ವಿಜಯಪುರ: ವಿಜಯಪುರ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತ ಸಂವಿಧಾನ ಜಾರಿಗೆ ಬಂದ ಪವಿತ್ರ ದಿನ ಗಣರಾಜ್ಯೋತ್ಸವ, ಡಾ.ಬಿ.ಆರ್. ಅಂಬೇಡ್ಕರ ಅವರು ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನ ರಚಿಸಿದ್ದಾರೆ, ಹಕ್ಕು ಗಳು, ಕರ್ತವ್ಯಗಳು, ರಾಜ್ಯ ನಿರ್ದೇಶಕ ತತ್ವಗಳು ಹೀಗೆ ಜಗತ್ತಿನಲ್ಲೇ ಮಾದರಿ ಸಂವಿಧಾನವಾಗಿದೆ ಎಂದರು.
ಸಂಸದ ರಮೇಶ ಜಿಗಜಿಣಗಿ, ಬೆಳಗಾವಿ ವಿಭಾಗ ಪ್ರಭಾರಿಗಳಾದ ಚಂದ್ರಶೇಖರ್ ಕವಟಗಿ, ಬೆಳಗಾವಿ ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ್, ಕರ್ನಾಟಕ ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ರಾಜ್ಯಾಧ್ಯಕ್ಷ ವಿಜುಗೌಡ ಪಾಟೀಲ್, ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ, ಮಲ್ಲನಗೌಡ ಪಾಟೀಲ, ಬಸವರಾಜ ಬಿರಾದಾರ ಹಾಗೂ ಪಕ್ಷದ ಜಿಲ್ಲಾ ಪದಾಧಿಕಾರಿಗಳು ನಗರ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

