ಸಿಂದಗಿ: ಅಲೆಮಾರಿ ಜನಾಂಗದವರು ಬದುಕು ಕಟ್ಟಿಕೊಳ್ಳಬೇಕು ಎನ್ನುವ ಹಿನ್ನಲೆಯಲ್ಲಿ ಅಲ್ಲಿಯ ಭಾಷೆ, ಭಾವನೆ, ಬದುಕು, ಬವಣೆಯನ್ನು ಚಿಮಣಿ ಬೆಳಕಿನ ಬದುಕು ಕೃತಿಯಲ್ಲಿ ಕಟ್ಟಿ ಕೊಡಲಾಗಿದೆ ಎಂದು ಹಿರಿಯ ಜಾನಪದ ವಿದ್ವಾಂಸ ಡಾ.ಎಂ.ಎಂ ಪಡಶೆಟ್ಟಿ ಹೇಳಿದರು.
ಪಟ್ಟಣದಲ್ಲಿ ‘ಚಿಮಣಿ ಬೆಳಕಿನ ಬದುಕು ಅನ್ನೋ ನಾಟಕ ಕೃತಿಯ ಮುಖಪುಟವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಈಗಾಗಲೆ ಕಥೆ, ಕವಿತೆ ಬರೆಯುತ್ತಿರುವ ನಾಗೇಶ ತಳವಾರ, ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಚಿಮಣಿ ಬೆಳಕಿನ ಬದುಕು ಕೃತಿಯ ಮೂಲಕ ನಾಟಕಕಾರರಾಗಿ ಹೊರಹೊಮ್ಮಿದ್ದಾರೆ ಎಂದು ಹಿರಿಯ ಕಥೆಗಾರ ಡಾ.ಚನ್ನಪ್ಪ ಕಟ್ಟಿ ಹೇಳಿದರು.
ಮೈಸೂರು ಜಿಲ್ಲಾ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ಸಿಂದಗಿಯ ಮಾಧ್ಯಮರಂಗ ಫೌಂಡೇಶನ್, ಮೈಸೂರಿನ ಸ್ವಜನ್ಯ ಕಲಾ ವೇದಿಕೆ ಜಂಟಿಯಾಗಿ, ಫೆ.೧೦ರಂದು ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಿವೆ. ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಆರ್ ಗಂಗಾಧರ್ ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕಿ ವಿಜಯಲಕ್ಷ್ಮಿ ಕರಿಕಲ್ ‘ಚಿಮಣಿ ಬೆಳಕಿನ ಬದುಕು’ ಕೃತಿ ಕುರಿತು ಮಾತನಾಡಲಿದ್ದಾರೆ. ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಅಧ್ಯಕ್ಷತೆ ವಹಿಸಿಕೊಳ್ಳುತ್ತಿದ್ದಾರೆ ಎಂದು ಮಾಧ್ಯಮರಂಗ ಪೌಂಡೇಶನ್ ಅಧ್ಯಕ್ಷ ನಾಗೇಶ ತಳವಾರ ಹೇಳಿದರು.
Subscribe to Updates
Get the latest creative news from FooBar about art, design and business.
Related Posts
Add A Comment

