ಮುದ್ದೇಬಿಹಾಳ: ಜ.೨೮ ರಂದು ಸಂಜೆ ೫ಗಂಟೆಗೆ ಇಲ್ಲಿನ ವಿಬಿಸಿ ಹೈಸ್ಕೂಲ್ ಹೈಸ್ಕೂಲ್ ಮೈದಾನದಲ್ಲಿರುವ ಶ್ರೀ ಸಿದ್ದೇಶ್ವರ ವೇದಿಕೆಯಲ್ಲಿ ಸ್ವಾಮಿ ವಿವೇಕಾನಂದರ ೧೬೧ನೇ ಜಯಂತ್ಯೋತ್ಸವದ ಪ್ರಯುಕ್ತ ಸ್ವಾಮಿ ವಿವೇಕಾನಂದ ರಾಷ್ಟ್ರ, ರಾಜ್ಯ ಸದ್ಭಾವನಾ ಪ್ರಶಸ್ತಿ, ಧರ್ಮಯುದ್ಧ ದಿನದರ್ಶಿಕೆ ಲೋಕಾರ್ಪಣೆ ಹಾಗೂ ಸಾಂಸ್ಕೃತಿಕ ಯುವ ವೈಭವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಪುಂಡಲೀಕ ಮುರಾಳ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾಧನಾ ಮಹಿಳಾ ಒಕ್ಕೂಟ ಹಾಗೂ ಧರ್ಮಯುದ್ಧ ದಿನಪತ್ರಿಕೆ ಬಳಗದ ಸಂಯಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮದ ಸಾನಿಧ್ಯವನ್ನು ಸಿದ್ದನಕೊಳ್ಳದ ಶಿವಕುಮಾರ ಮಹಾಸ್ವಾಮಿಗಳು ವಹಿಸಲಿದ್ದು, ಸಚಿವ ಶಿವರಾಜ ತಂಗಡಗಿ ಉದ್ಘಾಟಿಸುವರು. ಕರ್ನಾಟಕ ಜಾನಪದ ವಿಶ್ವ ವಿದ್ಯಾಲಯದ ಕುಲಪತಿ ಟಿ.ಎಂ.ಭಾಸ್ಕರ್ ಪ್ರಶಸ್ತಿ ಪ್ರಧಾನ ಮಾಡಲಿದ್ದು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಬಾಜಪಾ ಮುಖಂಡ ಮಹೇಂದ್ರಕುಮಾರ ನಾಯಕ ಮತ್ತು ನೇತಾಜಿ ನಲವಡೆ ದಿನದರ್ಶಿಕೆ ಲೋಕಾರ್ಪಣೆಗೊಳಿಸಲಿದ್ದು, ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಮತ್ತು ದಿ ಕರ್ನಾಟಕ ಕೋ ಆಪ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಸಾಂಸ್ಕೃತಿಕ ಯುವ ವೈಭವದ ಉದ್ಘಾಟನೆಯನ್ನು ಅಹಿಲ್ಯಾದೇವಿ ಹೋಳ್ಕರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶೀ ಮಲ್ಲಿಕಾರ್ಜುನ ಮದರಿ ಮತ್ತು ಅಸ್ಕಿ ಫೌಂಡೆಶನ್ ಅಧ್ಯಕ್ಷ, ಸಮಾಜ ಸೇವಕ ಸಿ.ಬಿ ಅಸ್ಕಿ ಉದ್ಘಾಟಿಸಲಿದ್ದಾರೆ. ಒಕ್ಕೂಟದ ರಾಜ್ಯಾಧ್ಯಕ್ಷ ಎಸ್.ಬಾಲಾಜಿ ಆಶಯ ನುಡಿಗಳನ್ನಾಡಲಿದ್ದು, ಬಾಜಪಾ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗುರು ತಾರನಾಳ ಸೇರಿದಂತೆ ಮತ್ತೀತರರು ಅತಿಥಿಗಳಾಗಿ ಆಗಮಿಸಲಿರುವದಾಗಿ ತಿಳಿಸಿದರು.
ಈ ವೇಳೆ ತಾಲೂಕಾಧ್ಯಕ್ಷ ಮಹಾಂತೇಶ ಬೂದಿಹಾಳಮಠ, ಉಪಾಧ್ಯಕ್ಷ ಚಂದ್ರಶೇಖರ ಕಲಾಲ ಸದಸ್ಯರಾದ ರಪೀಕ ಶಿರೋಳ, ಕೃಷ್ಣ ಕುಂಬಾರ, ಬಾಪುಗೌಡ ಪಾಟೀಲ, ಶ್ರೀಕಾಂತ ಹಿರೇಮಠ ಸೇರಿದಂತೆ ಮತ್ತೀತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

