ಮುದ್ದೇಬಿಹಾಳ: ಫೆ.೧ ರಂದು ಬೆ.೧೦-೩೦ ಕ್ಕೆ ಪಟ್ಟಣದ ಬಾಲಕಿಯರ ಪ್ರೌಢ ಶಾಲೆಯ ಸಾಂಸೃತಿಕ ವೇದಿಕೆಯಲ್ಲಿ ಮಾಜಿ ಶಾಸಕರಾದ ಲಿಂ. ಎಂ.ಎಂ.ಸಜ್ಜನ ಅವರ ದ್ವಿತೀಯ ಪುಣ್ಯ ಸ್ಮರಣೆ ಹಾಗೂ ದತ್ತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ತಾಲೂಕು ಶರಣ ಸಾಹಿತ್ಯ ಪರಿಷತ್ತು, ಲಿಂಗೈಕ್ಯರ ಅಭಿಮಾನಿ ಬಳಗ ಹಾಗೂ ಸಜ್ಜನ ಪರಿವಾರದ ಸಹಯೋಗದೊಂದಿಗೆ ನಡೆಯುವ ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕೊಲ್ಹಾರದ ದಿಗಂಬರೇಶ್ವರ ಸಂಸ್ಥಾನಮಠದ ಪರಮ ಪೂಜ್ಯ ಯೋಗಿ ಕಲ್ಲಿನಾಥ ದೇವರು ವಹಿಸಲಿದ್ದು ಶಾಸಕ ಸಿ.ಎಸ್.ನಾಡಗೌಡರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಾಗಲಕೋಟದ ಮಾಜಿ ಶಾಸಕ ಎಸ್.ಜಿ.ನಂಜಯ್ಯನಮಠ, ಮುತ್ತಗಿಯ ರಮೇಶ ಸೂಳಿಭಾವಿ, ಗಣ್ಯ ವ್ಯಾಪಾರಿ ಬಸವರಾಜ ಮೋಟಗಿ ಆಗಮಿಸಲಿದ್ದು, ವೀರಶೈವ ವಿದ್ಯಾ ವರ್ಧಕ ಸಂಘದ ಅಧ್ಯಕ್ಷ ವಿ.ಎಂ.ನಾಗಠಾಣ, ಚೇರಮನ್ ಎಂ.ಎಸ್.ನಾವದಗಿ, ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಸವರಾಜ ನಾಲತವಾಡ ಗೌರವ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
