Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 01, 2026

ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು

ಶ್ರಮಯೇವ ಜಯತೆ..

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಫೆ. ಮೊದಲ ವಾರ ಅವಳಿ ಜಿಲ್ಲೆಯ ಕೆರೆಗಳಿಗೆ ನೀರು
(ರಾಜ್ಯ ) ಜಿಲ್ಲೆ

ಫೆ. ಮೊದಲ ವಾರ ಅವಳಿ ಜಿಲ್ಲೆಯ ಕೆರೆಗಳಿಗೆ ನೀರು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಲಸಂಪನ್ಮೂಲ ಸಚಿವ, ಡಿಸಿಎಂ ಡಿ.ಕೆ.ಶಿವಕುಮಾರಗೆ ಮನವಿ | ಸಚಿವ ಶಿವಾನಂದ ಪಾಟೀಲ ಸ್ಪಷ್ಠನೆ

ಬಸವನಬಾಗೇವಾಡಿ: ಬೇಸಿಗೆ ಕಾಲದಲ್ಲಿ ವಿಜಯಪುರ-ಬಾಗಲಕೋಟ ಅವಳಿ ಜಿಲ್ಲೆಯ ಜನರಿಗೆ ಹಾಗೂ ಜಾನುವಾರುಗಳ ಕುಡಿಯುವ ನೀರಿನ ಬವಣೆ ಉಂಟಾಗಬಾರದು ಎಂಬ ಉದ್ದೇಶದಿಂದ ಆಲಮಟ್ಟಿ ಜಲಾಶಯದಿಂದ ಅವಳಿ ಜಿಲ್ಲೆಯಲ್ಲಿರುವ ಎಲ್ಲ ಕೆರೆಗಳಿಗೆ ನೀರು ಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಜಲಸಂಪನ್ಮೂಲ ಸಚಿವ, ಡಿಸಿಎಂ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಮಾಡಲಾಗಿದೆ. ನೀರಿನ ಬವಣೆ ನಿವಾರಿಸಲು ಫೆಬ್ರುವರಿ ಮೊದಲ ವಾರದಲ್ಲಿ ಅವಳಿ ಜಿಲ್ಲೆಯ ಅಂದಾಜು ೧೭೫ ಕೆರೆಗಳಿಗೆ ನೀರು ಹರಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ, ಹಾವೇರಿ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ಪಟ್ಟಣದ ಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಕೊಲ್ಹಾರ, ಬಸವನಬಾಗೇವಾಡಿ, ನಿಡಗುಂದಿ ತಾಲೂಕುಗಳು ಬರಗಾಲಕ್ಕೆ ಒಳಗಾಗಿರುವದರಿಂದಾಗಿ ತೀವ್ರ ಕುಡಿಯುವ ನೀರಿನ ತೊಂದರೆ ಉಂಟಾಗಿರುತ್ತದೆ. ತಾಲೂಕುಗಳಲ್ಲಿ ಜನ-ಜಾನುವಾರುಗಳಿಗೆ ತುರ್ತಾಗಿ ಕುಡಿಯುವ ನೀರನ್ನು ಒದಗಿಸಬೇಕಾಗಿದೆ. ಮುಳವಾಡ ಏತ ನೀರಾವರಿ ಯೋಜನೆಯ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕೊಲ್ಹಾರ, ನಿಡಗುಂದಿ ಮತ್ತು ಬಸವನಬಾಗೇವಾಡಿ ತಾಲೂಕುಗಳ ರೈತರು ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಂಬಂಧ ಮತ್ತು ಕೆರೆಗಳನ್ನು ತುಂಬಿಸುವ ಸಂಬಂಧ ಕಾಲುವೆಗಳಿಗೆ ನೀರು ಹರಿಸುವಂತೆ ಒತ್ತಾಯಿಸುತ್ತಿದ್ದಾರೆ. ಅವರು ಯಾವುದೇ ಕಾನೂನು ಕೈಗೆ ತೆಗೆದುಕೊಳ್ಳದೇ ಸಂಯಮದಿಂದ ಇರಬೇಕು. ನೀರಾವರಿ ಸಲಹಾ ಸಮಿತಿಯಲ್ಲಿ ನಿರ್ಣಯವಾದ್ದಂತೆ ಅವಳಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಭವಣೆ ನಿವಾರಿಸಲು ಕೆರೆಗಳಿಗೆ ಜಲಾಶಯದಿಂದ ನೀರು ತುಂಬಿಸಲಾಗುವುದು. ಕೆರೆ ತುಂಬುವ ಯೋಜನೆಗೋಸ್ಕರ ೬ ಟಿಎಂಸಿ ನೀರನ್ನು ನಿಗದಿಪಡಿಸಿದ್ದು. ಫೆಬ್ರುವರಿ ಮೊದಲ ವಾರದಲ್ಲಿ ೧.೫ ಟಿಎಂಸಿ ನೀರನ್ನು ಕೆರೆಗಳಿಗೆ ಬಿಡಲಾಗುವುದು. ಜನರು ಆತಂಕ ಪಡಬಾರದು ಎಂದರು.
ಈಗಾಗಲೇ ಕೃಷ್ಣಾ ಭಾಗ್ಯ ಜಲ ನಿಗಮದಿಂದ ೨೦೨೩-೨೪ ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಅಣೆಕಟ್ಟುಗಳ ವ್ಯಾಪ್ತಿಯಲ್ಲಿ ಬರುವ ನೀರಾವರಿ ಯೋಜನೆಗಳಾದ ನಾರಾಯಣಪುರ ಎಡದಂಡೆ ಹಾಗೂ ಬಲದಂಡೆ ಮತ್ತು ಆಲಮಟ್ಟಿ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ರೈತರ ಅನುಕೂಲಕ್ಕಾಗಿ ಮೆಣಸಿನಕಾಯಿ ಹಾಗೂ ಬಾಕಿ ಉಳಿದಿರುವ ಬೆಳೆಗಳನ್ನು ಸಂರಕ್ಷಿಸುವ ಸಲುವಾಗಿ ೨.೭೫ ಟಿಎಂಸಿ ನೀರನ್ನು ಜ.೬ ರಂದು ಕೈಗೊಂಡಿರುವ ನಿಗಮದ ನಿರ್ಣಯದಂತೆ ನೀರನ್ನು ಬಿಡಲಾಗಿದೆ ಎಂದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು

ಶ್ರಮಯೇವ ಜಯತೆ..

ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್

ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 01, 2026
    In ದಿನಪತ್ರಿಕೆ
  • ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು
    In (ರಾಜ್ಯ ) ಜಿಲ್ಲೆ
  • ಶ್ರಮಯೇವ ಜಯತೆ..
    In ವಿಶೇಷ ಲೇಖನ
  • ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್
    In (ರಾಜ್ಯ ) ಜಿಲ್ಲೆ
  • ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಬಾಲಭವನದ ಬೇಸಿಗೆ ಶಿಬಿರದ ಸಮಾರೋಪ
    In (ರಾಜ್ಯ ) ಜಿಲ್ಲೆ
  • ಮಲೇರಿಯಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಮಲೇರಿಯಾ ಕೆಲವೊಮ್ಮೆ ಮಾರಕವಾಗಬಹುದು :ಕೋಳೆಕರ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸಂಘಕ್ಕೆ ಮೇ ೧೦ಕ್ಕೆ ಚುನಾವಣೆ :ಅಂದೇ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಪ್ರಸ್ತುತ ಸಮಾಜಕ್ಕೆ ಬಸವಣ್ಣನವರ ಆದರ್ಶಗಳು
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.