ವಿಜಯಪುರ: ಧಾರವಾಡದ ಸಿಡಾಕ್, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ರಾಜ್ಯ ಕೌಶಲ್ಯಾಭಿವೃದ್ದಿ ನಿಗಮದ ವತಿಯಿಂದ ನಿರುದ್ಯೋಗ ಯುವಕ-ಯುವತಿಯರಿಗೆ ೧೦ ದಿನಗಳ ಉದ್ಯಮಶೀಲತಾಭಿವೃದ್ದಿ ತರಬೇತಿ ಕಾರ್ಯಕ್ರಮ ವಿಜಯಪುರದಲ್ಲಿ ಏರ್ಪಡಿಸಲಾಗಿದೆ.
ಶಿಬಿರದಲ್ಲಿ ಉದ್ಯಮದ ಆಯ್ಕೆ ವಿಧಾನ, ಬ್ಯಾಂಕ್ ಮತ್ತು ಕೈಗಾರಿಕಾ ಇಲಾಖೆಯಿಂದ ದೊರೆಯುವ ಸಹಾಯ-ಸೌಲಭ್ಯ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಸುವ ವಿಧಾನ, ಜಿಎಸ್‌ಟಿ, ಪ್ಯಾಕೇಜಿಂಗ್ ಮತ್ತು ಬ್ರಾಂಡಿಂಗ್ ಸೇರಿದಂತೆ ಸಮಗ್ರ ಮಾಹಿತಿ ಒದಗಿಸಲಾಗುವುದು. ಆಸಕ್ತರು ಮೊ: ೮೮೮೪೧೮೪೪೯೩ ಸಂಖ್ಯೆಗೆ ಸಂಪರ್ಕಿಸಿ ದಿನಾಂಕ : ೦೭-೦೨-೨೦೨೪ರೊಳಗಾಗಿ ನೊಂದಾಯಿಸಿಕೊಳ್ಳುವಂತೆ ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
