ದೇವರಹಿಪ್ಪರಗಿ: ಮಹಿಳೆಯರು ಹಾಗೂ ಮಕ್ಕಳಿಗೆ ಸಮತೋಲಿತ ಆಹಾರ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ವಲಯ ಮೇಲ್ವಿಚಾರಕಿ ಶಾಂತಾ ನಾಯಿಕ್ ಹೇಳಿದರು.
ತಾಲ್ಲೂಕಿನ ಮಣೂರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಜರುಗಿದ ಪಾಲಕರ ಸಭೆ ಹಾಗೂ ಪೌಷ್ಠಿಕ ಆಹಾರ ಹಾಗೂ ಆರೋಗ್ಯ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಆಧುನಿಕತೆಗೆ ತಕ್ಕಂತೆ ನಮ್ಮ ಆಹಾರ ಪದ್ದತಿಯೂ ಬದಲಾಗುತ್ತಿದೆ. ಪೌಷ್ಠಿಕ ಆಹಾರ ಸಿಗುವುದು ಕಷ್ಟಕರವಾಗಿದೆ. ಗರ್ಭಿಣಿ ಮಹಿಳೆಯರು ಹಾಗೂ ಬೆಳೆಯುವ ಮಕ್ಕಳಿಗೆ ಮುಖ್ಯವಾಗಿ ಕಿಶೋರಿಯರಿಗೆ ಉತ್ತಮ ಗುಣಮಟ್ಟದ ಆಹಾರ ಆರೋಗ್ಯಯುತ ಜೀವನಕ್ಕೆ ಸಹಕಾರಿಯಾಗಬಲ್ಲದು ಅದಕ್ಕಾಗಿ ಮಹಿಳೆ ಮತ್ತು ಮಕ್ಕಳಿಗೆ ಸಮತೋಲಿತ, ಗುಣಮಟ್ಟದ, ಸತ್ವಯುತ ಆಹಾರದ ಬಗ್ಗೆ ಜಾಗೃತಿ ಮೂಡಿಸಬೇಕು. ನಾವು ಸಹ ಪಾಲಿಸಬೇಕು ಎಂದು ತಿಳಿಹೇಳಿದರು.
ಸಿಎಚ್‌ಓ ರುಕಿಯಾ ಬಾಗವಾನ, ಅಂಗನವಾಡಿ ಕಾರ್ಯಕರ್ತೆಯರಾದ ಶಾಂತಾ ಚಿಗರಿ, ಪ್ರೇಮಾ ನಡುವಿನಮನಿ ಮತ್ತು ಆಶಾ ಕಾರ್ಯಕರ್ತೆಯರು, ತಾಯಂದಿರು, ಮಕ್ಕಳು ಹಾಗೂ ಕಿಶೋರಿಯರು ಪಾಲ್ಗೊಂಡಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

