ಮುದ್ದೇಬಿಹಾಳ: ಕುಷ್ಠ ರೋಗ ಆನುವಂಶಿಕ ರೋಗವಲ್ಲ. ಇದು ಮೈಕ್ರೋಬ್ಯಾಕ್ಟೀರಿಯಂ ಲೆಪ್ರಯಿಂದ ಉಂಟಾಗುವ ರೋಗ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅನುಸೂಯ ತೇರದಾಳ ಹೇಳಿದರು.
ಪಟ್ಟಣದ ಜ್ಞಾನಭಾರತಿ ವಿದ್ಯಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗಳ ಸಂಯಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕುಷ್ಠ ರೋಗ ಶಾಪಗ್ರಸ್ತವೂ ಅಲ್ಲ. ಪಾಪದ ಫಲವೂ ಅಲ್ಲ. ಚರ್ಮದ ಮೇಲೆ ತಿಳಿ-ಬಿಳಿ ತಾಮ್ರವರ್ಣದ ಮಚ್ಚೆಗಳಿಗೆ ಸ್ಪರ್ಶ ಜ್ಞಾನವಿರುವುದಿಲ್ಲ. ಈ ರೋಗದ ಲಕ್ಷಣಗಳು ಕಂಡು ಬಂದಾಗ ಗ್ರಾಮದಲ್ಲಿನ ಆರೋಗ್ಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರಿಗೆ ತಿಳಿಸಿ ಮಾರ್ಗದರ್ಶನ ಪಡೆಯಬೇಕು. ಸಧ್ಯ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನವು ಜನೆವರಿ ೩೦ ರಿಂದ ಫೆಬ್ರವರಿ ೧೫ರ ವರೆಗೆ ಜಿಲ್ಲಾದ್ಯಂತ ನಡೆಯಲಿದೆ. ತಾಲೂಕಿನಾದ್ಯಂತ ಶಾಲೆ ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ನಗರ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ವಿದ್ಯಾರ್ಥಿಗಳಿಗೆ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನದ ಭಿತ್ತಿಪತ್ರಗಳನ್ನು ವಿತರಿಸಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಮನಹಳ್ಳಿ, ಶಾಲೆಯ ಮುಖ್ಯ ಗುರು ರಾಮಚಂದ್ರ ಹೆಗಡೆ, ಶಿಕ್ಷಕ ಬಿ.ಟಿ.ಭಜಂತ್ರಿ, ತೇಜಸ್ವಿನಿ ಕಾಟಿ, ಶಾಂತಾ ಭಟ್, ಲೀಲಾ ಭಟ್, ಜಿ.ಜಿ.ಪಾದಗಟ್ಟಿ ಸೇರಿದಂತೆ ವಿದ್ಯಾರ್ಥಿಗಳು ಆಶಾ ಕಾರ್ಯಕರ್ತೆಯರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

