ವಿಜಯಪುರ: ನಗರದ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಪ್ರಾರಂಭಗೊಂಡ ಒಂದು ವರ್ಷದ ಅವಧಿಯಲ್ಲಿ ತನ್ನ ಅತ್ಯುತ್ತಮ ಸೇವೆಯಿಂದಾಗಿ ಜಿಲ್ಲಾದ್ಯಂತ ಗುರುತಿಸಿಕೊಂಡಿದೆ.
ಲಕ್ಷಾಂತರ ರೋಗಿಗಳಿಗೆ ನೆರವಾಗುವುದರ ಮೂಲಕ ಒಂದು ವರ್ಷದ ಅವಧಿಯಲ್ಲಿ ಯಶಸ್ವಿ ಕಿಡ್ನಿ ಟ್ರಾನ್ಸ್ಪ್ಲಾಂಟ ಮಾಡುವ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದೆ. ಸದಾ ನಿಮ್ಮ ಸೇವೆಯಲ್ಲಿ ಎನ್ನುವ ಘೋಷವಾಖ್ಯದಡಿಯಲ್ಲಿ ಸೇವೆ ಸಲ್ಲಿಸುವ ಆಸ್ಪತ್ರೆಯು ಪ್ರಸ್ತುತ ಪ್ರಧಾನ ಮಂತ್ರಿಯವರ ಕನಸಿನ ಆರೋಗ್ಯ ಕರ್ನಾಟಕ ಹಾಗೂ ಆಯುಷ್ಮಾನ್ ಭಾರತ ಯೋಜನೆಯನ್ನು ಅತ್ಯಂತ ಸಮರ್ಪಕವಾಗಿ ನಿಭಾಯಿಸುವುದರೊಂದಿಗೆ ಅವಶ್ಯಕತೆಯುಳ್ಳ ಬಡವರಿಗೆ ನೆರವಾಗುವಲ್ಲಿ ಯಶಸ್ವಿಯಾಗಿದ್ದನ್ನು ಗಮನಿಸಿದ ಸರ್ಕಾರ ಈ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಂಡ ರಾಜ್ಯದ ಅತ್ಯುತ್ತಮ ಆಸ್ಪತ್ರೆ ಎಂದು ಘೋಷಿಸಿ, ಪ್ರಶಂಸಾ ಪತ್ರವನ್ನು ನೀಡಿ ಗೌರವಿಸಿದೆ.
ನಗರದ ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ೭೫ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಪ್ರಮಾಣಪತ್ರವನ್ನು ನೀಡಿ ಗೌರವಿಸಿದರು.
ಆಸ್ಪತ್ರೆಯ ಈ ಸಾಧನೆಗೆ ಶ್ರೀ ಸಿದ್ಧೇಶ್ವರ ಲೋಕ ಕಲ್ಯಾಣ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರು ಹಾಗೂ ನಗರದ ವಿಧಾನಸಭಾ ಶಾಸಕ ಬಸನಗೌಡ ರಾ. ಪಾಟೀಲ್ ಯತ್ನಾಳ, ಆಸ್ಪತ್ರೆಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಶರಣ ಮಳಖೇಡ್ಕರ್ ಸೇರಿದಂತೆ ಸರ್ವ ಸದಸ್ಯ ಬಳಗದವರು ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರಿಗೆ ಅಭಿನಂದನೆಗಳನ್ನು ಸಲ್ಲಿಸಿ ಶುಭ ಹಾರೈಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

