ಸಿಂದಗಿ: ಪಟ್ಟಣದ ಕೆಎಸ್ಆರ್ ಟಿಸಿ ಬಸ್‌ಡಿಪೋ ಬಳಿಯಿರುವ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದಲ್ಲಿ ಮಂಗಳವಾರ ಜ.23 ರಂದು ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ ೨೮ ನೇ ಜಾತ್ರಾ ಮಹೋತ್ಸವ-ಧರ್ಮಸಭೆ ಕಾರ್ಯಕ್ರಮ ಹಾಗೂ ಯಡಿಯೂರು ಶ್ರೀ ಸಿದ್ದಲಿಂಗೇಶ್ವರ ಪುರಾಣ ಪ್ರವಚನ ಮಹಾ ಮಂಗಲೋತ್ಸವ ಕಾರ್ಯಕ್ರಮದ ಸಮಾರಂಭದಲ್ಲಿ ಮಲಗೊಂಡ ಫಿಲಂ ಪ್ರೊಡಕ್ಷನ್ ಅಡಿಯಲ್ಲಿ ತಯಾರಾದ “ತುಷಾರ್” ಚಲನಚಿತ್ರದ ನಟ, ನಿರ್ದೇಶಕ, ನಿರ್ಮಾಪಕ ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ ಬಾಳೆಹೊನ್ನೂರು ರಂಭಾಪುರಿ ಪೀಠದ ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಜಗದ್ಗುರು ಪ್ರಸನ್ನರೇಣುಕಾ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರು ಗೌರವಿಸಿ ಸನ್ಮಾನಿಸಿದರು.
ಇತ್ತೀಚೆಗೆ “ತುಷಾರ್” ಚಿತ್ರಕ್ಕೆ ಬಾಗಲಕೋಟೆಯಲ್ಲಿ ಜರುಗಿದ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸಾಮಾಜಿಕ ಕಳಕಳಿ ಹಾಗೂ ಭಾವೈಕ್ಯತೆಯ ಸಂದೇಶ ಸಾರುವ ತುಷಾರ್ ಚಲನಚಿತ್ರ ಅತ್ಯುತ್ತಮ ಚಿತ್ರ ಎಂದು ಘೋಷಿಸಿ ಪ್ರಶಸ್ತಿ ನೀಡಲಾಗಿತ್ತು.
ಶಾಸಕ ಅಶೋಕ ಎಮ್ ಮನಗೂಳಿ ಅನೇಕ ಶ್ರೀಗಳು ಹಾಗೂ ರಾಜಕೀಯ ಮುಖಂಡರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

