ಇಂಡಿ: ಮಕ್ಕಳಿಗೆ ಸಂವಿಧಾನ ಬದ್ಧವಾಗಿ ದೊರೆಯಬೇಕಾದ ಸೌಲಭ್ಯಗಳನ್ನು ಕೊಡಿಸಿ, ಸಾಧನೆ ಮಾಡಲು ಅವಕಾಶ ಮಾಡಿಕೊಡುವ ಮೂಲಕ ಮಕ್ಕಳ ಹಕ್ಕುಗಳನ್ನು ಸಂರಕ್ಷಣೆ ಮಾಡಲು ನಾಗರಿಕ ಸಮಾಜದ ಪ್ರತಿಯೊಬ್ಬರು ಮುಂದಾಗಬೇಕು ಎಂದು ಯುವ ಮುಖಂಡ ಪರಶುರಾಮ ಹೊಸಮನಿ ಹೇಳಿದರು.
ಅವರು ಮಂಗಳವಾರ ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯಲ್ಲಿ ಜಿಲ್ಲಾ ಆಡಳಿತ,ಜಿಲ್ಲಾ ಪಂಚಾಯಿತಿ ವಿಜಯಪುರ,ತಾಲೂಕು ಪಂಚಾಯತ ಕಾರ್ಯಾಲಯ ಇಂಡಿ, ಸಪ್ತಗಿರಿ ಫೌಂಡೇಶನ್ ವಿಜಯಪುರ ಹಾಗೂ ಗ್ರಾಮ ಪಂಚಾಯಿತಿ ಹಿರೇರೂಗಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಡಾ.ಬಿ ಆರ್ ಅಂಬೇಡ್ಕರ್ ಅವರ ಜೀವನ ಮತ್ತು ವಿಚಾರಧಾರೆಯ ಕಾನೂನು ಅರಿವು ಮೂಡಿಸುವ ನಾಟಕ ಪ್ರದರ್ಶನ ಕಾರ್ಯಕ್ರಮಕ್ಕೆ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನಾದರ್ಶಗಳನ್ನು ಮಕ್ಕಳು ಬಾಲ್ಯದಿಂದಲೇ ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನಾದರ್ಶಗಳನ್ನು ಮಕ್ಕಳು ಮೈಗೂಡಿಸಿಕೊಳ್ಳಬೇಕು ಎಂದರು.
ಯುವ ಮುಖಂಡ ಸಂತೋಷ ಕೋಟಗೊಂಡ, ಮುಖ್ಯ ಶಿಕ್ಷಕರಾದ ಅನಿಲ ಪತಂಗಿ, ವಿ ವೈ ಪತ್ತಾರ, ಎ ಎಂ ಬೆದ್ರೇಕರ ಹಾಗೂ ಶಿಕ್ಷಕರಾದ ಎಸ್ ಆರ್ ಚಾಳೇಕರ,ಎಸ್ ಎಂ ಪಂಚಮುಖಿ, ಎಸ್ ಎಸ್ ಅರಬ, ಎಸ್ ಡಿ ಬಿರಾದಾರ, ಎಸ್ ಬಿ ಕುಲಕರ್ಣಿ, ಎಸ್ ಪಿ ಪೂಜಾರಿ, ಜೆ ಎಂ ಪತಂಗಿ, ಸಾವಿತ್ರಿ ಸಂಗಮದ,ಎನ್ ಬಿ ಚೌಧರಿ, ಜೆ ಸಿ ಗುಣಕಿ, ಎಸ್ ಎನ್ ಡಂಗಿ, ಶಾಂತೇಶ ಹಳಗುಣಕಿ, ಸುರೇಶ ದೊಡ್ಯಾಳಕರ, ಎಫ್ ಎ ಹೊರ್ತಿ,ಎಸ್ ವ್ಹಿ ಬೆನೂರ ಮತ್ತು ಪಂಚಾಯತ್ ಸಿಬ್ಬಂದಿ ಬಸವರಾಜ ತಳಕೇರಿ, ಸಪ್ತಗಿರಿ ಫೌಂಡೇಶನ್ ಅಧ್ಯಕ್ಷ ಸುನೀಲ ರೆಡ್ಡಿ ಸೇರಿದಂತೆ ಎಲ್ಲ ಶಿಕ್ಷಕರು ಹಾಗೂ ಮಕ್ಕಳು, ಪಾಲಕರು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಕಲಾವಿದರು ಡಾ.ಬಿ.ಆರ್. ಅಂಬೇಡ್ಕರ್ ಅವರ ಜೀವನ ಮತ್ತು ವಿಚಾರಧಾರೆಯ ಕಾನೂನು ಅರಿವು ಮೂಡಿಸುವ ನಾಟಕ ಪ್ರದರ್ಶಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

