ವಿಜಯಪುರ: ಅಂತಾರಾಷ್ಟ್ರೀಯ ಖ್ಯಾತಿಯ ಅಥ್ಲೀಟ್ ಮತ್ತು ಖ್ಯಾತ ವೈದ್ಯ ದಿ. ಡಾ. ಸಿ. ಆರ್. ಬಿದರಿಯವರ ಪುಣ್ಯಸ್ಮರಣೆ ಅಂಗವಾಗಿ ಫೆಬ್ರುವರಿ 4 ರಂದು ರವಿವಾರ ಬಿ. ಎಲ್. ಡಿ. ಇ ಸಂಸ್ಥೆಯ ಅಂತರ ಶಾಲಾ ಕಾಲೇಜುಗಳ ಅಥ್ಲೇಟಿಕ್ ಕ್ರೀಡಾಕೂಟ ಆಯೋಜಿಸಲಾಗಿದ್ದು, ಬಿ.ಎಲ್.ಡಿ. ಸಂಸ್ಥೆಯ ಬಂಗಾರಮ್ಮ ಸಜ್ಜನ ಮಹಿಳಾ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿನಿಯೂ ಆಗಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಮಹಿಳಾ ಆಟಗಾರ್ತಿ ರಾಜೇಶ್ವರ ಗಾಯಕವಾಡ ಉದ್ಘಾಟಿಸಲಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ಬಿ. ಕೊಟ್ನಾಳ ಮತ್ತು ಕ್ರೀಡಾ ನಿರ್ದೇಶಕ ಪ್ರೊ. ಎಸ್. ಎಸ್. ಕೋರಿ, ಫೆಬ್ರವರಿ 4 ರಂದು ಬೆಳಿಗ್ಗೆ 9 ಗಂಟೆಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜಿನ ಕ್ರೀಡಾಂಗಣದಲ್ಲಿ ಪ್ರಾರಂಭವಾಗಲಿದೆ. ಬಿ.ಎಲ್.ಡಿ.ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ತಾಂತ್ರಿಕ ಹಾಗೂ ಅಭಿಯಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ನಡೆಯಲಿರುವ ಈ ಕ್ರೀಡಾಕೂಟವನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಹಿಳಾ ಆಟಗಾರ್ತಿ ಡಾ. ರಾಜೇಶ್ವರಿ ಗಾಯಕವಾಡ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು, ಶಾಲೆ- ಕಾಲೇಜು ಪ್ರಾಂಶುಪಾಲರು ಮತ್ತು ಸಿಬ್ಬಂದಿ ಭಾಗವಹಿಸಿಲಿದಾರೆ ಎಂದು ತಿಳಿಸಿದ್ದಾರೆ.
ದಿ. ಡಾ. ಸಿ. ಆರ್.ಬಿದರಿಯವರು ಅಂತಾರಾಷ್ಟ್ರೀಯ ಖ್ಯಾತ ಓಟಗಾರರಾಗಿದ್ದು, ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿದ್ದರು. ವೈದ್ಯಕೀಯ ವೃತ್ತಿಜೀವನದ ಜೋತೆಗೆ ಕ್ರೀಡಾ ಹವ್ಯಾಸ ಬೆಳಸಿಕೊಂಡಿದ್ದರು. ಜನಸಾಮನ್ಯರು ಮತ್ತು ವಿದ್ಯಾರ್ಥಿಗಳು ಉತ್ತಮ ಆರೋಗ್ಯದ ಮತ್ತು ಕ್ರೀಡಾ ಹವ್ಯಾಸವನ್ನು ಬೆಳಸಿಕೊಳ್ಳಬೇಕು ಎಂದು ಅವರು ಸದಾ ಹಂಬಲಿಸುತ್ತಿದ್ದರು. ದಿ. ಡಾ. ಸಿ. ಆರ್. ಬಿದರಿಯವರ ಕುಟುಂಬದವರು ಡಾ.ಬಿದರಿಯವರ ಕನಸನ್ನು ನನಸು ಮಾಡಲು ಪ್ರತಿವರ್ಷ ಬಿ.ಎಲ್.ಡಿ.ಇ ಸಂಸ್ಥೆಯ ನಾನಾ ಶಾಲೆ- ಕಾಲೇಜುಗಗಳ ಅಂತರ್ ಶಾಲಾ ಅಥ್ಲೇಟಿಕ್ ಕ್ರೀಡಾಕೂಟವನ್ನು ಆಯೋಜಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಈ ಕ್ರೀಡಾಕೂಟದಲ್ಲಿ ಸುಮಾರು 850 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಡಾ. ಸಿ. ಆರ್. ಬಿದರಿಯವರು ಕುಟುಂಬದವರು ಕ್ರೀಡಾಕೂಟದ ನಾಲ್ಕು ವಿಭಾಗಗಳ ಓಟದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಒಟ್ಟು ಎಂಟು ಬಂಗಾರದ ಪದಕಗಳನ್ನು ವಿತರಿಸಲಿದ್ದಾರೆ. ಫೆ. 4ರಂದು ಸಂಜೆ 5 ಗಂಟೆಗೆ ಕ್ರೀಡಾಕೂಟದ ಸಮಾರೋಪ ನಡೆಯಲಿದೆ ಎಂದು ಡಾ. ಆರ್. ಬಿ. ಕೊಟ್ನಾಳ ಮತ್ತು ಪ್ರೊ. ಎಸ್. ಎಸ್. ಕೋರಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
