ಬಸವನಬಾಗೇವಾಡಿ: ಕ್ರೀಡೆಯಲ್ಲಿ ಭಾಗವಹಿಸುವಿಕೆಯು ಮನೋಭಾವ ಬೆಳೆಸಿಕೊಂಡರೆ ಜೀವನದಲ್ಲಿ ಗೆಲುವು ಸಿಗಲು ಸಹಕಾರಿಯಾಗುತ್ತದೆ ಎಂದು ವ್ಹಿಡಿಸಿಸಿ ಬ್ಯಾಂಕ್ ನಿರ್ದೇಶಕಿ ಸಂಯುಕ್ತ ಪಾಟೀಲ ಹೇಳಿದರು.
ಪಟ್ಟಣದ ಬಸವೇಶ್ವರ ಪಪೂ. ಕಾಲೇಜು ಆವರಣದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಕಂದಾಯ ಇಲಾಖೆ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ವಿವಿಧ ಇಲಾಖೆಗಳ ಕ್ರಿಕೆಟ್ ಪಂದ್ಯಾವಳಿಗೆ ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ಜೀವನದಲ್ಲಿ ಕ್ರೀಡೆ ಮನುಷ್ಯನನ್ನು ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಡಗೊಳಿಸುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ತಮ್ಮ ದೈನಂದಿನ ಕೆಲಸದೊಂದಿಗೆ ಕ್ರೀಡಾ ಚಟುವಟಿಕೆಯಲ್ಲಿ ಭಾಗಹಿಸುವಂತಾಗಬೇಕು. ಸರ್ಕಾರಿ ನೌಕರ ಬಾಂಧವರು ತಮ್ಮ ಕೆಲಸದ ಒತ್ತಡದ ನಡುವೆಯೂ ಸಾಮಾಜಿಕ ಮನೋಭಾವವನ್ನು ಮೈಗೂಡಿಸಿಕೊಂಡು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದು ಮತ್ತು ಭಾಗಬಹಿಸುವದು ಅಭಿನಂದನೀಯ ಎಂದರು.
ಬಸವನಬಾಗೇವಾಡಿ ಮತಕ್ಷೇತ್ರವು ಸಾಕಷ್ಟು ಅಭಿವೃದ್ದಿ ಹೊಂದುವ ಮೂಲಕ ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವಾಗಿದೆ . ಕ್ಷೇತ್ರದ ಅಭಿವೃದ್ದಿಯಲ್ಲಿ ನನ್ನ ತಂದೆ ಸಚಿವ ಶಿವಾನಂದ ಪಾಟೀಲ ಅವರೊಂದಿಗೆ ಕ್ಷೇತ್ರದ ಎಲ್ಲ ಇಲಾಖೆಯ ಅಧಿಕಾರಿಗಳು ಹಾಗೂ ನೌಕರರ ಬಾಂಧವರು ತಮ್ಮ ಸಹಕಾರ ನೀಡುವ ಮೂಲಕ ಕ್ಷೇತ್ರದ ಅಭಿವೃದ್ದಿಗೆ ಕೈ ಜೋಡಿಸಿದ್ದಾರೆ ಎಂದರು.
ತಹಸೀಲ್ದಾರ ಯಮನಪ್ಪ ಸೋಮನಕಟ್ಟಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ನೌಕರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ, ಭೂ ಮಾಪನ ಇಲಾಖೆಯ ಅಧಿಕಾರಿ ಬಿ.ಬಿ. ವಗ್ಗಣ್ಣನವರ, ಬಿಇಓ ವಸಂತ ರಾಠೋಡ, ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್. ಚಿತ್ತರಗಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಾಹೇಬಲಾಲ ದಳವಾಯಿ, ಉಪಪ್ರಾಚಾರ್ಯ ರಮೇಶ ಪೂಜಾರಿ, ಕಾನಿಪ ಅಧ್ಯಕ್ಷ ಅಜೀಜ ಬಳಬಟ್ಟಿ, ವಕೀಲರ ಸಂಘದ ಅಧ್ಯಕ್ಷ ಎಚ್. ಎಸ್. ಗುರಡ್ಡಿ ಇತರರು ಇದ್ದರು.
ರಾಹುಲ ಪಾಟೀಲ, ಪ್ರಶಾಂತ ಪಾಟೀಲ, ಶ್ರೀಶೈಲ ಮಾನೆ ಅವರು ಅಂಪೈರ್ ಗಳಾಗಿ ಕಾರ್ಯನಿರ್ವಹಿಸಿದರು.
ಪಂದ್ಯಾವಳಿಯಲ್ಲಿ ಕಂದಾಯ, ಸಮಾಜ ಕಲ್ಯಾಣ ಇಲಾಖೆ, ಅಗ್ನಿ ಶಾಮಕ, ಪೊಲೀಸ ಇಲಾಖೆ, ಕಾರ್ಯನಿರತ ಪತ್ರಕರ್ತರ ಸಂಘ., ಆರೋಗ್ಯ ಇಲಾಖೆ, ಕೆ ಎಸ್ ಆರ್ ಟಿ ಸಿ., ಪುರಸಭೆ ಹಾಗೂ ನ್ಯಾಯಾಂಗ ಇಲಾಖೆಯ ತಂಡಗಳು ಭಾಗವಹಿಸಿವೆ.
ಇಂದು ಜರುಗಿದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಅಗ್ನಿಶಾಮಕ ಮತ್ತು ಪೊಲೀಸ್ ಇಲಾಖೆ ಹಾಗೂ ಹೆಸ್ಕಾಂ ಮತ್ತು ಕಂದಾಯ ಇಲಾಖೆಯೊಂದಿಗೆ ಜರುಗಿದ ಸ್ಪರ್ಧೆ ರೋಚಕವಾಗಿ ಜರುಗಿತು.
Subscribe to Updates
Get the latest creative news from FooBar about art, design and business.
Related Posts
Add A Comment

