ವಿಜಯಪುರ: ಜಿಲ್ಲೆಯಲ್ಲಿ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳ ಪತ್ತೆ ಕುರಿತಂತೆ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಸೋನವಾಣೆ ಮಾಹಿತಿ ನೀಡಿದರು.
ನಗರದಲ್ಲಿ ಗುರುವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರದ ಸಿಈಎನ್ ಪೊಲೀಸ್‌ಠಾಣೆಯಲ್ಲಿ ದಾಖಲಾಗಿದ್ದ ಒಟ್ಟು 12 ಅಪರಾಧ ಪ್ರಕರಣಗಳು ದಾಖಲಾಗಿದ್ದವು. ಇವುಗಳ ಪತ್ತೆಗೆ ವಿಶೇಷ ತಂಡವನ್ನ ರಚಿಸಲಾಗಿತ್ತು. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ರಚಿಸಲಾದ ತಂಡ ಯಶಸ್ವಿ ಪತ್ತೆ ಕಾರ್ಯಾಚರಣೆ ಮಾಡಿದ್ದು, ಒಟ್ಟು ದಾಖಲಾದ 12 ಅಪರಾಧ ಪ್ರಕರಣಗಳಲ್ಲಿ ಒಟ್ಟು ಎರಡು ಕೋಟಿ ಏಳು ಲಕ್ಷದಷ್ಟು ಆರ್ಥಿಕ ವಂಚನೆಯಲ್ಲಿ 1 ಕೋಟಿ 89 ಲಕ್ಷದಷ್ಟು ಮೊತ್ತವನ್ನ ಮರಳಿ ಜಮೆ ಮಾಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇದಲ್ಲದೇ ಜಿಲ್ಲೆಯಲ್ಲಿ ವಿವಿಧ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಆಗಿದ್ದ ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ ಎಂದು ಎಸ್ಪಿ ಋಷಿಕೇಸ್ ಸೋನವಾಣೆ ಮಾಹಿತಿ ನೀಡಿದರು.
ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ 4,58,500 ರೂಪಾಯಿ ಮೌಲ್ಯದ 25 ವಿವಿಧ ಕಂಪನಿಯ ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ, ಕಳ್ಳತನವಾದ ಮೊಬೈಲ್‌ಗಳನ್ನು ಸಿಇಐಆರ್ ವೈಬ್ ಸೈಟ್ ಮುಖಾಂತರ ಮೊಬೈಲ್‌ಗಳನ್ನು ಪತ್ತೆ ಮಾಡಲಾಗಿದೆ ಎಂದು ವಿವರಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

