ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಸಂಸ್ಥಾನ ಹಿರೇಮಠದಲ್ಲಿ ಫೆ.೨ ರಿಂದ ೪ ರವರೆಗೆ ಜಗದ್ಗುರು ಲಿಂ.ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿಯವರ ೧೧ ಪುಣ್ಯಾರಾಧನೆ, ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿಯವರ ಪಟ್ಟಾಧಿಕಾರ ದಶಮಾನೋತ್ಸವ ಹಾಗೂ ಸಂಗನಬಸವ ಕಲ್ಯಾಣ ಮಂಟಪ ಲೋಕಾರ್ಪಣೆ, ನೂತನ ರಥೋತ್ಸವ ಲೋಕಾರ್ಪಣೆ, ಸಾಮೂಹಿಕ ವಿವಾಹ, ೨೦೦೮ ತಾಯಂದಿರಿಂದ ಕುಂಭೋತ್ಸವ, ೫೦೦೮ ತಾಯಂದಿರಿಗೆ ಉಡಿತುಂಬುವ ಕಾರ್ಯಕ್ರಮ, ೨೫ ಮಠಾಧೀಶರ ಮಂಟಪ ಪೂಜೆ, ಸಂಗನಬಸವಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಮನಗೂಳಿ ಸಂಸ್ಥಾನ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ದಿನಗಳ ಕಾಲ ನಡೆಯುವ ಕಾರ್ಯಕ್ರಮಕ್ಕೆ ಸಿದ್ದತೆ ಭರದಿಂದ ನಡೆದಿದೆ. ಈಗಾಗಲೇ ಕಾರ್ಯಕ್ರಮದಂಗವಾಗಿ ಜ.೧೭ ರಿಂದ ಕಲಬುರಗಿ ಶರಣಬಸವೇಶ್ವರ ಪುರಾಣ ಜರಗುತ್ತಿದೆ. ಕಾರ್ಯಕ್ರಮಕ್ಕೆ ವಿಶಾಲವಾದ ಶಾಮಿಯಾನ, ಆಗಮಿಸುವ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ನಾಡಿನ ಅನೇಕ ಪೂಜ್ಯರು, ಡಿಸಿಎಂ, ಅನೇಕ ಸಚಿವರು, ಶಾಸಕರು, ಜನಪ್ರತಿನಿಧಿಗಳು, ಮುಖಂಡರು ಆಗಮಿಸಲಿದ್ದಾರೆ ಎಂದರು.
ಫೆ.೨ ರಂದು ಬೆಳಗ್ಗೆ ೮ ಗಂಟೆಗೆ ಕುಂಭೋತ್ಸವ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜರುಗುವುದು. ನಂತರ ಲಿಂ.ಸಂಗನಬಸವ ಶಿವಾಚಾರ್ಯ ಹಾಗೂ ಲಿಂ.ಡಾ.ಮಹಾಂತ ಶಿವಾಚಾರ್ಯ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ಅಯ್ಯಾಚಾರ, ಶಿವದೀಕ್ಷೆ ಕಾರ್ಯಕ್ರಮ ಜರುಗುತ್ತವೆ. ನಂತರ ೧೧ ಗಂಟೆಗೆ ೫೦೦೮ ತಾಯಂದಿರಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ೨೫ ಮಠಾಧೀಶರ ಮಂಟಪ ಪೂಜೆ ನಡೆಯಲಿದೆ. ಈ ಕಾರ್ಯಕ್ರಮವನ್ನು ವಿಧಾನ ಪರಿಷತ್ತಿನ ಸದಸ್ಯರಾದ ಸುನೀಲಗೌಡ ಪಾಟೀಲ, ಹಣಮಂತ ನಿರಾಣಿ ಉದ್ಘಾಟಿಸುವರು. ಸಾನಿಧ್ಯವನ್ನು ಚನ್ನಬಸವ ಸ್ವಾಮೀಜಿ, ವೀರರುದ್ರಮುನಿ ಶಿವಾಚಾರ್ಯರು ಸೇರಿದಂತೆ ಅನೇಕ ಪೂಜ್ಯರು ವಹಿಸುವರು. ಅಧ್ಯಕ್ಷತೆಯನ್ನು ಶಾಸಕ ಭೀಮನಗೌಡ ಪಾಟೀಲ ವಹಿಸುವರು. ಈ ಕಾರ್ಯಕ್ರಮಕ್ಕೆ ಅನೇಕ ಗಣ್ಯರು ಆಗಮಿಸುವರು ಎಂದರು.
ಫೆ.೩ ರಂದು ಬೆಳಗ್ಗೆ ೧೦.೩೦ ಗಂಟೆಗೆ ಸಂಗನಬಸವ ಕಲ್ಯಾಣ ಮಂಟಪ ಲೋಕಾರ್ಪಣೆ,ಉಭಯ ಶ್ರೀಗಳ ಧ್ವನಿ ಸುರುಳಿ ಬಿಡುಗಡೆ ಮತ್ತು ಸಂಗನಬಸವಶ್ರೀ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಧರ್ಮಸಭೆ ಜರುಗಲಿದೆ. ಸಾನಿಧ್ಯವನ್ನು ರಂಭಾಪುರಿ ಪೀಠದ ಜಗದ್ಗುರು ಡಾ.ವೀರಸೋಮೇಶ್ವರ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರು ವಹಿಸುವರು. ಡಿಸಿಎಂ ಡಿ.ಕೆ.ಶಿವಕುಮಾರ, ಸಚಿವ ಎಚ್.ಕೆ.ಪಾಟೀಲ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಸಚಿವ ಶಿವಾನಂದ ಪಾಟೀಲ ವಹಿಸುವರು. ಸಚಿವರಾದ ಎಂ.ಬಿ.ಪಾಟೀಲ, ಲಕ್ಷ್ಮಣ ಸವದಿ ಉಭಯಶ್ರೀಗಳ ಧ್ವನಿಸುರುಳಿ ಬಿಡುಗಡೆ ಮಾಡುವರು. ಕಾರ್ಯಕ್ರಮಕ್ಕೆ ಶಾಸಕರಾದ ಅಪ್ಪಾಜಿ ನಾಡಗೌಡ, ಯಶವಂತರಾಯಗೌಡ ಪಾಟೀಲ, ವಿಠ್ಠಲ ಕಟಕದೊಂಡ, ಅಶೋಕ ಮನಗೂಳಿ, ವಿಜಯಾನಂದ ಕಾಶಪ್ಪನವರ ಸೇರಿದಂತೆ ಅನೇಕ ಮಾಜಿ ಶಾಸಕರು, ವಿವಿಧ ಮುಖಂಡರು ಆಗಮಿಸುತ್ತಾರೆ ಎಂದರು.
ಫೆ.4 ರಂದು ಜಗದ್ಗುರು ಲಿಂ. ಡಾ.ಮಹಾಂತ ಶಿವಾಚಾರ್ಯ ಸ್ವಾಮೀಜಿಯವರ ೧೧ ನೇ ಪುಣ್ಯಾರಾಧನೆ, ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿಯವರ ಪಟ್ಟಾಧಿಕಾರದ ದಶಮಾನೋತ್ಸವ, ಉಚಿತ ಸಾಮೂಹಿಕ ವಿವಾಹ, ನೂತನ ರಥೋತ್ಸವ ಲೋಕಾರ್ಪಣೆ ಕಾರ್ಯಕ್ರಮ ಬೆಳಗ್ಗೆ ೧೧ ಗಂಟೆಗೆ ಜಗದ್ಗುರು ಡಾ.ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ, ಜಗದ್ಗುರು ಡಾ.ಮಹಾದೇವ ಶಿವಾಚಾರ್ಯ ಸ್ವಾಮೀಜಿ, ಜಗದ್ಗುರು ಡಾ.ತೋಂಟದ ಸಿದ್ದರಾಮ ಸ್ವಾಮೀಜಿ, ಜಗದ್ಗುರು ವಚನಾನಂದ ಸ್ವಾಮೀಜಿ ಸಾನಿಧ್ಯದಲ್ಲಿ ಜರುಗಲಿದೆ. ಅಧ್ಯಕ್ಷತೆಯನ್ನು ವಿಜುಗೌಡ ಪಾಟೀಲ ವಹಿಸುವರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವ ಮುರಗೇಶ ನಿರಾಣಿ ಕಾರ್ಯಕ್ರಮ ಉದ್ಘಾಟಿಸುವರು. ಕಾರ್ಯಕ್ರಮಕ್ಕೆ ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಸೇರಿದಂತೆ ವಿವಿಧ ಗಣ್ಯರು ಆಗಮಿಸುತ್ತಾರೆ. ಸಂಜೆ 5 ಗಂಟೆಗೆ ಮಹಿಳೆಯರಿಂದ ನೂತನ ರಥೋತ್ಸವ ಸಾಗಲಿದೆ. ಮೂರು ದಿನಗಳ ಕಾಲ ನಡೆಯುವ ಶ್ರೀಮಠದ ಕಾರ್ಯಕ್ರಮಕ್ಕೆ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದರು. ಸುದ್ದಿಗೋಷ್ಠಿಯಲ್ಲಿ ವಿಡಿಸಿಸಿ ಬ್ಯಾಂಕಿನ ನಿರ್ದೇಶಕ ಚಂದ್ರಶೇಖರಗೌಡ ಪಾಟೀಲ, ಮುಖಂಡರಾದ ಎಂ.ಎಸ್.ಗುಜಗೊಂಡ, ಸಿದ್ದು ಬಿರಾದಾರ, ವಿನೂತ ಕಲ್ಲೂರ, ಶಿವಾನಂದ ತೋಳನೂರ, ಬಸವರಾಜ ನಾಯ್ಕೋಡಿ ಇದ್ದರು.
Subscribe to Updates
Get the latest creative news from FooBar about art, design and business.
ಫೆ.೨ರಿಂದ ಮನಗೂಳಿ ಸಂಸ್ಥಾನ ಹಿರೇಮಠದಲ್ಲಿ ವಿವಿಧ ಕಾರ್ಯಕ್ರಮಗಳು
Related Posts
Add A Comment

