ಮುದ್ದೇಬಿಹಾಳ: ಪಟ್ಟಣದಲ್ಲಿ ತರಾತುರಿಯಲ್ಲಿ ಒಳ ಮೀಸಲಾತಿ ಜಾರಿಗೆ ತರಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಬಂಜಾರ ಸಮುದಾಯದ ಮುಖಂಡರು ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಕಾರ್ಯಕ್ರಮದ ಬೃಹತ್ ಟೆಂಟ್ ಬಳಿ ದಿಢೀರನೆ ಪ್ರತಿಭಟನೆಗೆ ಇಳಿದರು.
ಈ ವೇಳೆ ಮಾತನಾಡಿದ ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಡಾ.ಬಾಬುರಾಜೇಂದ್ರ ನಾಯಕ, ಸಿದ್ದರಾಮಯ್ಯ ಸರ್ಕಾರ ಕೇವಲ ವೋಟ್ ಬ್ಯಾಂಕ್ ಅಸ್ತ್ರ ಬಳಸುತ್ತಿದೆ. ಮುಖ್ಯಮಂತ್ರಿಗಳ ಸಾಮಾಜಿಕ ನ್ಯಾಯ ಕೇವಲ ಭಾಷಣಕಷ್ಟೇ ಮಾತ್ರ ಸೀಮಿತವಾಗಿದೆ. ತಾವೂ ಒಬ್ಬ ಹಿಂದುಳಿದ ಸಮುದಾಯದಿಂದ ಬಂದವರಾಗಿ ಅತ್ಯಂತ ಹಿಂದುಳಿದ ಸಮಾಜವಾದ ಬಂಜಾರ ಸಮಾಜಕ್ಕೆ ಅನ್ಯಾಯ ಎಸಗುತ್ತಿದ್ದಾರೆ. ತರಾತುರಿಯಾಗಿ ಒಳ ಮೀಸಲಾತಿ ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಪ್ರಯತ್ನಿಸುತ್ತಿರುವ ಈ ಸರ್ಕಾರದ ನಡೆ ಅವೈಜ್ಞಾನಿಕವಾಗಿದೆ. ಇದನ್ನು ರಾಜ್ಯದಾದ್ಯಂತ ಬಂಜಾರ ಸಮುದಾಯ ತೀವ್ರವಾಗಿ ಖಂಡಿಸುತ್ತದೆ ಎಂದರು.
ಪ್ರತಿಭಟನಾಕಾರರು ಕಪ್ಪು ಬಾವುಟ ಪ್ರದರ್ಶಿಸಲು ಮುಂದಾದಾಗ ಪೊಲೀಸರು ಬಂಜಾರ ಸಮುದಾಯದ ಮುಖಂಡರನ್ನು ಬಂಧಿಸಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಬಂಜಾರ ಯುವಕರು ಮುಖ್ಯಮಂತ್ರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕುತ್ತಿದ್ದಂತೆ, ಪ್ರತಿಭಟನಾಕಾರರನ್ನು ಮನವೊಲಿಸಲು ಪೊಲೀಸರು ವಿಫಲ ಪ್ರಯತ್ನ ನಡೆಸಿ ಅವರನ್ನು ವಶಕ್ಕೆ ಪಡೆದು ಸಂಜೆ ಬಿಡುಗಡೆಗೊಳಿಸಿದರು.
ಸಂಜೆ ಪ್ರತಿಭಟನಾಕಾರರು ಮಾಧ್ಯಮದವರೊಡನೆ ಮಾತನಾಡಿದರು.
ಈ ಸಂದರ್ಭದಲ್ಲಿ ಡಾ. ಬಸವರಾಜ್ ಚೌಹಾಣ್, ರಾಕೇಶ ರಜಪೂತ್, ಶಿವಾನಂದ ಲಮಾಣಿ, ಶಿವರಾಜ ರಾಠೋಡ್, ಮೋಹನ್ ಚವಾಣ್, ಕೃಷ್ಣ ಜಾಧವ್, ಪವನಕುಮಾರ್ ಲಮಾಣಿ, ಸಚಿನ ಚವ್ಹಾಣ ಸೇರಿದಂತೆ ಅನೇಕರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

