ಕೊಲ್ಹಾರ: ಪ್ರಜೆಗಳು ದೇಶದ ಸಂವಿಧಾನದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಾರೆ. ದೇಶದ ಜನರಿಗೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಕೆಲಸ ನಡೆಯುತ್ತಿರುವದರಿಂದ ಪ್ರಜಾಪ್ರಭುತ್ವಕ್ಕೆ ಒಂದು ಅರ್ಥ ಬರುತ್ತಿದೆ. ಶಿಕ್ಷಣ ಮುಖಾಂತರ ಶೋಷಣೆ ರಹಿತ ಸಮಾಜ ನಿರ್ಮಾಣ ಮಾಡುವದು ಸರ್ಕಾರದ ಗುರಿಯಾಗಿರುತ್ತದೆ ಎಂದು ತಹಶೀಲ್ದಾರ ಎಸ್.ಎಸ್.ನಾಯಕಲ್‌ಮಠ ಹೇಳಿದರು.
ಪಟ್ಟಣದ ಕನ್ನಡ ಗಂಡು ಮಕ್ಕಳ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ತಾಲೂಕಾ ಆಡಳಿತ ವತಿಯಿಂದ ನಡೆದ ೭೫ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾರ್ವಜನಿಕ ಧ್ವಜಾರೋಹಣ ನೇರವೇರಿಸಿ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ವಿಶೇಷ ಸಾಧನೆಗೈದ ಮಹನೀಯರನ್ನು ಕೊಲ್ಹಾರ ತಾಲೂಕಾ ಆಡಳಿತ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಉಮೇಶ ಚಲವಾದಿ, ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ ಮುದ್ದೀನ, ಕೊಲ್ಹಾರ ಪಿಎಸ್‌ಆಯ್ ಪ್ರವೀಣಕುಮಾರ ಗರೇಬಾಳ, ಕೃಷಿ ಇಲಾಖೆ ಅಧಿಕಾರಿ ಪುರೋಹಿತ, ಆರೋಗ್ಯ ಇಲಾಖೆಯ ಲಕ್ಷ್ಮಿ ತೆಲ್ಲೂರ, ಉಪಖಜಾನೆ ಅಧಿಕಾರಿ ವಿನೋದಕುಮಾರ ಡೋಣೂರ, ಪಟ್ಟಣ ಪಂಚಾಯತಿಯ ಸರ್ವಸದಸ್ಯರು, ಪಟ್ಟಣದ ಹಲವಾರು ಸಂಘ ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

