Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿಯ ವಿವಿಧೆಡೆ ಗಣರಾಜ್ಯೋತ್ಸವ ಸಂಭ್ರಮ
(ರಾಜ್ಯ ) ಜಿಲ್ಲೆ

ಸಿಂದಗಿಯ ವಿವಿಧೆಡೆ ಗಣರಾಜ್ಯೋತ್ಸವ ಸಂಭ್ರಮ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ರಾಜ್ಯದ ವಿವಿಧ ತಾಲೂಕುಗಳಲ್ಲಿ ಈ ಬಾರಿ ಮಳೆಯ ಕೊರತೆ ಉಂಟಾಗಿ ಬರಗಾಲ ಛಾಯೆ ಮೂಡಿದೆ. ಅದರಲ್ಲಿ ಸಿಂದಗಿ ತಾಲೂಕು ಸಹ ಒಂದು ಎಂದು ತಾಲೂಕು ದಂಡಾಧಿಕಾರಿ ಪ್ರದೀಪಕುಮಾರ ಹಿರೇಮಠ ಹೇಳಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಗಣರಾಜ್ಯೋತ್ಸವ ಸಮಿತಿ ಹಮ್ಮಿಕೊಂಡ ತಾಲೂಕು ೭೫ನೇ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸಂವಿಧಾನದ ಮೂರು ಅಂಗಗಳಾದ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ ಸಮರ್ಪಕವಾಗಿ ಕಾಯ್ ನಿರ್ವಹಿಸಿದಾಗ ಕ್ಷೇತ್ರವು ಬೆಳವಣಿಗೆಯಾಗುತ್ತೆ. ಅಟಲಜೀ ಜನಸ್ನೇಹಿ ಕೇಂದ್ರದ ೪೪ ಸೇವೆಗಳನ್ನು ಜನರಿಗೆ ತಲುಪಿಸುವಲ್ಲಿ ವಿಜಯಪುರ ಜಿಲ್ಲೆಯ ೧೩ ತಾಲೂಕುಗಳಲ್ಲಿ ಸಿಂದಗಿ ಪ್ರಥಮ ಸ್ಥಾನದಲ್ಲಿದೆ. ಹೋಬಳಿ ಮಟ್ಟದಲ್ಲಿ ೩ನೆಯ ಸ್ಥಾನದಲ್ಲಿದೆ. ತಾಲೂಕು ಕಂದಾಯ ನ್ಯಾಯಾಲಯದಲ್ಲಿ ೨ ಮತ್ತು ೫ವರ್ಷದ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಇನ್ನೂ ೬ ತಿಂಗಳಿಗಿಂತ ಹಿಂದಿನ ಯಾವ ಪ್ರಕರಣಗಳಿಲ್ಲ. ಒಂದು ಪೈಕಿ ಪಾಣಿ ಪ್ರಕರಣ ತಾಂತ್ರಿಕ ದೋಷದಿಂದ ಮಾತ್ರ ಬಾಕಿಯಿದೆ ಎಂದರು.
ಇದೇ ಸಂದರ್ಭದಲ್ಲಿ ಸಿಪಿಐ ಡಿ.ಹುಲುಗಪ್ಪ, ನೌಕರರ ಸಂಘದ ತಾಲೂಕಾಧ್ಯಕ್ಷ ಅಶೋಕ ತೆಲ್ಲೂರ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಶ್ರೀಶೈಲ ಯಳಮೇಲಿ ಮಾತನಾಡಿದರು.
ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ ಬಿರಾದಾರ, ಪುರಸಭೆ ಮುಖ್ಯಾಧಿಕಾರಿ ಗುರುರಾಜ ಚೌಕಿಮಠ, ಸಹಾಯಕ ಕೃಷಿ ನಿರ್ದೇಶಕ ಎಚ್.ವೈ ಸಿಂಗೆಗೊಳ ವೇದಿಕೆಯಲ್ಲಿದ್ದರು.
ಪಿಎಸ್‌ಐ ಭೀಮಣ್ಣ ರಬಕವಿ, ಅಪರಾಧ ವಿಭಾಗದ ಪಿಎಸ್‌ಐ ಅಂಗಡಿ, ಅಬಕಾರಿ ವೃತ್ತ ನಿರೀಕ್ಷಕಿ ಆರತಿ ಖೈನೂರ, ಸಿಡಿಪಿಒ ಶಂಭುಲಿಂಗ ಹಿರೇಮಠ, ಅಗ್ನಿ ಶಾಮಕ ದಳದ ಅಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಸೇರಿ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹಾಜರಿದ್ದರು.
ತಾಪಂ ಇಒ ರಾಮು ಅಗ್ನಿ ಸ್ವಾಗತಿಸಿದರು. ಜಿ.ಪಿ.ಪೋರವಾಲ ಕಾಲೇಜಿನ ದೈಹಿಕ ನಿರ್ದೇಶಕ ರವಿ ಗೋಲಾ ನಿರೂಪಿಸಿದರು.
ಈ ವೇಳೆ ಚನ್ನವೀರ ಪ್ರೌಢಶಾಲೆ, ಜ್ಞಾನ ಭಾರತಿ, ಎಮ್‌ಪಿಕೆಬಿಎಸ್ ಹಾಗೂ ಎಮ್‌ಎಮ್‌ಟಿಎಸ್ ಶಾಲೆ, ಆದರ್ಶ ವಿದ್ಯಾಲಯ ಹಾಗೂ ಜಿ.ಪಿ.ಪೋರವಾಲ್ ಕಾಲೇಜಿನ ಎನ್‌ಸಿಸಿ ಕೆಡೆಟ್ ವಿದ್ಯಾರ್ಥಿಗಳಿಂದ ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.
ಶ್ರೀ ಪದ್ಮರಾಜ ಮಹಿಳಾ ಕಾಲೇಜು:
ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಕಾಲೇಜಿನಲ್ಲಿ ೭೫ನೇ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು.
ಇದೇ ವೇಳೆ ಪದವಿ ಪ್ರಾಚಾರ್ಯ ಎಸ್.ಎಂ ಪೂಜಾರಿ, ಎಂ.ಎಸ್.ಹೈಯ್ಯಾಳಕರ, ಉಪನ್ಯಾಸಕರಾದ ಜಿ.ಎ.ನಂದಿಮಠ, ಜಿ.ಎಸ್.ಕುಲಕರ್ಣಿ, ಮಹಾಂತೇಶ ನೂಲಾನವರ, ಎಸ್.ಸಿ ದುದ್ದಗಿ, ಎಲ್.ಎಮ್ ಮಾರ್ಸನಳ್ಳಿ, ಹೇಮಾ ಕಾಸರ, ಯು.ಸಿ ಪೂಜೇರಿ, ಎ.ಎ.ಕೊಕನಿ, ಸತೀಶ ಕಕ್ಕಸಗೇರಿ, ಶಂಕರ ಕುಂಬಾರ, ವಿಜಯಲಕ್ಷ್ಮಿ ಭಜಂತ್ರಿ, ಮಂಗಳಾ ಈಳಗೇರ, ಡಿ.ಎಂ.ಪಾಟೀಲ ಸೇರಿದಂತೆ ಅನೇಕರಿದ್ದರು.
ಬ್ಲಾಕ್ ಕಾಂಗ್ರೆಸ್ ಕಛೇರಿ:
ಪಟ್ಟಣದ ಎಪಿಎಂಸಿಯಲ್ಲಿರುವ ಸಿಂದಗಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ೭೫ನೇ ಗಣರಾಜ್ಯೋತ್ಸವ ಆವರಣೆ ಮಾಡಲಾಯಿತು.
ಇದೇ ವೇಳೆ ಬ್ಲಾಕ್ ಕಾಂಗ್ರೆಸ್ ಸಮಿತಿ ತಾಲೂಕಾಧ್ಯಕ್ಷ ಸುರೇಶ ಪೂಜಾರ, ಮಹಾನಂದ ಬಮ್ಮಣ್ಣಿ, ಡಾ.ಶಿವಾನಂದ ಹೊಸಮನಿ, ಸುನಂದಾ ಯಂಪುರೆ ಸೇರಿದಂತೆ ಕಾರ್ಯಕರ್ತರು ಇದ್ದರು.
ತಾಲೂಕು ಸಾರ್ವಜನಿಕ ಆಸ್ಪತ್ರೆ:
ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ೭೫ನೇ ಗಣರಾಜ್ಯೋತ್ಸವದ ಆವರಣೆ ಮಾಡಲಾಯಿತು.
ಈ ವೇಳೆ ತಾಲೂಕು ಆರೋಗ್ಯಾಧಿಕಾರಿ ಎ.ಎ ಮಾಗಿ, ರಾಜಶೇಖರ ನರಗೋದಿ, ಡಾ.ಮಹಾಂತೇಶ ಹಿರೇಮಠ, ಎಂ.ಪಿ ಸಾಗರ, ಡಾ. ಬಡಿಗೇರ ಹಾಗೂ ಡಾ.ರಾಠೋಡ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.
ಮಹಿಳಾ ವಸತಿ ನಿಲಯ:
ಪಟ್ಟಣದ ಆರ್.ಡಿ.ಪಾಟೀಲ ಕಾಳೇಜಿನ ಎದುರಗಡೆಯಿರುವ ಮಹಿಳಾ ವಸತಿ ನಿಲಯದಲ್ಲಿ ೭೫ನೇ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು.
ಈ ವೇಳೆ ಸಿಡಿಪಿಒ ಶಂಭುಲಿಂಗ ಹಿರೇಮಠ, ಆಪ್ತಸಮಾಲೋಚಕಿ ಸುಜಾತಾ ಕಲಬುರ್ಗಿ, ರಶ್ಮಿ ನೂಲಾನವರ, ವಿದ್ಯಾ ದೇಸಾಯಿ ಇದ್ದರು.
ಪ್ರೇರಣಾ ಶಾಲೆ:
ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಿಂದಗಿ ಸಹಯೋಗದಲ್ಲಿ ಅಮೃತ ಮಹೋತ್ಸವ ಸಂಭ್ರಮದ ೭೫ನೇ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ಸಂಸ್ಥೆಯ ಅಧ್ಯಕ್ಷ ಆರ್.ಡಿ ಕುಲಕರ್ಣಿ, ಮುಖ್ಯ ಗುರುಮಾತೆ ಎಸ್.ಐ ಅಸ್ಕಿ, ಸಂಸ್ಥೆಯ ನಿರ್ದೇಶಕ ಪಿ.ಡಿ ಕುಲಕರ್ಣಿ, ವಿದ್ಯಾಶ್ರೀ ಅಂಬಲಗಿ, ಸತೀಶ್ ಕುಲಕರ್ಣಿ, ದ್ರಾಕ್ಷಾಯಿಣಿ ಹುಗ್ಗಿ ಸೇರಿದಂತೆ ಸಂಸ್ಥೆಯ ನಿರ್ದೇಶಕ ಮಂಡಳಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.