ಇಂಡಿ: ದೇಶದ ಅಭಿವೃದ್ಧಿಗಾಗಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು’ ಎಂಬುದು ನಮ್ಮೆಲ್ಲರ ಅಭಿಪ್ರಾಯವಾಗಿದೆ ಎಂದು ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕಾಸುಗೌಡ ಬಿರಾದಾರ ಹೇಳಿದರು.
ಗುರುವಾರ ಪಟ್ಟಣದಲ್ಲಿ ಬಿಜೆಪಿ ಯುವ ಮೋರ್ಚಾ ಮಂಡಲ ವತಿಯಿಂದ ಮನೆ ಮನೆಗೆ ತೆರಳಿ ಗೊಡೆ ಬರಹ ಅಭಿಯಾನದಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿ ಎಂಬ ಗೋಡೆ ಬರಹಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪುರಸಭೆ ಸದಸ್ಯ ಅನೀಲಗೌಡ ಬಿರಾದಾರ ಮಾತನಾಡಿ, ಪ್ರಧಾನಿ ನರೇಂದ್ರಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿ ಮಾಡಬೇಕು ಎನ್ನುವುದು ಮುಖ್ಯ ಗುರಿಯಾಗಿದೆ. ಕಳೆದ 10 ವರ್ಷಗಳಿಂದ ಸುಭದ್ರ ಸರ್ಕಾರ ನೀಡುವ ಮೂಲಕ ದೇಶವನ್ನು ಅಭಿವೃದ್ದಿ ಪಥದತ್ತ ಕೊಂಡೊಯ್ಯತ್ತಿದ್ದಾರೆ. ದೇಶದ ಉನ್ನತಿಗೆ ಶ್ರಮಿಸಿದ್ಧಾರೆ. ಆ ಮೂಲಕ ಮೋದಿ ಕೈ ಬಲಪಡಿಸಬೇಕಿದೆ. ಮುಂಬರುವ ಲೋಕಸಭೆ ಚುನಾವಣೆ ವೇಳೆಗೆ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಪಕ್ಷವನ್ನು ಸದೃಢ ಮಾಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶೀಲವಂತ ಉಮರಾಣಿ, ಪುರಸಭೆ ಸದಸ್ಯ ದೇವೇಂದ್ರ ಕುಂಬಾರ, ರಾಚು ಬಡಿಗೇರ, ವಜ್ರಕಾಂತ್ ಕುಡಿಗನೂರ, ಶಂಕರ್ ಹಲವಾಯಿ, ಶ್ರೀಕಾಂತ್ ಬಡಿಗೇರ, ಮಂಜು ದೇವರ, ಅಮೋಘಸಿದ್ದ ಕುಂಬಾರ, ಶರಣು ಮಾಳಗೆ, ಬಸು ಸರಸಂಭಿ, ಪಕ್ಕು ಕುಂಬಾರ, ಶೀವು ಕುಂಬಾರ, ಪ್ರವೀಣ ಮಠ ಇನ್ನೂ ಅನೇಕರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

