ದೇವರಹಿಪ್ಪರಗಿ: ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಪಡಗಾನೂರ ಗ್ರಾಮದಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ, ಮೆರವಣಿಗೆ ಮಾಡಲಾಯಿತು.
ತಾಲ್ಲೂಕಿನ ಪಡಗಾನೂರ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಸೋಮೇಶ್ವರ ದೇವಸ್ಥಾನದಲ್ಲಿ ಪೂಜೆ ನೆರವೇರಿಸಲಾಯಿತು. ನಂತರ ಶ್ರೀರಾಮನ ಭಾವಚಿತ್ರಕ್ಕೆ ಭಕ್ತಿಪೂರ್ವಕವಾಗಿ ಪೂಜೆ ಸಲ್ಲಿಸಿ ನಂತರ ಟ್ರಾö್ಯಕ್ಟರ್ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಜರುಗಿಸಲಾಯಿತು.
ಗ್ರಾಮ ಪಂಚಾಯಿತಿ ಸದಸ್ಯ ಭೀರು ಹಳ್ಳಿ, ಆಕಾಶ ಕಬ್ಬಿನ, ಸಿದ್ಧು ಪಾಟೀಲ, ಪ್ರವೀಣ ಕಬ್ಬಿನ, ಸಿದ್ಧು ಹದರಿ, ಸಂತೋಷ ಧೋತ್ರೆ, ವಿನಾಯಕ ಹಿರೇಮಠ, ಪ್ರದೀಪ್ ಬಾಗೇವಾಡಿ, ಸೋಮು ಹುಗ್ಗಿ, ಸಂಗಮೇಶ ವಡಗೇರಿ ಭಾಗವಹಿಸಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

