Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೆಂದು ಕವಿಯಾದ ದ.ರಾ.ಬೇಂದ್ರೆ :ಸಂತೋಷ ಕುಲಕರ್ಣಿ
(ರಾಜ್ಯ ) ಜಿಲ್ಲೆ

ಬೆಂದು ಕವಿಯಾದ ದ.ರಾ.ಬೇಂದ್ರೆ :ಸಂತೋಷ ಕುಲಕರ್ಣಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ: ನಾನು, ನೀನು, ಆನು, ತಾನು ಎಂಬ ನಾಲ್ಕೇ ನಾಲ್ಕು ಅದ್ವೈತ ಸಿದ್ದಾಂತದ ಆಧ್ಯಾತ್ಮಿಕ ಪದಗಳನ್ನೊಳಗೊಂಡತೆ ಸರಳ ಹಾಗೂ ಸರ್ವಕಾಲಕ್ಕೂ ಬಾಳುವಂತಹ ಕವನಗಳನ್ನು ಬರೆದು ಶಬ್ದಗಾರುಡಿಗ ಎಂದು ಪ್ರಖ್ಯಾತಿ ಪಡೆದವರು ನಾಕುತಂತಿ ಖ್ಯಾತಿಯ ವರಕವಿ ದ.ರಾ.ಬೇಂದ್ರೆಯವರು ಬೆಂದು ಕವಿಯಾದರು ಎಂದು ಪಿಡಿಜೆ ಪದವಿ ಪೂರ್ವ ಕಾಲೇಜಿನ ಕನ್ನಡ ಉಪಾನ್ಯಾಸಕ ಸಂತೋಷ ಕುಲಕರ್ಣಿ ಹೇಳಿದರು.
ಪಟ್ಟಣದ ಶ್ರೀ ಸಂಗಮೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಕನ್ನಡ ವಿಭಾಗ ಆಯೋಜಿಸಿದ ವರಕವಿ ಬೇಂದ್ರೆ ಅವರ ಜನ್ಮದಿನದ ಅಂಗವಾಗಿ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತ ಅವರು, ಅಂಬಿಕಾತನಯ ದತ್ತ ಎಂಬ ಕಾವ್ಯ ನಾಮದಿಂದ ಕವನಗಳನ್ನು ಬರೆದು ಜನಸಾಮಾನ್ಯರಿಗೂ ತಿಳಿಯುವಂತೆ ಮಾಡಿದರು. ಗರಿ, ನಾದಲೀಲೆ, ನಾಕುತಂತಿ, ಅರಳು ಮರಳು, ಉಯ್ಯಾಲೆ, ಸಖೀಗೀತ ಮುಂತಾದ ಪ್ರಸಿದ್ಧ ಕವನ ಸಂಕಲಗಳನ್ನು ಬರೆದಿದ್ದಾರೆ. ಅವರ ನರಬಲಿ ಕವನ ಬ್ರಿಟಿಷ್ ಆಡಳಿತವನ್ನು ಪ್ರಶ್ನಿಸುವಂತೆ ಇದ್ದುದರಿಂದ ಅವರನ್ನು ಸೆರೆಮನೆಗೆ ಹಾಕಲಾಯಿತು ಎಂದರು.
ಪ್ರಾಸ್ಥಾವಿಕವಾಗಿ ಮಾತನಾಡಿದ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎಂ. ಎಸ್. ಮಾಗಣಗೇರಿ, ‘ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು, ಬಳಸಿಕೊಂಡೆವು ಅದನು ಅದಕು ಇದಕು ಎದಕು’ ಕವನದ ತಿರುಳು ಬೆಂದು ಬೇಂದ್ರೆಯಾದ ಒಲವಿನ ಆಶಯವನ್ನು ಧ್ವನಿಸಿದರೆ ‘ಸಖೀ ಗೀತ’ವಂತೂ ಬದುಕಿನ ಬವಣೆಯ ಮಹಾಕಾವ್ಯವೇ ಸರಿ ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ನಿರ್ದೇಶಕ ಬಸವರಾಜ ಯಕಂಚಿ ಮಾತನಾಡಿ, ಬೇಂದ್ರೆಯವರು ಹೇಳಿದ ರಸವೇ ಜನನ, ವಿರಸವೇ ಮರಣ, ಸಮರಸವೇ ಜೀವನ ಎಂಬ ಮಾತು ಕವಿ ಹಾಗೂ ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆಯಾಯಿತು. ಅವರ ನಾಕುತಂತಿ ಕವನ ಸಂಕಲನಕ್ಕೆ ಜ್ಞಾನಪೀಠ ಪ್ರಶಸ್ತಿ ಲಭಿಸಿದೆ. ಆದ್ದರಿಂದ ವಿದ್ಯಾರ್ಥಿಗಳು ಚಿಕ್ಕಂದಿನಿಂದಲೇ ಕವನಗಳನ್ನು ಓದುವ ಹಾಗೂ ಬರೆಯುವ ಪ್ರವೃತ್ತಿ ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು.
ಆಡಳಿತಾಧಿಕಾರಿ ಡಾ.ಎಸ್.ಎಸ್.ಚೋರಗಿ ಮಾತನಾಡಿ ‘ಎನ್ನ ಪಾಡೆನಗಿರಲಿ ಅದರ ಹಾಡನ್ನಷ್ಟೆ ನೀಡುವೆನು ರಸಿಕ ನಿನಗೆ ಕಲ್ಲುಸಕ್ಕರೆಯಂಥ ನಿನ್ನೆದೆಯು ಕರಗಿದರೆ ಅದರ ಸವಿಯನು ಹನಿಸು ಎನಗೆ’ ಎಂದು ಬೇಂದ್ರೆಯವರ ಕಾವ್ಯದ ಸವಿಯನ್ನು ನೆನಪಿಸಿಕೊಂಡರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಡಾ.ಎಸ್.ಬಿ.ರಾಠೋಡ ಮಾತನಾಡಿ, ಶ್ರೇಷ್ಠ ಸಾಹಿತ್ಯ ಸಂಪತ್ತನ್ನು ನಿರ್ಮಾಣ ಮಾಡಿ ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿದ ಹೆಗ್ಗಳಿಕೆ ಬೇಂದ್ರೆಯವರಿಗೆ ಸಲ್ಲುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಗ್ರಂಥಪಾಲಕ ಎಂ.ಕೆ. ಬಿರಾದಾರ, ಪ್ರೊ. ಬಸವರಾಜ ಯಳ್ಳೂರ, ಪ್ರೊ. ಮಯೂರ್ ಕುದುರಿ, ಪ್ರೊ. ಮುರುಗೇಶ್ ಕೆ. ಎಂ., ಪ್ರೊ. ಎಸ್. ಎಸ್. ವಾಲಿಕಾರ ಪ್ರೊ. ಪೂಜಾ ಬುರುಡ, ಪ್ರೊ.ವಿನೋದ ಘೆವಂಡೆ ಹಾಗೂ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕು. ರಾಜಶ್ರೀ ಹೊನಮೋರೆ ಪ್ರಾರ್ಥಿಸಿದರೆ, ಪ್ರೊ.ಮಹಾಂತೇಶ ಜನವಾಡ ಸ್ವಾಗತಿಸಿದರು. ಪ್ರೊ. ಎಸ್. ಎಫ್. ಬಿರಾದಾರ ನಿರೂಪಿಸಿದರೆ, ಡಾ. ಎಸ್. ಎಸ್. ದೇಸಾಯಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
  • ಶಾಸಕರ ಭರವಸೆ ಮೇರೆಗೆ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.