ದೇವರಹಿಪ್ಪರಗಿ: ಕರ್ನಾಟಕ ಸಂಭ್ರಮ-೫೦ರ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಜ್ಯೋತಿ ಹೊತ್ತ ರಥಯಾತ್ರೆಗೆ ಪಟ್ಟಣದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿ, ಬಿಳ್ಕೊಡಲಾಯಿತು.
ಪಟ್ಟಣದ ಮಲ್ಲಯ್ಯನ ದೇವಸ್ಥಾನದ ಆವರಣದಲ್ಲಿ ಭಾನುವಾರ ತಾಲ್ಲೂಕು ಆಡಳಿತದ ಪರವಾಗಿ ಭವ್ಯವಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಸಿಂದಗಿ, ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚಲುವಯ್ಯ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಲ್.ಡಿ.ಮುಲ್ಲಾ, ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್ ಬಿರಾದಾರ, ಜಿಲ್ಲಾ ಕಸಾಪ ಅಧ್ಯಕ್ಷ ಹಾಸೀಂಪೀರ್ ವಾಲೀಕಾರ, ಕಸಾಪ ತಾಲ್ಲೂಕು ಅಧ್ಯಕ್ಷ ಜಿ.ಪಿ.ಬಿರಾದಾರ ಪೂಜೆ ಸಲ್ಲಿಸಿದರು. ನಂತರ ಮೆರವಣಿಗೆ ಮಡಿವಾಳ ಮಾಚಿದೇವ ದೇವಸ್ಥಾನ, ಮೊಹರೆ ಹಣಮಂತ್ರಾಯ ವೃತ್ತ ಮಾರ್ಗವಾಗಿ ಅಂಬೇಡ್ಕರ್ ವೃತ್ತ ತಲುಪಿತು.
ಅಂಬೇಡ್ಕರ್ ವೃತ್ತದಲ್ಲಿ ಸಭೆ ಜರುಗಿಸಲಾಯಿತು. ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಸಿಂದಗಿ ಹಾಗೂ ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್ ಬಿರಾದಾರ ಮಾತನಾಡಿ, ಕನ್ನಡ ನಾಡು, ನುಡಿ, ಸಾಂಸ್ಕೃತಿಕ ಪರಂಪರೆ, ಇತಿಹಾಸ ಮತ್ತು ಕನ್ನಡದ ಮಹತ್ವವನ್ನು ತಿಳಿಸಿದರು.
ಸ್ಥಳೀಯ ವಿವಿಧ ಮಠಗಳ ಶ್ರೀಗಳ ಉಪಸ್ಥಿತಿಯಲ್ಲಿ ಸದಯ್ಯನಮಠದ ವೀರಗಂಗಾಧರಶ್ರೀಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ದಲಿತ ಸಂಘರ್ಷ ಸಮೀತಿಯ ಕಾಶೀನಾಥ ತಳಕೇರಿ ಮಾತನಾಡಿದರು. ಮೆರವಣಿಗೆಯಲ್ಲಿ ಕನ್ನಡಾಂಬೆ, ಕಿತ್ತೂರು ಚೆನ್ನಮ್ಮ, ವನಿಕೆ ಒಬವ್ವ ವೇಷಭೂಷಣ ಧರಿಸಿದ ಮಕ್ಕಳು ಗಮನ ಸೆಳೆದರು. ನಂತರ ರಥಯಾತ್ರೆಯನ್ನು ಇಂಗಳಗಿ ಗ್ರಾಮಕ್ಕೆ ಬಿಳ್ಕೋಡಲಾಯಿತು.
ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ, ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಎ.ಎಮ್.ವಾಲೀಕಾರ, ಪಟ್ಟಣ ಪಂಚಾಯಿತಿ ಸದಸ್ಯರಾದ ಕಾಶೀನಾಥ ಜಮಾದಾರ, ಸಿಂಧೂರ ಡಾಲೇರ, ಬಿಎಲ್‌ಡಿಇ ಸಂಸ್ಥೆಯ ವ್ಹಿ.ಎಮ್.ಪಾಟೀಲ, ಸಿದ್ದೇಶ್ವರ ಸ್ವಾಮೀಜಿ ಪ್ರೌಢಶಾಲೆಯ ವ್ಹಿ.ಕೆ.ಪಾಟೀಲ, ಶಿಕ್ಷಕರಾದ ಶಿವಾನಂದ ಕೋಟಿನ್, ಪಿ.ಕೆ.ಕುಲಕರ್ಣಿ, ಪಿ.ಸಿ.ತಳಕೇರಿ, ಎಸ್.ಎಸ್.ಸಾತಿಹಾಳ, ಬಸವರಾಜ ಬಡಿಗೇರ, ಎಸ್.ಎಮ್.ನಂದ್ಯಾಳ ಸೇರಿದಂತೆ ಶಿಕ್ಷಕರು, ಪಿಡಿಓ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿ, ವಿದ್ಯಾರ್ಥಿನೀಯರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

