ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಸಂಸ್ಥಾನ ಹಿರೇಮಠದಲ್ಲಿ ಫೆ.2 ರಿಂದ 4 ರವರೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಬುಧವಾರ ಶ್ರೀಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿದರು.
ಫೆ.3 ರಂದು ಹಮ್ಮಿಕೊಂಡಿರುವ ಶ್ರೀಮಠದ ಶತಾಯುಷಿ ಸಂಗನಬಸವ ಕಲ್ಯಾಣ ಮಂಟಪ ಲೋಕಾರ್ಪಣೆ, ಉಭಯ ಶ್ರಿಗಳ ಧ್ವನಿ ಸುರುಳಿ ಬಿಡುಗಡೆ ಮತ್ತು ಸಂಗನಬಸವಶ್ರೀ ರಾಜ್ಯಮಟ್ಟದ ಪ್ರದಾನ ಸಮಾರಂಭಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಬುಧವಾರ ಶ್ರೀಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಅವರು ಆಹ್ವಾನ ಪತ್ರಿಕೆ ನೀಡುವ ಸಮಾರಂಭಕ್ಕೆ ಆಹ್ವಾನ ನೀಡಿದರು.
ನಂತರ ಇದೇ ಸಮಾರಂಭಕ್ಕೆ ಸಚಿವರಾದ ಎಚ್. ಕೆ. ಪಾಟೀಲ, ಶಿವಾನಂದ ಪಾಟೀಲ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಣಣ ಸವದಿ ಅವರಿಗೂ ಆಹ್ವಾನ ಪತ್ರಿಕೆ ನೀಡಿ ಆಹ್ವಾನ ನೀಡಿದರು.ಫೆ,4 ರಂದು ಹಮ್ಮಿಕೊಂಡಿರುವ ಡಾ.ಮಹಾಂತ ಶಿವಾಚಾರ್ಯರ 11 ನೇ ಪುಣ್ಯಾರಾಧನೆ, ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಅವರ ಪಟ್ಟಾಧಿಕಾರದ ದಶಮಾನೋತ್ಸವ, ಉಚಿತ ಸಾಮೂಹಿಕ ವಿವಾಹ ಮತ್ತು ನೂತನ ರಥೋತ್ಸವ ಲೋಕಾರ್ಪಣೆ ಸಮಾರಂಭಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅವರನ್ನು ಭೇಟಿಯಾಗಿ ಆಹ್ವಾನ ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷ, ವ್ಹಿಡಿಸಿಸಿ ಬ್ಯಾಂಕಿನ ನಿರ್ದೇಶಕ ಚಂದ್ರಶೇಖರ ಗೌಡ ಪಾಟೀಲ, ರಾಮು ಬಿರಾದಾರ, ಮಾಂತೇಶ ಮನಗೂಳಿ, ಭೀಮಣ್ಣ ಬನ್ನೂರ, ಸಿದ್ದು ಬಿರಾದಾರ, ಶ್ರೀಶೈಲ ಮನಗೂಳಿ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

