ಮುದ್ದೇಬಿಹಾಳ: ಇಲ್ಲಿನ ಆಲಮಟ್ಟಿ ರಸ್ತೆಯಲ್ಲಿರುವ ಶಾ.ಸೊಗಮಲ್ ಪೀರಾಜಿ ಓಸ್ವಾಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜ.೨೫ ರಂದು ಬೆಳಿಗ್ಗೆ ೧೦ ಗಂಟೆಗೆ ಮತದಾರರ ದಿನಾಚರಣೆ ಕುರಿತು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ಆಡಳಿತ, ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಲಕ್ಷ್ಮೀ ನಿಂಗಪ್ಪ ಗರಗ ಉದ್ಘಾಟಿಸುವರು. ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಲಗಿಡದ ಉಪಸ್ಥಿತಿಯಲ್ಲಿ ತಹಶೀಲ್ದಾರ ಬಲರಾಮ ಕಟ್ಟಿಮನಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ, ಸಹಾಯಕ ಸರಕಾರಿ ಅಭಿಯೋಜಕ ಬಸವರಾಜ ಆಹೇರಿ, ಅಪರ ಸರ್ಕಾರಿ ವಕೀಲ ಎಚ್.ಎಲ್.ಸರೂರ, ಪ್ರಭಾರ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಯುವರಾಜ ಹನಗಂಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಸಾವಳಗಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪ್ರಾಂಶುಪಾಲ ಸಿಕಂದರ ಧನ್ನೂರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಆಗಮಿಸುವರು. ವಿಜಯಪುರದ ಸ.ಪ್ರ.ದ.ಕಾ ಸಹಾಯಕ ಪ್ರಾಧ್ಯಾಪಕ ಬಿ.ಎಸ್,ಕೊರಬು ವಿಶೇಶ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
