ಬಸವನಬಾಗೇವಾಡಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಸರಕಾರ ಮಧ್ಯಂತರ ಬಜೆಟ್ ಪ್ರಧಾನಮಂತ್ರಿ ಮೋದಿಯವರು ಹೇಳಿದ ಹಾಗೆ ದೇಶದ ಭವಿಷ್ಯ ರೂಪಿಸುವ ಬಜೆಟ್ ಆಗಿದೆ. ಕಾರ್ಯಕರ್ತೆಯರಿಗೆ, ಸಹಾಯಕರಿಗೆ, ಆಶಾ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ ಯೋಜನೆಯನ್ನು ಜಾರಿಗೆ ತಂದಿರುವುದು ಉತ್ತಮ ಬೆಳವಣಿಗೆಯಾಗಿದೆ. ಒಂದು ಕೋಟಿ ಮನೆಗಳಿಗೆ ಸೋಲಾರ್ ವಿದ್ಯುತ್ತನ್ನು, ಪ್ರತಿ ಮನೆಗೆ 300 ಯುನಿಟ್ ಪುಕ್ಕಟೆಯಾಗಿ ಒದಗಿಸುವುದು ಬಜೆಟ್ ನ ಮುಖ್ಯ ಗುರಿಯಾಗಿದೆ. ಆಧುನಿಕ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಒತ್ತು, ಪ್ರವಾಸೋದ್ಯಮ ಇಲಾಖೆಗೆ ಹೆಚ್ಚಿನ ಗಮನ ನೀಡಿರುವುದು, ರಕ್ಷಣಾ ಇಲಾಖೆಗೆ 11 ಲಕ್ಷ ಕೋಟಿ ಹಣವನ್ನು ಮೀಸಲಾಗಿರಿಸಿರುವದು ಸೇರಿದಂತೆ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರುವಲ್ಲಿ ಒತ್ತುಕೊಡಲಾಗಿದೆ. ಒಟ್ಟಾರೆಯಾಗಿ ಬಜೆಟ್ ಬಡವರ ಹಾಗೂ ಮಧ್ಯಮ ವರ್ಗದವರ ಪರವಾಗಿದೆ ಎಂದು ಭಾರತೀಯ ಜನತಾ ಪಕ್ಷದ ಮಹಿಳಾ ಮಂಡಲ ಅಧ್ಯಕ್ಷೆ ಸಾವಿತ್ರಿ ಕಲ್ಯಾಣಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

