Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪತ್ರಕರ್ತರಿಗೆ ಆರೋಗ್ಯ ಸೇವೆ ಕಲ್ಪಿಸಲು ಬಿ ಎಲ್ ಡಿ ಇ ಬದ್ಧ
(ರಾಜ್ಯ ) ಜಿಲ್ಲೆ

ಪತ್ರಕರ್ತರಿಗೆ ಆರೋಗ್ಯ ಸೇವೆ ಕಲ್ಪಿಸಲು ಬಿ ಎಲ್ ಡಿ ಇ ಬದ್ಧ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾನಿಪ ಸಂಘದ ಪತ್ರಕರ್ತರಿಗೆ ಹೆಲ್ತ್ ಕಾರ್ಡ್ ವಿತರಿಸಿದ ಸಚಿವ ಎಂ.ಬಿ.ಪಾಟೀಲ ಭರವಸೆ

ವಿಜಯಪುರ: ಸದಾ ಒತ್ತಡದಲ್ಲೇ ಕಾರ್ಯನಿರ್ವಹಿಸುವ ಪತ್ರಕರ್ತರು ಸಮಯಕ್ಕೆ ಸರಿಯಾಗಿ ಆಹಾರ, ನಿದ್ರೆ ಮಾಡಲ್ಲ. ಅಂಥ ಪತ್ರಕರ್ತರಿಗೆ ಆರೋಗ್ಯ ಸೇವೆ ಕಲ್ಪಿಸಲು ಬಿಎಲ್ ಡಿಇ ಆಸ್ಪತ್ರೆ ಬದ್ಧವಾಗಿದೆ ಎಂದು ಬಿಎಲ್ ಡಿ ಸಂಸ್ಥೆಯ ಅಧ್ಯಕ್ಷರೂ‌ ಆಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದರು.‌
ನಗರದ ಬಿಎಲ್ ಡಿಇ ಆಸ್ಪತ್ರೆಯ ಟ್ರಾಮಾ ಸೆಂಟರ್ ಸಭಾಂಗಣದಲ್ಲಿ ಸೋಮವಾರ ಬಿಎಲ್ ಡಿಇ  ಆಸ್ಪತ್ರೆಯ ಆರೋಗ್ಯ ಭಾಗ್ಯ ಯೋಜನೆಯಡಿ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಫ್ಯಾಮಿಲಿ ಹೆಲ್ತ್ ಕಾರ್ಡ್ ವಿತರಿಸಿ ಅವರು ಮಾತನಾಡಿದರು.
ಅದೆಷ್ಟೋ ಪತ್ರಕರ್ತರು ವಿಶ್ರಾಂತಿ ತೆಗೆದುಕೊಳ್ಳದೇ, ಸಮಾಜಕ್ಕಾಗಿ ಹಗಲಿರುಳು ಶ್ರಮಿಸುತ್ತಾರೆ. ಅಂಥ ಪತ್ರಕರ್ತರು ಹಾಗೂ ಅವರ ಕುಟುಂಬ ಸದಸ್ಯರ ಆರೋಗ್ಯ ರಕ್ಷಣೆಗೆ ಸೇವಾ ಸೌಲಭ್ಯಗಳನ್ನು ಒದಗಿಸಲು ಬಿಎಲ್ ಡಿಇ ಆಸ್ಪತ್ರೆ ಮುಂದಾಗಿದೆ ಎಂದರು.
ಪತ್ರಕರ್ತರ ಕಷ್ಟದ ಜೀವನ ಕಂಡಿದ್ದೇವೆ. ಅವರ ಆರ್ಥಿಕ ಪರಿಸ್ಥಿತಿಯೂ ಅಷ್ಟಕ್ಕಷ್ಟೇ‌ ಇರುತ್ತದೆ ಎಂಬುದನ್ನು ಮನಗಂಡು ನಾನು ಪತ್ರಿಕಾ ದಿನಾಚರಣೆಯಲ್ಲಿ ಹೆಲ್ತ್ ಕಾರ್ಡ್ ನೀಡುವುದಾಗಿ ಭರವಸೆ ನೀಡಿದ್ದೆ. ಈಗ ಅದು ಸಾಕಾರಗೊಂಡಿದೆ ಎಂದರು.
ಈ ಕಾರ್ಡಿನಡಿ ಪತ್ರಕರ್ತರಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೂ ನಮ್ಮ‌ ಬಿಎಲ್ ಡಿ ಈ ಆಸ್ಪತ್ರೆಯಲ್ಲಿ ರಿಯಾಯಿತಿ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಕಲ್ಪಿಸಲಾಗುವುದು ಎಂದರು.
ಪತ್ರಕರ್ತರು ಯಾವುದೇ ಸಂದರ್ಭದಲ್ಲಿ ಅನಾರೋಗ್ಯ ಸಮಸ್ಯೆಗಳಿಗಾಗಿ ಈ ಕಾರ್ಡ್ ಬಳಸಿಕೊಂಡು ಆರೋಗ್ಯ ಸೇವೆ  ಪಡೆದುಕೊಳ್ಳಬೇಕು ಎಂದರು.
ಇಂಡಿಯಾ ಟುಡೇ ರ್ಯಾಂಕಿಂಗ್‌ನಲ್ಲಿ‌ ಬಿಎಲ್ಡಿಇ ಡೀಮ್ಡ್ ವಿವಿ ೧೪ ನೇ ಸ್ಥಾನದಲ್ಲಿದ್ದು ರಾಷ್ಟ್ರೀಯಮಟ್ಟದಲ್ಲಿ ಉತ್ತಮ ಶೈಕ್ಷಣಿಕ‌ ಗುಣಮಟ್ಟ ಕಾಯ್ದುಕೊಂಡಿದ್ದೇವೆ. ಆಸ್ಪತ್ರೆಯಲ್ಲಿ ಅತ್ಯಾಧುನಿಕ‌ ಸೇವಾಸೌಲಭ್ಯಗಳ ಮೂಲಕ ಈಗಾಗಲೇ ಯಶಸ್ವಿಯಾಗಿ ತೆರೆದ ಹೃದಯ ಶಸ್ತ್ರಚಿಕಿತ್ಸೆ ಹಾಗೂ  ಕಿಡ್ನಿ‌ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದೆ. ಈಗಿರುವ 80 ಹಾಸಿಗೆಯ ಆಸ್ಪತ್ರೆಯನ್ನು ಇನ್ನೂ 200 ಬೆಡ್ ಗಳಿಗೆ ಮೇಲ್ದರ್ಜೆಗೇರಿಸಿ 300 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಜೊತೆಗೆ ಕ್ಯಾನ್ಸರ್ ಆಸ್ಪತ್ರೆ ಸಹ ನಿರ್ಮಿಸಲಾಗುತ್ತಿದ್ದು, ಎರಡು ವರ್ಷದಲ್ಲಿ ಪೂರ್ಣಗೊಳಿಸಿ‌ ಜನಾರ್ಪಣೆ ಗೊಳಿಸುವ ಕೆಲಸ ಮಾಡುತ್ತೇವೆ ಎಂದರು.
ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಮಾತನಾಡಿ, ಜಿಲ್ಲೆಯ ಪತ್ರಕರ್ತರಿಗೆ ಪಾಲಿಗೆ ಇಂದು ಐತಿಹಾಸಿಕ ದಿನ. ಜಿಲ್ಲೆಯ ಪ್ರತಿಷ್ಠಿತ ಬಿಎಲ್ ಡಿ ಇ ಸಂಸ್ಥೆಯ ಅಧ್ಯಕ್ಷರಾಗಿರುವ ಸಚಿವ ಎಂ.ಬಿ.ಪಾಟೀಲರು ವಾಗ್ದಾನ ಮಾಡಿದಂತೆ ತ್ವರಿತವಾಗಿ ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ನೀಡಿ, ನುಡಿದಂತೆ‌ ನಡೆದುಕೊಂಡಿದ್ದಾರೆ ಎನ್ನುವ ಮೂಲಕ ಸಚಿವರನ್ನು ಸಂಘದ ಸದಸ್ಯರ ಪರವಾಗಿ ಅಭಿನಂದಿಸಿದರು.
ಕಳೆದ ವರ್ಷ ಮೃತಪಟ್ಟ‌  ಪತ್ರಕರ್ತರಾದ ಶರಣು ಪಾಟೀಲ ಹಾಗೂ ಅಬ್ದುಲ್‌ರಜಾಕ್ ಶಿವಣಗಿ ಅವರ ಕುಟುಂಬ ಸದಸ್ಯರ‌ ಪರಿಸ್ಥಿತಿ ಚಿಂತಾಜನಕವಾಗಿದೆ. ಹಾಗಾಗಿ ಇವರ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿ ಮಂಜೂರು ಮಾಡಿಸಬೇಕೆಂದು ಮನವಿ ಮಾಡಿದರು.
ನಗರದ ಪತ್ರಕರ್ತರಿಗೆ ನಿವೇಶನ ಕೊಡಿಸುವ ನಿಟ್ಟಿನಲ್ಲಿ ಖಾಲಿ ಬಿದ್ದಿರುವ ಹೌಸಿಂಗ್ ಬೋರ್ಡ್ ಜಾಗೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಅಲ್ಲಿ ಸೂಕ್ತವೆನಿಸಿದರೆ ನಗರದ ಪತ್ರಕರ್ತರಿಗೆ ಹಣ ನಿಗದಿ ಮಾಡಿ ನಿವೇಶನ ಒದಗಿಸಲು ಸಚಿವರಿಗೆ ಮನವಿ ಮಾಡಿದರು.  ಬಿಎಲ್ ಡಿ ಇ ಫೆಮಿಲ್ ಹೆಲ್ತ್ ಕಾರ್ಡ್ ಗೆ ಇನ್ನೂ‌ ಅರ್ಜಿ‌ ಸಲ್ಲಿಸದಿರುವ ಪತ್ರಕರ್ತರು ಈಗಲೂ‌ ಅರ್ಜಿ ಸಲ್ಲಿಸಿದರೆ ಕಾರ್ಡ್ ಮಾಡಿಸಿಕೊಡಲಾಗುವುದು ಎಂದರು.
ಸಚಿವ ಎಂ.ಬಿ.ಪಾಟೀಲರು ಜಿಲ್ಲಾ ಕಾನಿಪ ಸಂಘದ ಪದಾಧಿಕಾರಿಗಳಿಗೆ ಹಾಗೂ ತಾಲ್ಲೂಕು ಘಟಕಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳಿಗೆ ಬಿಎಲ್ಡಿಈ ಆಸ್ಪತ್ರೆಯ ಫ್ಯಾಮಿಲ್ ಹೆಲ್ತ್ ಕಾರ್ಡ್ ಆರೋಗ್ಯ ಕಾರ್ಡ್ ಗಳನ್ನು ಸಾಂಕೇತಿಕವಾಗಿ ವಿತರಿಸಿದರು.
ಇದೇ ವೇಳೆ ಸಚಿವರಿಗೆ ಜಿಲ್ಲಾ ಕಾನಿಪ ಸಂಘದಿಂದ ಸನ್ಮಾನಿಸಿ‌ ಗೌರವಾಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿಯ ಕುಲಪತಿ ಡಾ. ಆರ್. ಎಸ್. ಮುಧೋಳ,  ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ಸಮಕುಲಾಧಿಪತಿ ಡಾ. ವೈ‌. ಎಂ. ಜಯರಾಜ, ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಮಹೇಶ ವಿ. ಶಟಗಾರ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ.ಬಿ.ವಡವಡಗಿ, ಜಿಲ್ಲಾ ಉಪಾಧ್ಯಕ್ಷರಾದ ಇಂದುಶೇಖರ‌ ಮಣೂರ, ಫಿರೋಜ್ ರೋಜಿಂದಾರ, ಕಾರ್ಯದರ್ಶಿ ಶಕೀಲ್ ಬಾಗಮಾರೆ, ಕಾರ್ಯಕಾರಿಣಿ ಬಸವರಾಜ ಉಳ್ಳಾಗಡ್ಡಿ, ಗುರು ಗದ್ದನಕೇರಿ, ವಿಜಯ ಸಾರವಾಡ, ಸುರೇಶ ತೇರದಾಳ, ಸುನೀಲ್ ಗೋಡೆಣ್ಣವರ, ಶಶಿಕಾಂತ‌ ಮೆಂಡೆಗಾರ,ನಾಗು ನಾಗೂರ, ಪತ್ರಕರ್ತರಾದ ಅಶೋಕ ಯಡಳ್ಳಿ, ಅಲ್ಲಮಪ್ರಭು ಮಲ್ಲಿಕಾರ್ಜುನಮಠ,  ದೀಪಕ ಶಿಂತ್ರೆ,  ಜಿ.ಎಸ್.ಕಮತರ,
ಬಸವನಬಾಗೇವಾಡಿ ತಾಲೂಕು ಅಧ್ಯಕ್ಷ ಅಜೀಜ್ ಬಳಬಟ್ಟಿ, ಪ್ರ. ಕಾರ್ಯದರ್ಶಿ ಬಾಬು ವಾಡೇದ, ಆಲಮೇಲ ಪ್ರ. ಕಾರ್ಯದರ್ಶಿ ಅವಧೂತ ಭಂಡಗಾರ, ಸಿಂದಗಿ ಅಧ್ಯಕ್ಷ ಆನಂದ ಶಾಬಾದಿ, ದೇವರಹಿಪ್ಪರಗಿ ಅಧ್ಯಕ್ಷ ಸಂಗಮೇಶ ಉತ್ನಾಳ, ಪ್ರ.‌ಕಾರ್ಯದರ್ಶಿ ಶಿವಾನಂದ ಕಂಬಾರ, ತಿಕೋಟಾ ಅಧ್ಯಕ್ಷ ಸಿ.ಬಿ. ಹಿರೇಮಠ,  ಪ್ರ.‌ಕಾರ್ಯದರ್ಶಿ ಸಾತಲಿಂಗಯ್ಯ ಹಿರೇಮಠ, ಇಂಡಿ ಅಧ್ಯಕ್ಷ ಅಬುಶಾಮ ಹವಾಲ್ದಾರ್, ಕೊಲ್ಹಾರ ಪ್ರಧಾನ ಕಾರ್ಯದರ್ಶಿ ಅರುಣ ಔರಸಂಗ, ಚಡಚಣ ಅಧ್ಯಕ್ಷ ರಮೇಶ ಬಿರಾದಾರ, ಪ್ರ. ಕಾರ್ಯದರ್ಶಿ ರಾಜಶೇಖರ ಡೊಣಜಮಠ, ತಾಳೊಕೋಟೆ ತಾಲೂಕು ಅಧ್ಯಕ್ಷ ಕಟ್ಟಿಮನಿ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು,  ತಾಲೂಕು ಘಟಕಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಸೇರಿ‌ದಂತೆ ಸದಸ್ಯರು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.