ವಿಜಯಪುರ: ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಸಂಯುಕ್ತಾಶ್ರಯದಲ್ಲಿ “ರಾಷ್ಟ್ರೀಯ ಮತದಾರರ ದಿನ”ದ ಅಂಗವಾಗಿ ಹಮ್ಮಿಕೊಂಡಿದ್ದ ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವೀಧಿಯನ್ನು ಪ್ರೌಢ ಶಾಲೆಯ ಮುಖ್ಯ ಗುರು ಇ.ಡಿ.ಲಮಾಣಿಯವರು ಭೋಧಿಸಿದರು.
ನಂತರ ಮಾತನಾಡಿದ ಅವರು. ಚುನಾವಣಾ ಪ್ರಕ್ರಿಯೆಯಲ್ಲಿ ಮತದಾನದಲ್ಲಿ ಭಾಗವಹಿಸಲು ಯುವಕರನ್ನು ಉತ್ತೇಜಿಸಲು ಈ ದಿನ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತಿದೆ. ಭಾರತ ಪ್ರಜಾಪ್ರಭುತ್ವ ರಾಷ್ಟ್ರ. ಪ್ರತಿಯೊಬ್ಬ ಪ್ರಜೆಗೂ ಮತದಾನದ ಮೂಲಭೂತ ಹಕ್ಕು ಇದೆ. ರಾಷ್ಟ್ರವನ್ನು ಮುನ್ನಡೆಸಲು, ಸಾಮಾನ್ಯ ಜನರ ಸಮಸ್ಯೆಗಳನ್ನು ಪರಿಹರಿಸಲು, ಬದಲಾವಣೆ ತರಲು ಸಾಧ್ಯವಾಗುತ್ತದೆ ಎಂದು ಭಾವಿಸುವವರಿಗೆ ತನ್ನ ನಾಯಕನನ್ನು ಆಯ್ಕೆ ಮಾಡುವ ಹಕ್ಕನ್ನು ಅವನು ಅಥವಾ ಅವಳು ಹೊಂದಿರುತ್ತಾರೆ. ರಾಷ್ಟ್ರೀಯ ಮತದಾರರ ದಿನವು ದೇಶದ ಭವಿಷ್ಯವು ಸುಳ್ಳಾಗಿರುವುದರಿಂದ ಭಾರತದ ಮಹತ್ವದ ಮೂಲವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಎಂ.ಬಿ.ಪೂಜಾರಿ, ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಗುರು ಸಂದೀಪ ರಾಠೋಡ, ಶಿಕ್ಷಕರಾದ ಎಸ್.ಕೆ.ಶಿಂಧೆ, ಆರ್.ವಿ.ಭುಜಂಗನವರ, ಎಸ್.ವಿ.ದೇಶಪಾಂಡೆ, ಜೆ.ಕೆ.ರಾಠೋಡ, ಎಸ್.ಡಿ.ಚವ್ಹಾಣ, ಆರ್.ಜಿ.ಜಾಧವ, ಎಸ್.ಎಂ.ಮಾಳಿ, ಸೋಮಶೇಖರ ರಾಠೋಡ, ಪಿ.ಕೆ.ಕೌಲಗಿ, ರೇಖಾ ರಜಪೂತ, ಆರ್.ಎಸ್.ಹಿರೇಮಠ, ಅಶೋಕ ರಾಠೋಡ ಸೇರಿದಂತೆ ಎಲ್ಲ ಶಿಕ್ಷಕ ಸಿಬ್ಬಂದಿ ವರ್ಗ ಹಾಗೂ ಬಿಎಡ್ ಪ್ರಶಿಕ್ಷಣಾರ್ಥಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

