್ ಎಸ್ ಬೆಂಬಲದಿಂದ ಬಿಜೆಪಿಯವರು ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಜಾತಿಗಳಲ್ಲಿಯೇ ವೈಷಮ್ಯ ಬೆಳೆಸುತ್ತಿದ್ದಾರೆ ಎಂದರು.
ವಿಧಾನಪರಿಷತ್ ಸದಸ್ಯ ಎಚ್.ಪಿ. ಸುಧಾಮದಾಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಿಂದಗಿಯ ಸಂಗಪಾಲ ಬಂತೇಜಿ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಸಂಘಟನಾ ಸಂಚಾಲಕರಾದ ವಿಜಯನರಸಿಂಹ, ಸೂಲಿಕುಂಟೆ ರಮೇಶ, ಎಸ್. ವಿಘ್ನೇಶ್, ಸತ್ಯಭದ್ರಾವತಿ, ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ಪ್ರಧಾನ ಸಂಚಾಲಕ ಬಸವರಾಜ ಕೌತಾಳ್, ಅಂಬಣ್ಣ ಅರೋಳಿಕರ್, ದಲಿತ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷ ಜೆ. ಶ್ರೀನಿವಾಸಲು, ದಲಿತಾ ಮಹಿಳಾ ಒಕ್ಕೂಟದ ರಾಜ್ಯ ಸಂಚಾಲಕಿ ರೇಣುಕಾ ಮಾದರ, ಪ್ರೊ ಸಿ.ಕೆ. ಮಹೇಶ್, ಭೀಮಸೇನ ಶ್ರೀನಿವಾಸ, ಜಿಲ್ಲಾ ಸಂಚಾಲಕ ಅಶೋಕ ಚಲವಾಧಿ, ಲಕ್ಕಪ್ಪ ಬಡಿಗೇರ, ಮಲ್ಲೇಶಿ ಸಜ್ಜನ, ವಿನಾಯಕ ಗುಣಸಾಗರ, ಗಣೇಶ ಮೇತ್ರಿ, ಫಕೀರಪ್ಪ ಮಾದರ, ಪರಶುರಾಮ ದಿಂಡವಾರ, ಪ್ರಕಾಶ ಗುಡಿಮನಿ, ರಾಜೀವ ತೊರವಿ, ಲಕ್ಷ್ಮಣ ಹಾಲಿಹಾಳ, ರವಿ ಮ್ಯಾಗೇರಿ, ಶರಣು ಶಿಂಧೆ ಇನ್ನಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.