ಬಸವನಬಾಗೇವಾಡಿ: ದೇಶದ ಸಂವಿಧಾನವು ನಮಗೆ ನೀಡಿರುವ ಹಕ್ಕುಗಳನ್ನು ಪ್ರತಿಪಾದಿಸದೇ ಸಂವಿಧಾನ ಹೇಳಿರುವ ಕರ್ತವ್ಯಗಳನ್ನು ಎಲ್ಲ ನಾಗರಿಕರು ಪಾಲಿಸಿದರೆ ದೇಶವು ಪ್ರಗತಿಯತ್ತ ಸಾಗುತ್ತದೆ ಎಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಹೇಳಿದರು.
ಪಟ್ಟಣದ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ತಾಲೂಕಾಡಳಿತವು ಶುಕ್ರವಾರ ಹಮ್ಮಿಕೊಂಡಿದ್ದ ೭೫ ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಇಡೀ ಜಗತ್ತಿನಲ್ಲಿಯೇ ಅತ್ಯಂತ ಬೃಹತ್, ಲಿಖಿತ ಸಂವಿಧಾನ ನಮ್ಮದಾಗಿದೆ. ನಮ್ಮ ಸಂವಿಧಾನವು ರಾಜ್ಯನಿರ್ದೇಶಕ ತತ್ವಗಳನ್ನು, ಸ್ವತಂತ್ರ ನ್ಯಾಯಾಂಗ ವ್ಯವಸ್ಥೆ, ಸಂಸದೀಯ ವ್ಯವಸ್ಥೆ, ಜಾತ್ಯಾತೀತ ನಿಲುವು, ಏಕ ಪೌರತ್ವ, ವಯಸ್ಕ ಮತದಾನ ವ್ಯವಸ್ಥೆ ಸೇರಿದಂತೆ ಅನೇಕ ಮೌಲ್ಯಯುತ ಅಂಶಗಳನ್ನು ಹೊಂದಿದೆ. ಇಂತಹ ಸಂವಿಧಾನ ಪಡೆದ ನಾವೆಲ್ಲರೂ ಧನ್ಯರು ಎಂದರು.
ಮೂಲ ಸಂವಿಧಾನದಲ್ಲಿ ೩೯೫ ವಿಧಿಗಳು, ೨೨ ಭಾಗಗಳು, ೮ ಅನುಸೂಚಿಗಳಿದ್ದು. ಹಲವಾರು ತಿದ್ದುಪಡಿ ಕಂಡು ಪ್ರಸ್ತುತ ನಮ್ಮ ಸಂವಿಧಾನದಲ್ಲಿ ೪೭೦ ವಿಧಿಗಳು,೨೫ ಭಾಗಗಳು, ೧೨ ಅನುಸೂಚಿಗಳನ್ನು ಒಳಗೊಂಡಿದೆ. ನಮ್ಮ ಸಂವಿಧಾನದ ಪೂರ್ವ ಪೀಠಿಕೆಯನ್ನು ನಾವು ಓದಿದರೆ ಇಡೀ ಸಂವಿಧಾನದ ತಿರುಳು ಅರ್ಥವಾಗುತ್ತದೆ. ನಾವೆಲ್ಲರೂ ಸಂವಿಧಾನದ ಆಶಯದಂತೆ ಜೀವನವನ್ನು ಸಾಗಿಸುವ ಮೂಲಕ ದೇಶದ ಕೀರ್ತಿಯನ್ನು ಉತ್ತುಂಗಕ್ಕೆ ಏರುವಂತೆ ಮಾಡುವ ಸಂಕಲ್ಪ ಮಾಡಬೇಕೆಂದರು.
ವೇದಿಕೆಯಲ್ಲಿ ತಾಪಂ ಇಓ ಡಾ.ಯುವರಾಜ ಹನಗಂಡಿ, ಬಿಇಓ ವಸಂತ ರಾಠೋಡ, ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ, ಪಿಐ ಶರಣಗೌಡ ನ್ಯಾಮಣ್ಣನವರ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ, ಮಾಜಿ ಸೈನಿಕರಾದ ಕೆ.ಎಸ್.ಲೆಂಕೆನ್ನವರ, ಬಸವರಾಜ ತಳವಾರ, ವಿಠ್ಠಲ ಹಳ್ಳಿ, ಗುರಪ್ಪ ಲಮಾಣಿ, ಬಸವರಾಜ ದೊಡಮನಿ ಇತರರು ಇದ್ದರು. ಕ್ಷೇತ್ರಸಮನ್ವಾಧಿಕಾರಿ ಪಿ.ಯು.ರಾಠೋಡ ಸ್ವಾಗತಿಸಿದರು. ಶಿಕ್ಷಕರಾದ ಬಿ.ವ್ಹಿ.ಚಕ್ರಮನಿ, ಕೊಟ್ರೇಶ ಹೆಗಡ್ಯಾಳ ನಿರೂಪಿಸಿದರು. ಶಿಕ್ಷಕ ಶಿವಾನಂದ ಮಡಿಕೇಶ್ವರ ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

