Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂಡಿ ಜಿಲ್ಲೆ ಮಾಡದಿದ್ದರೆ ರಾಜಕೀಯ ನಿವೃತ್ತಿ!
(ರಾಜ್ಯ ) ಜಿಲ್ಲೆ

ಇಂಡಿ ಜಿಲ್ಲೆ ಮಾಡದಿದ್ದರೆ ರಾಜಕೀಯ ನಿವೃತ್ತಿ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಸ್ಪಷ್ಠನೆ

ಇಂಡಿ: ನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಿಯೇ ಮುಂದಿನ ೨೦೨೮ರ ವಿಧಾನ ಸಭೆಯ ಚುನಾವಣೆ ಎದುರಿಸುತ್ತೇನೆ. ಜಿಲ್ಲೆ ಮಾಡದಿದ್ದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ. ನಾನು ಯಾವತ್ತಿಗೂ ಬಧ್ಧತೆಯ ರಾಜಕಾರಣ ಮಾಡುತ್ತೇನೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಪುನರುಚ್ಚರಿಸಿದ್ದಾರೆ.
ಶುಕ್ರವಾರ ಇಂಡಿ ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಇಂಡಿ ತಾಲ್ಲೂಕಿನ ಅಭಿವೃದ್ಧಿಗಾಗಿ ಚಿಮ್ಮಲಗಿ, ಮುಳವಾಡ, ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ನಮ್ಮ ಭಾಗದ ರೈತರ ಸಂಕಷ್ಟಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ರೇವಣಿಸಿದ್ದೇಶ್ವರ ಏತ ನೀರಾವರಿ ಯೋಜನೆಯ ಕಾಮಗಾರಿ ಪ್ರಾರಂಭಿಸಲಾಗಿದೆ. ಕೋಲಾರದಿಂದ ಚಡಚಣ ತಾಲ್ಲೂಕಿನ ಸಾವಳಸಂಗ ಗ್ರಾಮದ ಗುಡ್ಡದವರೆಗೆ ನೀರು ತಂದು ಇಂಡಿ ತಾಲ್ಲೂಕಿನ ೨೮ ಕೆರೆಗಳು ಮತ್ತು ಚಡಚಣ ತಾಲ್ಲೂಕಿನ ೮ ಕೆರೆಗಳನ್ನು ತುಂಬಿಸುವ ಕೆಲಸ ಕೈಗೆತ್ತಿಕೊಂಡಿದೆ ಎಂದರು.
ಇಂಡಿ, ಚಡಚಣ, ಸಿಂದಗಿ ತಾಲ್ಲೂಕುಗಳ ದಂಡೆಗೆ ಹರಿದಿರುವ ಭೀಮಾ ನದಿಯಿಂದ ೧೫ ಟಿಎಂಸಿ ನೀರಿನ ಬಳಕೆಯಾಗಬೇಕಿದೆ. ಈ ಬಗ್ಗೆ ಬರುವ ಅಧಿವೇಶನದಲ್ಲಿ ಸರ್ಕಾರಕ್ಕೆ ಒತ್ತಾಯಿಸಲಾಗುವದು. ಈ ಮೂರು ತಾಲ್ಲೂಕುಗಳ ಬರ ನಿಭಾಯಿಸಲು ಸರ್ಕಾರದ ನೀರಾವರಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಜಾರಿಗೆ ತರಬೇಕಿದೆ. ಆ ನಿಟ್ಟಿನಲ್ಲಿ ಪ್ರಯತ್ನಿಸಲಾಗುವದು ಎಂದರು.
ಇಂಡಿ ತಾಲ್ಲೂಕಿನ ಪಡನೂರ ಗ್ರಾಮದ ಬಳಿ ಭೀಮಾ ನದಿಗೆ ಅಡ್ಡಲಾಗಿ ಸೇತುವೆ ಕಟ್ಟಲು ಕ್ರೀಯಾ ಯೋಜನೆ ಸಿದ್ದಗೊಂಡಿದ್ದು, ಬರುವ ಒಂದು ವರ್ಷದಲ್ಲಿ ಸೇತುವೆ ಲೋಕಾರ್ಪಣೆಯಾಗುವದು ಎಂದು ಭರವಸೆ ನೀಡಿದ ಅವರು ಈ ಸೇತುವೆಯಾದರೆ ಇಂಡಿಯಿಂದ ಪಡನೂರ, ತಡವಾಳ ಮಾರ್ಗವಾಗಿ ನೇರವಾಗಿ ಸೋಲಾಪೂರ ತಲುಪಬಹುದು ಎಂದರು.
ಇಂಡಿ ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನಕ್ಕೆ ವಿಶಾಲವಾದ ರಸ್ತೆ ಮಾಡಲು ೧.೫ ಕೋಟಿ ಅನುದಾನ ಅವಶ್ಯವಿದ್ದು, ಜನಸಾಮಾನ್ಯರು, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ನಾನು ಸೇರಿ ಇಷ್ಟರಲ್ಲಿಯೇ ರಸ್ತೆ ಮಾಡಿಸಲಾಗುವುದು ಎಂದರು.
ಮುಂದಿನ ದಿನಗಳಲ್ಲಿ ಇಂಡಿ ಪಟ್ಟಣದಲ್ಲಿ ಅಕ್ಕಮಹಾದೇವಿ ವಿಶ್ವ ವಿದ್ಯಾಲಯದ ಕೇಂದ್ರ ಸ್ಥಾಪನೆ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ, ಚಡಚಣ ತಾಲ್ಲೂಕಿನ ಶಿರಾಡೋಣದಿಂದ ಲಿಂಗಸೂರು ಪಟ್ಟಣದವರೆಗೆ ರಸ್ತೆ ಅಗಲೀಕರಣಕ್ಕೆ ಮಂಜೂರಾತಿ ಸಿಕಿದ್ದು, ಇಷ್ಟರಲ್ಲಿಯೇ ರಸ್ತೆ ಕಾಮಗಾರಿ ಪ್ರಾರಂಭಿಸಲಾಗುವದು ಎಂದರು. ಇಂಡಿ ತಾಲ್ಲೂಕಿನ ಹಿರೇಬೇವನೂರ ಗ್ರಾಮದ ಜ್ಞಾನಯೋಗಿ ಡಾ.ಶಿವಕುಮಾರ ಸಕ್ಕರೆ ಕಾರ್ಖಾನೆ ಸ್ಥಗಿತಗೊಂಡಿದ್ದು ರೈತರಿಗೆ ತೊಂದರೆಯಾಗಿದೆ. ಅದನ್ನು ಮುಂದಿನ ಕಬ್ಬು ಅರೆಯುವ ಹಂಗಾಮಿನ ಅವಧಿಯೊಳಗೆ ಪುನರ್ ಪ್ರಾರಂಭಿಸಲು ಪ್ರಯತ್ನಗಳು ನಡೆದಿವೆ ಎಂದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.