ದೇವರಹಿಪ್ಪರಗಿ: ಮಧ್ಯಂತರ ಬೆಳೆ ವಿಮೆ ಹಾಗೂ ಬೆಳೆ ಪರಿಹಾರ ಬಿಡುಗಡೆ ಮಾಡುವಂತೆ ಆಗ್ರಹಿಸಿ ರೈತಸಂಘ ಹಾಗೂ ಹಸಿರುಸೇನೆಯ ಪದಾಧಿಕಾರಿಗಳು ತಹಶೀಲ್ದಾರ್ ಪ್ರಕಾಶ ಸಿಂದಗಿ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಗೆ ಸೋಮವಾರ ರೈತಸಂಘದ ಪದಾಧಿಕಾರಿಗಳು, ಕಾರ್ಯಕರ್ತರು ಆಗಮಿಸಿ, ಸರಕಾರದ ವಿರುದ್ಧ ಪ್ರತಿಭಟನೆ ಕೈಗೊಂಡರು.
ಈ ಸಂದರ್ಭದಲ್ಲಿ ತಾಲ್ಲೂಕು ರೈತಸಂಘದ ಅಧ್ಯಕ್ಷ ಈರಪ್ಪ ಕುಳೇಕುಮಟಗಿ ಹಾಗೂ ಗೌರವಾಧ್ಯಕ್ಷ ಶಿವಾನಂದ ಹಿರೇಮಠ ಮಾತನಾಡಿ, ಬರಗಾಲ ಬವಣೆಯಿಂದ ಇದ್ದ ಬೆಳೆಗಳೆಲ್ಲ ಒಣಗಿ ಫಸಲು ಬಾರದಂತಾಗಿದೆ. ಸರಕಾರ ಬರಗಾಲ ಎಂದು ಘೋಷಣೆ ಮಾಡಿದರೂ ರೈತರ ಖಾತೆಗೆ ಒಂದು ಪೈಸಾ ಹಣ ಜಮಾ ಮಾಡಿಲ್ಲ. ಎಲ್ಲಿಯೂ ಬರ ಪರಿಹಾರ ಕಾರ್ಯ ಪ್ರಾರಂಭಿಸಿಲ್ಲ. ಕನಿಷ್ಠ ಬದುಕಿಗೋಸ್ಕರವಾದರೂ ಬರಪರಿಹಾರ ನೀಡಬೇಕಾಗಿತ್ತು. ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರ ವಿಷಯದಲ್ಲಿ ಚೆಲ್ಲಾಟವಾಡುತ್ತಿವೆ. ತಕ್ಷಣವೇ ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬರಪರಿಹಾರ ನೀಡಬೇಕು. ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ರೈತರ ಜಮೀನುಗಳಿಗೆ ಹೋಗುವ ದಾರಿ ಸಮಸ್ಯೆ ಇತ್ಯರ್ಥ ಪಡಿಸಬೇಕು.ಈ ಎಲ್ಲ ಸಮಸ್ಯೆಗಳಿಗೆ ಸ್ಪಂದಿಸದಿದ್ದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಸಿದರು.
ರೈತಸಂಘದ ಉಪಾಧ್ಯಕ್ಷ ಸಿ.ಎಸ್.ಪಾಟೀಲ, ನಗರ ಘಟಕದ ಅಧ್ಯಕ್ಷ ಸಂಪತ್ ಜಮಾದಾರ, ರುದ್ರಯ್ಯ ಹಿರೇಮಠ, ಶಾಂತಪ್ಪ ದೇವೂರ, ಸಿದ್ದನಗೌಡ ಬಿರಾದಾರ, ಪ್ರಕಾಶ ಗುಡಿಮನಿ, ಹಣಮಂತರಾಯಗೌಡ ಪಾಟೀಲ, ಸಾಹೇಬಗೌಡ ಪಾಟೀಲ, ಬಾಬುಗೌಡ ಪಾಟೀಲ, ಗಂಗಾರಾಮ ರಾಠೋಡ, ಸಂತೋಷ ರಾಠೋಡ, ಶ್ರೀಮಂತ ರಾಠೋಡ, ದ್ಯಾವಪ್ಪಗೌಡ ಪಾಟೀಲ, ಶಿವಪುತ್ರಗೌಡ ಪಾಟೀಲ, ಮಲ್ಲನಗೌಡ ಪಾಟೀಲ, ಬಸನಗೌಡ ಬಗಲಿ ಇದ್ದರು.
Subscribe to Updates
Get the latest creative news from FooBar about art, design and business.
ಬೆಳೆವಿಮೆ & ಪರಿಹಾರ ಬಿಡುಗಡೆಗೆ ಆಗ್ರಹಿಸಿ ರೈತಸಂಘ ಪ್ರತಿಭಟನೆ
Related Posts
Add A Comment

