Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅರಣ್ಯ ಕಾರ್ಮಿಕರಿಗೆ ಪಿಎಫ್, ವಿಮೆ ಒದಗಿಸಲು ಕ್ರಮ :ಮಹೇಶ

ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹೊಂದಬೇಕು :ನ್ಯಾ. ನಾಗೇಶ

ನಿಷ್ಕಳಂಕ ಸೇವೆ ಸಲ್ಲಿಸುವುದು ಇತರರಿಗೆ ಮಾದರಿ :ಮಹಾಂತೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನಜಾಗೃತಿಗೆ ಬೀದಿ ನಾಟಕ ಪ್ರದರ್ಶನ ಪರಿಣಾಮಕಾರಿ ಸಂವಹನ
(ರಾಜ್ಯ ) ಜಿಲ್ಲೆ

ಜನಜಾಗೃತಿಗೆ ಬೀದಿ ನಾಟಕ ಪ್ರದರ್ಶನ ಪರಿಣಾಮಕಾರಿ ಸಂವಹನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜನಜಾಗೃತಿ ಮೂಡಿಸುವ ಬೀದಿ ನಾಟಕ ಪ್ರದರ್ಶನಕ್ಕೆ ಡಿಸಿ ಟಿ.ಭೂಬಾಲನ್ ಚಾಲನೆ

ವಿಜಯಪುರ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಜನಪ್ರಿಯ ಹಾಗೂ ಜನಪರ ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ಮತ್ತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬೀದಿ ನಾಟಕ- ಜಾನಪದ ಕಲಾ ತಂಡಗಳ ಪ್ರದರ್ಶನ ಪರಿಣಾಮಕಾರಿ ಸಂವಹನವಾಗಿವೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ವಾದ್ಯ ನುಡಿಸುವ ಮೂಲಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕ್ಷೇತ್ರ ಪ್ರಚಾರದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ,ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವ ನಿಧಿ ಯೋಜನೆಗಳನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲಾಗುತ್ತಿದ್ದು, ಅರ್ಹ ನೈಜ ಫಲಾನುಭವಿಗಳಿಗೆ ಅವರ ಹಕ್ಕನ್ನು ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ಹಲವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗ್ಯಾರಂಟಿ ಯೋಜನೆಗಳ ಕುರಿತು ಜಾಗೃತಿ ಮೂಡಿಸಿ ಯೋಜನೆಗಳನ್ನು ಜನರಲ್ಲಿಗೆ ತಲುಪಿಲು ಪ್ರಯತ್ನಿಸಲಾಗುತ್ತಿದೆ. ಸಾರ್ವಜನಿಕರು ಸಹ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಮಾಹಿತಿ ಪಡೆದುಕೊಂಡು ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿಕೊಂಡರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಸರ್ಕಾರ ಮತ್ತು ಸಾರ್ವಜನಿಕರ ಮಧ್ಯೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ. ರಾಜ್ಯ ಸರ್ಕಾರ ಜನರಿಗಾಗಿ ಜಾರಿಗೆ ತಂದಿರುವ ಯೋಜನೆಗಳ ಕುರಿತಾಗಿ ಜಾಗೃತಿ ಮೂಡಿಸುವಲ್ಲಿ ಈ ಕಲಾ ತಂಡಗಳು ಕಲೆಯೊಂದಿಗೆ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ತಮ್ಮದೇ ಆದ ಹಾಡಿನ ಮೂಲಕ,ಸಂಭಾಷಣೆಯ ಮೂಲಕ ವಿಶಿಷ್ಟ ಹಾಗೂ ವೈಶಿಷ್ಟ್ಯ ಪೂರ್ಣ ಶೈಲಿಯಲ್ಲಿ ತಲುಪಿಸಲಿವೆ. . ನಗರ ಹಾಗೂ ಗ್ರಾಮೀಣ ಪ್ರದೇಶದ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳನ್ನು ಯಥಾವತ್ತಾಗಿ ತಲುಪಿಸಲು ಸಂವಹನ ಮಾಧ್ಯಮವಾಗಿ ಬೀದಿನಾಟಕ ಮತ್ತು ಜಾನಪದ ಕಲಾತಂಡಗಳು, ಜನರಿಗೆ ಮನಮುಟ್ಟುವಂತೆ ತಿಳಿಸಿಕೊಡಲಿವೆ ಎಂದು ಹೇಳಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಅವರು ಮಾತನಾಡಿದರು.
ಬೀದಿ ನಾಟಕ ತಂಡಗಳಾದ ವಿಶ್ವಚೇತನ ಕಲಾ ತಂಡ, ಗ್ರಾಮೀಣಾಭಿವೃದ್ದಿ ಕಲಾ ತಂಡ ಹಾಗೂ ಜಾನಪದ ಕಲಾ ತಂಡಗಳಾದ ಸಿದ್ದಾಪುರದ ಗುರುಪ್ರಸಾದ ಜಾನಪದ ತಂಡಗಳು ಭಾಗವಹಿಸಿ ಸರ್ಕಾರದ ಯೋಜನೆಗಳ ಕುರಿತು ಪ್ರದರ್ಶನ ನೀಡಲಿವೆ. ಈ ಕಲಾ ತಂಡಗಳು ಜನವರಿ ಹಾಗೂ ಫೆಬ್ರವರಿ ಮಾಹೆಯಲ್ಲಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲಿಕ ಮಾನವರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ರಾಜಶೇಖರ ದೈವಾಡಿ, ವಾರ್ತಾ ಇಲಾಖೆಯ ಸುರೇಶ ಅಂಬಿಗೇರ,ಜಿಲ್ಲಾಧಿಕಾರಿ ಕಚೇರಿಯ ಎಂ.ಕೆ.ದೇಸಾಯಿ, ಎಸ್.ಎಸ್. ದಿವಟೆ, ಜಮಾದಾರ, ಮೇಟಿ, ಪಿ.ಜಿ.ಕವಟಗಿಮಠ, ಎಂ.ಡಿ.ಕರ್ನಾಳ, ಹಿರೇಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅರಣ್ಯ ಕಾರ್ಮಿಕರಿಗೆ ಪಿಎಫ್, ವಿಮೆ ಒದಗಿಸಲು ಕ್ರಮ :ಮಹೇಶ

ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹೊಂದಬೇಕು :ನ್ಯಾ. ನಾಗೇಶ

ನಿಷ್ಕಳಂಕ ಸೇವೆ ಸಲ್ಲಿಸುವುದು ಇತರರಿಗೆ ಮಾದರಿ :ಮಹಾಂತೇಶ

ಕನ್ನಡ ಸಾಹಿತ್ಯ ಲೋಕಕ್ಕೆ ಡಾ.ಚನ್ನಪ್ಪ ಕಟ್ಟಿ ಕೊಡುಗೆ ಅನನ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅರಣ್ಯ ಕಾರ್ಮಿಕರಿಗೆ ಪಿಎಫ್, ವಿಮೆ ಒದಗಿಸಲು ಕ್ರಮ :ಮಹೇಶ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹೊಂದಬೇಕು :ನ್ಯಾ. ನಾಗೇಶ
    In (ರಾಜ್ಯ ) ಜಿಲ್ಲೆ
  • ನಿಷ್ಕಳಂಕ ಸೇವೆ ಸಲ್ಲಿಸುವುದು ಇತರರಿಗೆ ಮಾದರಿ :ಮಹಾಂತೇಶ
    In (ರಾಜ್ಯ ) ಜಿಲ್ಲೆ
  • ಕನ್ನಡ ಸಾಹಿತ್ಯ ಲೋಕಕ್ಕೆ ಡಾ.ಚನ್ನಪ್ಪ ಕಟ್ಟಿ ಕೊಡುಗೆ ಅನನ್ಯ
    In (ರಾಜ್ಯ ) ಜಿಲ್ಲೆ
  • ಮೌಲ್ಯಮಾಪನ ಎಡವಟ್ಟು ಪಾಸ್‌ ಆಗಿದ್ದ ವಿದ್ಯಾರ್ಥಿನಿ ಫೇಲ್‌!
    In (ರಾಜ್ಯ ) ಜಿಲ್ಲೆ
  • ಪ್ರಗತಿಯಲ್ಲಿರುವ ನೀರಾವರಿ ಯೋಜನೆಗಳು ಬೇಗ ಪೂರ್ಣಗೊಳಿಸಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಹಳ್ಳಗಳಿಗೆ ನೀರು ತುಂಬಿಸುವ ಯೋಜನೆ ಇಡೀ ದೇಶಕ್ಕೆ ಮಾದರಿ
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಸ್ಕೂಲ್ ಗೆ ಮೊದಲ ಮೂರು ರ‌್ಯಾಂಕ್
    In (ರಾಜ್ಯ ) ಜಿಲ್ಲೆ
  • ಬರಿದಾಗುತ್ತಿರುವ ಕೃಷ್ಣಾ ನದಿ :ಕೃಷಿಗೆ ತೀವ್ರ ಸಂಕಷ್ಟ
    In (ರಾಜ್ಯ ) ಜಿಲ್ಲೆ
  • ಭಕ್ತಿಸಾಗರದಲ್ಲಿ ತೇಲಿದ ಚಿಕ್ಕಪಡಸಲಗಿ ಭಕ್ತವೃಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.