ಆಲಮಟ್ಟಿ: ಫೆ.3 ರಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಆಲಮಟ್ಟಿಗೆ ಆಗಮಿಸಲಿದ್ದು, ಕೃಷ್ಣಾ ಮೇಲ್ದಂಡೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಶನಿವಾರ ಕಲಬುರಗಿಯಿಂದ ರಸ್ತೆ ಮೂಲಕ ಮಧ್ಯಾಹ್ನ 12 ಕ್ಕೆ ಬಸವನಬಾಗೇವಾಡಿ ತಾಲ್ಲೂಕಿನ ಮನಗೂಳಿಯ ಸಂಗನಬಸವ ಸ್ವಾಮೀಜಿಗಳ ಬೆಳ್ಳಿ ಮಹೋತ್ಸವ ಅಂಗವಾಗಿ ಮನಗೂಳಿ ಕಲ್ಯಾಣ ಮಂಟಪದಲ್ಲಿ ನೂತನ ರಥೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಅಲ್ಲಿಂದ ಮಧ್ಯಾಹ್ನ 3 ಕ್ಕೆ ಆಲಮಟ್ಟಿಗೆ ಆಗಮಿಸುವ ಅವರು, ಇಲ್ಲಿಯ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಕೆಬಿಜೆಎನ್ ಎಲ್ ಅಧಿಕಾರಿಗಳ ಜತೆ ಕಾಮಗಾರಿಗಳ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಂಜೆ 6 ಕ್ಕೆ ಆಲಮಟ್ಟಿಯಿಂದ ಹುಬ್ಬಳ್ಳಿಗೆ ರಸ್ತೆ ಮೂಲಕ ತೆರಳಿ ಅಲ್ಲಿಂದ ಬೆಂಗಳೂರಿಗೆ ತೆರಳಲಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

