ಆಲಮೇಲ: ಅಯೋಧ್ಯೆ ಶ್ರೀರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಂದಂತಹ ಆಲಮೇಲದ ಶ್ರೀ ಗುರು ಸಂಸ್ಥಾನ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರಿಗೆ ವಿಶ್ವ ಹಿಂದೂ ಪರಿಷತ್, ಗ್ರಾಮಸ್ಥರು, ಶ್ರೀ ಮಠದ ಭಕ್ತರು ಶನಿವಾರ ಅದ್ದೂರಿ ಸ್ವಾಗತ ಕೋರಿದರು.
ಇದೇ ಜ. ೨೨ ರಂದು ಅಯೋಧ್ಯೆ ಶ್ರೀ ರಾಮಮಂದಿರದ ಬಾಲರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಆಲಮೇಲದ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರಿಗೆ ಅಯೋದ್ಯೇ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹಾಗೂ ವಿಶ್ವ ಹಿಂದೂ ಪರಿಷತ್ ಆಹ್ವಾನದ ಮೇರೆಗೆ ಅಯೋಧ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶನಿವಾರ ಆಲಮೇಲ ಪಟ್ಟಣಕ್ಕೆ ಆಗಮಿಸಿದ ಅವರಿಗೆ ಅದ್ದೂರಿ ಸ್ವಾಗತ ಕೋರಿದರು.
ಯಕಂಚಿಯ ಅಭಿನವ ರುದ್ರಮುನಿ ಶಿವಾಚಾರ್ಯರು, ತಡವಾಳದ ರಾಚೋಟೇಶ್ವರ ಶಿವಾಚಾರ್ಯರು, ಗುರಲಿಂಗ ಶಿವಾಚಾರ್ಯರು, ಕುಮಸಗಿ ಶಿವಾನಂದ ಶಿವಾಚಾರ್ಯರು ಮುಂತಾದ ಪೂಜ್ಯರ ನೇತೃತ್ವದಲ್ಲಿ ಸ್ವಾಗತಿಸಿ ಪಟ್ಟಣದ ಆಂಜನೆಯ ದೇವಸ್ಥಾನದಿಂದ ಮೆರವಣಿಗೆ ಮೂಲಕ ಹಿರೇಮಠಕ್ಕೆ ಕರೆತರಲಾಯಿತು.
Subscribe to Updates
Get the latest creative news from FooBar about art, design and business.
Related Posts
Add A Comment

