Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜ್ಞಾನವಾಪಿ ಮಸೀದಿ ನೆಲಮಹಡಿಯಲ್ಲಿ ಪೂಜೆಗೆ ಅವಕಾಶ!
(ರಾಜ್ಯ ) ಜಿಲ್ಲೆ

ಜ್ಞಾನವಾಪಿ ಮಸೀದಿ ನೆಲಮಹಡಿಯಲ್ಲಿ ಪೂಜೆಗೆ ಅವಕಾಶ!

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಾರಣಾಸಿ ಜಿಲ್ಲಾ ನ್ಯಾಯಾಲಯದ ಐತಿಹಾಸಿಕ ತೀರ್ಪು | ಒಂದು ವಾರದೊಳಗಾಗಿ ಅಗತ್ಯ ವ್ಯವಸ್ಥೆಗೆ ಸೂಚನೆ

ಲಖನೌ: ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಹಿಂದೂ ಭಕ್ತರು ಪೂಜೆ-ಪ್ರಾರ್ಥನೆ ಸಲ್ಲಿಸಬಹುದು ಎಂದು ವಾರಣಾಸಿ ಜಿಲ್ಲಾ ನ್ಯಾಯಾಲಯ ಬುಧವಾರ ಆದೇಶ ನೀಡಿದೆ.
ವಾರಣಾಸಿ ಮಸೀದಿಯ ಬೀಗ ಮುದ್ರೆ ಹಾಕಿರುವ ನೆಲ ಮಹಡಿ ‘ವ್ಯಾಸ್ ಕಾ ಠಿಕಾಣಾ’ದಲ್ಲಿ ಹಿಂದೂ ಭಕ್ತರು ಪೂಜೆ ಸಲ್ಲಿಸಬಹುದಾಗಿದೆ. ಹಿಂದೂಗಳಿಗೆ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸುವುದಕ್ಕಾಗಿ ಇನ್ನು ಒಂದು ವಾರದೊಳಗಾಗಿ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ನ್ಯಾಯಾಲಯವು ತನ್ನ ವಿಚಾರಣೆಯ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. ಬ್ಯಾರಿಕೇಡ್‌ಗಳನ್ನು ತೆಗೆಯುವುದು ಸೇರಿದಂತೆ ವ್ಯವಸ್ಥೆಗಳನ್ನು ಒಂದು ವಾರದಲ್ಲಿ ಪೂರ್ಣಗೊಳಿಸಬೇಕು ಎಂದು ನ್ಯಾಯಾಧೀಶರು ಹೇಳಿದ್ದಾರೆ. ಕಾಶಿ ವಿಶ್ವನಾಥ ದೇಗುಲದ ಅರ್ಚಕರಿಂದ ಪ್ರಾರ್ಥನೆ ನಡೆಸಬೇಕು ಎಂದು ನ್ಯಾಯಾಲಯ ಹೇಳಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಹಿಂದೂ ಮಹಿಳಾ ಅರ್ಜಿದಾರರ ಪರ ವಕೀಲ ವಿಷ್ಣು ಶಂಕರ್ ಜೈನ್, ಎಲ್ಲರಿಗೂ ಅಲ್ಲಿ ಪ್ರಾರ್ಥನೆ ಮಾಡುವ ಹಕ್ಕು ಇದೆ, ಇದೊಂದು ಮಹತ್ವದ ಆದೇಶವಾಗಿದೆ. ಆದೇಶದಂತೆಯೇ ವಾರದೊಳಗೆ ಅಲ್ಲಿ ನಾವು ಪೂಜೆ ಮಾಡಲಿದ್ದೇವೆ ಎಂದು ಹೇಳಿದ್ದಾರೆ.
ಮಸೀದಿಯಲ್ಲಿ ಒಟ್ಟು 4 ನೆಲಮಾಳಿಗೆಗಳಿದೆ. ಅವುಗಳ ಪೈಕಿ ಒಂದು ಇಲ್ಲಿ ವಾಸಿಸುತ್ತಿದ್ದ ಹಿಂದೂ ಕುಟುಂಬವೊಂದರ ವಶದಲ್ಲಿದೆ. ಹಾಗಾಗಿ, ಇದರಲ್ಲಿರುವ ‘ವ್ಯಾಸ್ ಕಾ ಠಿಕಾಣಾ’ದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದು ಎಂದು ನ್ಯಾಯಾಲಯ ಹೇಳಿದೆ. ಈ ಆದೇಶವನ್ನು ಮಸೀದಿ ಸಮಿತಿಯು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸುವ ನಿರೀಕ್ಷೆಯಿದೆ.
ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದ ಸಮೀಕ್ಷಾ ವರದಿಯನ್ನು ಭಾರತೀಯ ಪುರಾತತ್ವ ಇಲಾಖೆ ಇತ್ತೀಚೆಗೆ ಬಹಿರಂಗಪಡಿಸಿತ್ತು. ಹಿಂದೂ ದೇವಾಲಯದ ಅವಶೇಷಗಳ ಮೇಲೆ ಮಸೀದಿ ನಿರ್ಮಿಸಲಾಗಿದೆ. ಮಸೀದಿಗೂ ಮುನ್ನ ಅಲ್ಲೊಂದು ದೊಡ್ಡ ಹಿಂದೂ ದೇವಾಲಯವಿತ್ತು ಎಂದು 839 ಪುಟಗಳ ವರದಿಯಲ್ಲಿ ಉಲ್ಲೇಖಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸುತ್ತಿರುವ ವಾರಣಾಸಿ ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ಅವರು ಕಳೆದ ವರ್ಷ ಜುಲೈ 21 ರಂದು ಎಎಸ್‌ಐಗೆ ಜ್ಞಾನವಾಪಿ ಆವರಣದ ವೈಜ್ಞಾನಿಕ ಸಮೀಕ್ಷೆಯನ್ನು ಮಾಡಿ, ಮಸೀದಿಯು ಹಳೆಯ ರಚನೆಯ ಮೇಲೆ ನಿಂತಿದೆಯೇ ಎಂದು ನಿರ್ಧರಿಸಲು ಸೂಚಿಸಿದ್ದರು. ಅದರಂತೆ ಸಮೀಕ್ಷೆ ನಡೆಸಿದ ಪುರಾತತ್ವ ಇಲಾಖೆಯು ಒಂದು ತಿಂಗಳ ಹಿಂದೆ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿತ್ತು. ಕಳೆದ ಬುಧವಾರ, ವಾರಣಾಸಿ ನ್ಯಾಯಾಲಯವು ಎರಡೂ ಕಡೆಯವರಿಗೆ ವರದಿಯನ್ನು ನೀಡುವಂತೆ ಆದೇಶಿಸಿತ್ತು. ಕೋರ್ಟ್ ತೀರ್ಪು ಇದೀಗ ಹಿಂದೂಗಳ ಸಂತೋಷವನ್ನು ಮತ್ತಷ್ಟು ಹೆಚ್ಚಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
  • ಶಾಸಕರ ಭರವಸೆ ಮೇರೆಗೆ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.