ವಿಜಯಪುರ: ಪಿಂಚಣಿದಾರರ ಅಹವಾಲು ಆಲಿಸಲು ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡುವ ಕುರಿತ ಸಾಮಾಜಿಕ ಭದ್ರತಾ ಯೋಜನೆಯಡಿಯ ಜಿಲ್ಲೆಯ ೧೪ ಗ್ರಾಮಗಳಲ್ಲಿ ಫೆ.೦೩ ರಂದು ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.
ಫೆ.೩ರ ಬೆಳಿಗ್ಗೆ ೧೧ ಗಂಟೆಗೆ ಬ.ಬಾಗೇವಾಡಿ ತಾಲೂಕಿನ ನಂದಿಹಾಳ ಪಿ.ಯು ಗ್ರಾಮದ ಛತ್ರಿಕಟ್ಟಿಯಲ್ಲಿ ವಿಜಯಪುರದ ಉಪ ವಿಭಾಗಾಧಿಕಾರಿಗಳು ಮತ್ತು ಚಡಚಣ ತಾಲೂಕಿನ ಹಲಸಂಗಿ ಗ್ರಾಮದ ಗ್ರಾಮ ಪಂಚಾಯತಿಯ ಆವರಣದಲ್ಲಿ, ಇಂಡಿ ಉಪ ವಿಭಾಗಾಧಿಕಾರಿಗಳು ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ವಿಜಯಪುರ ಗ್ರೇಡ್-೨ ತಹಶೀಲ್ದಾರ ಅವರು ಕುಮಟಗಿ ಗ್ರಾಮದ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ, ಬಬಲೇಶ್ವರ ತಹಶೀಲ್ದಾರ ಗ್ರೇಡ್-೨ ಅವರು, ಕುಮಠೆ ಗ್ರಾಮದ ಶ್ರೀ ಕರಿಸಿದ್ಧೇಶ್ವರ ದೇವಸ್ಥಾನದಲ್ಲಿ ಹಾಗೂ ತಿಕೋಟಾ ಗ್ರೇಡ್-೨ ತಹಶೀಲ್ದಾರ ಅವರು ತಾಜಪೂರ ಎಚ್ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಬಸವನ ಬಾಗೇವಾಡಿ ಗ್ರೇಡ್-೨ ತಹಶೀಲ್ದಾರ ಅವರು, ಅಗಸಬಾಳ ಗ್ರಾಮದ ಶ್ರೀ ಹನುಮಾನ ದೇವಸ್ಥಾನದಲ್ಲಿ ಹಾಗೂ ನಿಡಗುಂದಿ ಗ್ರೇಡ್-೨ ತಹಶೀಲ್ದಾರ ಅವರು ಕೊಡಗಾನೂರ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಸುವರು.
ಕೊಲ್ಹಾರದ ತಹಶೀಲ್ದಾರ ಅವರು ಮಸೂತಿ ಗ್ರಾಮದ ಗಿಡ್ಡಯ್ಯ ಅಜ್ಜನ ಮಠದಲ್ಲಿ, ಮುದ್ದೇಬಿಹಾಳ ಗ್ರೇಡ್-೨ ತಹಶೀಲ್ದಾರ ಅವರು ಜಲಪುರ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ, ತಾಳಿಕೋಟಿ ತಹಶೀಲ್ದಾರ ಅವರು ಬೂದಿಹಳ ಪಿ.ಟಿ ಗ್ರಾಮದ ಶ್ರೀ ಮಾರುತಿ ದೇವಸ್ಥಾನದಲ್ಲಿ ಹಾಗೂ ಇಂಡಿ ಗ್ರೇಡ್-೨ ತಹಶೀಲ್ದಾರ ಅವರು ಕೊಟ್ನಾಳ ಗ್ರಾಮದ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಸಿಂದಗಿ ಗ್ರೇಡ್-೨ ತಹಶೀಲ್ದಾರ ಅವರು ಓತಿಹಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ದೇವರ ಹಿಪ್ಪರಗಿ ತಹಶೀಲ್ದಾರ ಅವರು ಕೆಸರಟ್ಟಿಯ ಆಂಜನೇಯ ದೇವಸ್ಥಾನದಲ್ಲಿ ಹಾಗೂ ಆಲಮೇಲ ತಹಶಿಲ್ದಾರ ಅವರು ಮಡ್ನಳ್ಳಿ ಗ್ರಾಮದ ಸರಕಾರಿ ಗಂಡು ಮಕ್ಕಳ ಶಾಲೆಯಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಪಿಂಚಣಿ ಅದಾಲತ್ ನಡೆಯುವ ಗ್ರಾಮಗಳಲ್ಲಿ ಸಾಮಾಜಿಕ ಭದ್ರತೆ ಪಿಂಚಣಿ ಫಲಾನುಭವಿಗಳಿಗೆ ಎನ್.ಪಿ.ಸಿ.ಐ. ಮ್ಯಾಪಿಂಗ್ ಕಾರ್ಯವನ್ನು ಸಂಬಂಧಿಸಿದ ಬ್ಯಾಂಕ್, ಅಂಚೆ ಕಚೇರಿ ಅಧಿಕಾರಿಗಳ ಸಹಯೋಗದೊಂದಿಗೆ ತಪ್ಪದೇ ಮಾಡಿಸುವಂತೆಯೂ ಹಾಗೂ ಪಿಂಚಣಿ ಅದಾಲತ್‌ನಲ್ಲಿ ಪಿಂಚಣಿದಾರರ ಮಾಹಿತಿಯೊಂದಿಗೆ ಎಲ್ಲಾ ಗ್ರಾಮಗಳ ಗ್ರಾಮ ಲೆಕ್ಕಿಗರು, ಪಂಚಾಯತ್ ಕಾರ್ಯದರ್ಶಿಗಳು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಹಾಗೂ ಅಂಚೆ ಕಚೇರಿ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
