ವಿಜಯಪುರ: ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ೭೬ನೇ ಪುಣ್ಯತಿಥಿಯ ಅಂಗವಾಗಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹುತಾತ್ಮರ ದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗಾಂಧಿಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ವೈಜನಾಥ ಕರ್ಪೂರಮಠ, ಅಹಿಂಸಾಮೂರ್ತಿ, ಸರಳತೆಯ ಪ್ರತಿಪಾದಕ, ಜಗತ್ತಿನ ಹಲವಾರು ಮಹಾನ್ ಚಳುವಳಿಗಳಿಗೆ ಪ್ರೇರಕರಾಗಿದ್ದ ಮಹಾತ್ಮಾ ಗಾಂಧಿಯವರ ಕೊಡುಗೆಗಳನ್ನು ಯಾರೂ ಮರೆಯುವಂತಿಲ್ಲ. ಸತ್ಯ, ಶಾಂತಿ, ಅಹಿಂಸೆ, ಅಸ್ಪ್ರಶ್ಯತೆ ನಿವಾರಣೆಗಾಗಿ ಗಾಂಧಿಜಿಯವರು ಪಾಲಿಸಿದ ತತ್ವಗಳು ನಾವೆಲ್ಲರೂ ಸದಾ ಸ್ಮರಿಸುವಂತಾಗಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ಚಾಂದಸಾಬ ಗಡಗಲಾವ, ಡಾ.ಗಂಗಾಧರ ಸಂಬಣ್ಣಿ, ಬ್ಲಾಕ್ ಅಧ್ಯಕ್ಷ ಜಮೀರಅಹ್ಮದ ಬಕ್ಷಿ, ಆರತಿ ಶಹಾಪೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಸಂತ ಹೊನಮೊಡೆ, ಸಾಹೇಬಗೌಡ ಬಿರಾದಾರ, ಅಶ್ಫಾಕ ಮನಗೂಳಿ, ಎಸ್‌ಟಿ ಘಟಕದ ಅಧ್ಯಕ್ಷರಾದ ದೇವಾನಂದ ಲಚ್ಯಾಣ, ಅಬ್ಬುಲ್‌ಪೀರಾ ಜಮಖಂಡಿ, ಫಿರೋಜ ಶೇಖ, ಅನಸೂಯಾ ನಿಂಬರಗಿ, ಆಸ್ಮಾ ಕಾಲೇಬಾಗ, ಶಮಿಮಾ ಅಕ್ಕಲಕೋಟ, ರುಬಿನಾ ಹಳ್ಳೂರ, ಕಾಶಿಬಾಯಿ ಹಡಪದ, ಗಂಗಾಬಾಯಿ ಕಣಮುಚನಾಳ, ಅಬುಬಕರ ಕಂಬಾಗಿ, ಕೃಷ್ಣಾ ಲಮಾಣಿ, ತಾಜುದ್ದೀನ ಖಲೀಫಾ, ಪರಶುರಾಮ ಹೊಸಮನಿ, ಮಂಜುನಾಥ ನಿಡೋಣಿ, ಜಾಫರ ಸುತಾರ, ಮಹೇಶ ಶಹಾಪೂರ, ವರ್ಷಾ ಭೋವಿ, ಹಮಿದಾ ಪಟೇಲ, ಮುಂತಾದವರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

