ಬಸವನಬಾಗೇವಾಡಿ: ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಪಕ್ಷದ ಸಂಘಟಕರಾಗಿ ಹಲವಾರು ವರ್ಷಗಳಿಂದ ಪಕ್ಷಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಉತ್ತರ ಕರ್ನಾಟಕದ ವಿಶೇಷ ರಾಜಕಾರಣಿಯಾಗಿರುವ ಜಮಖಂಡಿಯ ನಜೀರ ಕೊಂಗನಳ್ಳಿ ಅವರಿಗೆ ನಿಗಮ ಮಂಡಳಿಯಲ್ಲಿ ಸ್ಥಾನವನ್ನು ನೀಡಬೇಕೆಂದು ನಜೀರ ಕೊಂಗನಳ್ಳಿ ಅಭಿಮಾನಿ ಬಳಗದ ಸದಸ್ಯರಾದ ಪಯಾಜಅಹ್ಮದ ತಂಬದ, ಲಾಲಾಸಾಬ ಚಳ್ಳಿಗಿಡದ, ಅಲಿ ಹುಬ್ಬಳ್ಳಿ, ಅಬ್ದುಲ್ ಬಾಗವಾನ ಶೇಖ್ ಚಳ್ಳಿಗಿಡದ ಅವರು ಕಾಂಗ್ರೆಸ್ ವರಿಷ್ಠರಿಗೆ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನಜೀರ ಕೊಂಗನಳ್ಳಿ ಅವರು ಈಗಾಗಲೇ ಕರ್ನಾಟಕ ರಾಜ್ಯ ಜವಳಿ ಮತ್ತು ಮೂಲಭೂತ ಸೌಕರ್ಯದ ಉಪಾಧ್ಯಕ್ಷರಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದಾರೆ. ಇವರೊಬ್ಬ ಸಜ್ಜನ ರಾಜಕಾರಣಿಯಾಗಿದ್ದಾರೆ. ಇವರ ಸೇವೆಯನ್ನು ಗುರುತಿಸಿ ನಿಗಮ ಮಂಡಳಿಯ ರಚನೆಯಲ್ಲಿ ಇವರಿಗೆ ಸ್ಥಾನಮಾನ ನೀಡುವಂತೆ ಕಾಂಗ್ರೆಸ್ ವರಿಷ್ಠರಿಗೆ ಮನವಿ ಮಾಡಿಕೊಂಡಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

