ವಿಜಯಪುರ: ಕೃಷ್ಣಾನದಿ ಮತ್ತು ಆಲಿಮಟ್ಟಿ ಜಲಾಶಯಕ್ಕೆ ಸಂಬಂಧಿಸಿದಂತೆ ಜಲಾಶಯದ ಎತ್ತರ, ನಷ್ಟಗೊಂಡ ರೈತರಿಗೆ ಪರಿಹಾರ, ಪುರ್ನವಸತಿ, ಬೆಳೆ ಪರಿಹಾರ, ಬರಗಾಲ ಪರಿಹಾರ, ಸೇರಿದಂತೆ ಹಲವಾರು ರೈತರ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಲು ಇಂದು ನಾವೆಲ್ಲರೂ ಸೇರಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ ಕುಬಕಡ್ಡಿಯವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
೨೦೨೪ ನೇ ಸಾಲಿನ ಸಮಗ್ರ ಹೋರಾಟ ಹಾಗೂ ವರ್ಷವಿಡಿ ಹೋರಾಟದ ರೂಪರೇಷಗಳನ್ನು ಸಿದ್ದಪಡಿಸಲು ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವರ್ಷವಿಡಿ ಕಾರ್ಯಕ್ರಮದ ಹೋರಾಟದ ಪೂರ್ವಭಾವಿ ಸಭೆಯಲ್ಲಿ ಈ ಜಿಲ್ಲೆಯಲ್ಲಿ ರೈತ ಸಂಘ ಬಲಿಷ್ಠಗೊಳ್ಳಬೇಕಾದರೆ ವರ್ಷವಿಡಿ ಸಂಘಟನೆ ಹಾಗೂ ಹೋರಾಟ ಹಾಗೂ ತರಬೇತಿ ಅವಶ್ಯಕ ಎಂದು ಹೇಳಿದರು.
ಈ ವೇಳೆ ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ ಮಾತನಾಡುತ್ತಾ ಆಲಿಮಟ್ಟಿ ಜಲಾಶಯ ಎತ್ತರಗೊಂಡರೆ ಮಾತ್ರ ವಿಜಯಪುರ ಜಿಲ್ಲೆಯ ಕಟ್ಟಕಡೆಯ ಹಳ್ಳಿಯ ಕೊನೆಯ ರೈತನಿಗೂ ನೀರು ಸಿಗುತ್ತದೆ, ಆ ನೀರು ಸಿಗಬೇಕಾದರೆ ಜಿಲ್ಲೆಯ ೧೩ ತಾಲೂಕು ಹಾಗೂ ಅದರಲ್ಲಿನ ಎಲ್ಲಾ ಹಳ್ಳಿಗಳಲ್ಲಿ ಸಂಘಟನೆ ಮಾಡುತ್ತಾ ರಾಜ್ಯ ಹಾಗೂ ಕೇಂದ್ರ ಸರಕಾರದ ವಿರುದ್ಧ ಧ್ವನಿ ಎತ್ತಬೇಕು ಆಗ ಮಾತ್ರ ಇದು ಸಾಧ್ಯವಾಗುವುದು. ಅದೇರೀತಿ ಯುವ, ಮಹಿಳಾ ಹಾಗೂ ಕಾರ್ಮಿಕ ಸಂಘಟನೆಯನ್ನು ಮಾಡಬೇಕು ಎಂದರು.
ಈ ವೇಳೆ ಮಹಿಳಾ ಅಧ್ಯಕ್ಷರಾದ ರೇಖಾ ಪಾಟೀಲ, ತಾಲೂಕಾ ಅಧ್ಯಕ್ಷರುಗಳಾದ ಈರಪ್ಪ ಕುಳೆಕುಮಟಗಿ, ಸಾತಲಿಂಗಯ್ಯ ಸಾಲಿಮಠ, ಮಹಾದೇವ ಬನಸೋಡೆ, ಶ್ರೀಶೈಲ ವಾಲಿಕಾರ, ಸೇರಿದಂತೆ ಶಿವಾನಂದಯ್ಯ ಹಿರೇಮಠ, ಸುಭಾಸ ಸಜ್ಜನ, ನಜೀರ ನಂದರಗಿ, ಶಾನೂರ ನಂದರಗಿ , ರಾಮನಗೌಡ ಪಾಟೀಲ, ಮಹಾದೇವ ತೇಲಿ, ಅರುಣಗೌಡ ತೇರದಾಳ, ಸಂಗಪ್ಪ ಟಕ್ಕೆ, ಸಂಪತ್ತ ಜಮಾದಾರ, ಸಂಗಮೇಶ ಹುಣಸಗಿ, ಹಣಮಂತ ಬ್ಯಾಡಗಿ, ಹೆಚ್.ಎನ್.ಪಾಟೀಲ, ಮಹಾದೇವ ಕದಂ, ಸೇರಿದಂತೆ ಅನೇಕರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

