ವಿಜಯಪುರ: 2047ರ ವೇಳೆಗೆ ನಾವು ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ನಲ್ಲಿ
ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿರುವುದು ಸ್ವಾಗತಾರ್ಹ ಎಂದು ಬಿಜೆಪಿ ಮುಖಂಡ ಡಾ.ಗೌತಮ್.ಆರ್.ಚೌಧರಿ ಹೇಳಿದ್ದಾರೆ.
ಕಳೆದ 10 ವರ್ಷಗಳಲ್ಲಿ ದೇಶದ 25 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಮಹಿಳೆಯರಿಗೆ, ರೈತರಿಗೆ, ಪ್ರವಾಸೋದ್ಯಮಕ್ಕೆ, ರೈಲು ಅಭಿವೃದ್ಧಿಗೆ ಹಾಗೂ ಎಂಎಸ್‌ಎಂಇ ಉದ್ಯಮಗಳಿಗೆ, ಪರಿಸರಕ್ಕೆ ಸರ್ಕಾರ ಆದ್ಯತೆ ಕೊಟ್ಟಿರುವುದು ಇಡೀ ದೇಶದ ಜನರು ಖುಷಿ ಪಡುವ ವಿಚಾರ. ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನಮಾನ ದೃಷ್ಟಿಕೋನದಲ್ಲಿ ಇಟ್ಟುಕೊಂಡು ಮಂಡಿಸಿರುವ ಈ ಬಜೆಟ್ ಎಲ್ಲ ವರ್ಗದವರಿಗೂ ಅನಕೂಲಕರವಾಗಿದೆ ಎಂದು ಡಾ.ಗೌತಮ್ ಚೌಧರಿ ಪ್ರತಿಕ್ರಿಯಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

