ವಿಜಯಪುರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡ ಸಂವಿಧಾನ ಜಾಗೃತಿ ಜಾಥಾದ ಸ್ತಭ್ದಚಿತ್ರಕ್ಕೆ ಇಂಡಿ ಉಪವಿಭಾಗದ ಬಸನಾಳ ಗ್ರಾಮದಲ್ಲಿ ಅತ್ಯಂತ ವಿಜೃಂಭಣೆಯಿಂದ ಸ್ವಾಗತಿಸಲಾಯಿತು.
ಸರ್ಕಾರದ ಆದೇಶದ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ “ಸಂವಿಧಾನ ಜಾಗೃತಿ ಜಾಥಾ” ರಾಜ್ಯಾಧ್ಯಾಂತ ಹಮ್ಮಿಕೊಂಡಿದ್ದು, ಅದರಂತೆ ವಿಜಯಪುರ ಜಿಲ್ಲೆಯಲ್ಲಿ ದಿನಾಂಕ: ೩೧.೦೧.೨೦೨೪ರಂದು ಇಂಡಿ ಉಪವಿಭಾಗದ ಬಸನಾಳ ಗ್ರಾಮ ಪಂಚಾಯತಿಯಲ್ಲಿ ಸಂವಿಧಾನ ಜಾಗೃತಿ ಕುರಿತು ಗ್ರಾಮಸ್ಥರಲ್ಲಿ ಅರಿವು ಮೂಡಿಸಲಾಯಿತು. ನಂತರ ತಾಂಬಾ, ಬೆನಕನಹಳ್ಳಿ, ಅಥರ್ಗಾಕ್ಕೆ ಸಂಜೆ ಬಂದು ಗ್ರಾಮ ಪಂಚಾಯತಿಗಳ ವತಿಯಿಂದ “ಸಂವಿಧಾನ ಜಾಗೃತಿ ಜಾಥಾ” ದ ಸ್ಥಬ್ಧ ಚಿತ್ರವನ್ನು ಅತ್ಯಂತ ವಿಜೃಂಭಣೆಯಿಂದ ಸ್ವಾಗತ ಮಾಡಿಕೊಂಡು, ಕಾರ್ಯಕ್ರಮ ನೇರವೇರಿಸಲಾಯಿತು.
ಸದರಿ ಗ್ರಾಮ ಪಂಚಾಯತಿಗಳ ಆವರಣದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಗ್ರಾಮಸ್ಥರು ಸೇರಿ ಅತ್ಯಂತ ವಿಜೃಂಬಣೆಯಿಂದ “ಸಂವಿಧಾನ ಜಾಗೃತಿ ಜಾಥಾ”ದಲ್ಲಿ ಭಾಗವಹಿಸಿ ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ ಜೆ ಇಂಡಿ, ಅಧೀಕ್ಷಕ ಚನ್ನಲಿಂಗಪ್ಪ ಚೌದರಿ, ಸೇರಿದಂತೆ ಗ್ರಾಮದ ಗಣ್ಯರು, ಮುಖಂಡರು ಭಾಗವಹಿಸಿದ್ದರು.
ಹತ್ತಳ್ಳಿ ಗ್ರಾಮ ಪಂಚಾಯತಿಯಲ್ಲಿ ಸ್ವಾಗತ : ಸಂವಿಧಾನ ಜಾಗೃತಿ ಜಾಥಾದ ಸ್ತಭ್ದಚಿತ್ರಕ್ಕೆ ಜ.೨೯ರಂದು ಜಿಲ್ಲೆಯ ಹತ್ತಳ್ಳಿ ಗ್ರಾಮ ಪಂಚಾಯತಿ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಸೇರಿದಂತೆ ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕ ಸಿ.ಬಿ.ಚೌಧರಿ ಇತರರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

